ETV Bharat / state

ಶಾಸಕರು-ಸಂಸದರ ವಿರುದ್ಧ ಬಾಕಿ ಇರುವ ಕ್ರಿಮಿನಲ್ ಪ್ರಕರಣಗಳೆಷ್ಟು? ಆರೋಪಗಳೇನು?: ಇಲ್ಲಿದೆ ಮಾಹಿತಿ - ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್

ವಿಶೇಷ ನ್ಯಾಯಾಲಯದಲ್ಲಿಯೂ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳು ಶೀಘ್ರವಾಗಿ ಇತ್ಯರ್ಥವಾಗುತ್ತಿಲ್ಲ ಎಂಬ ಹಿನ್ನೆಲೆಯಲ್ಲಿ ಸುಪ್ರೀಂಕೋರ್ಟ್ ಎಲ್ಲ ಹೈಕೋರ್ಟ್​ಗಳಿಗೆ ಮೇಲ್ವಿಚಾರಣೆ ನಡೆಸಲು ಸೂಚಿಸಿದೆ..

Highcourt
ಹೈಕೋರ್ಟ್​​
author img

By

Published : Nov 10, 2020, 5:14 PM IST

ಬೆಂಗಳೂರು : 'ರೂಲ್ ಮೇಕರ್ಸ್ ಆರ್ ದ ರೂಲ್ ಬ್ರೇಕರ್ಸ್' ಇದು ಪ್ರಸಿದ್ಧ ನಾಣ್ಣುಡಿ.. ಇದಕ್ಕೆ ನಮ್ಮ ರಾಜ್ಯವೂ ಹೊರತಾಗಿಲ್ಲ. ರಾಜ್ಯದ ಹಲವು ಜನಪ್ರತಿನಿಧಿಗಳು ಕೂಡ ಕಾನೂನು ಉಲ್ಲಂಘಿಸಿದ ಆರೋಪಕ್ಕೆ ಸಿಲುಕಿದ್ದು, ಅವರ ವಿರುದ್ಧ ಹಲವು ಪ್ರಕರಣ ದಾಖಲಾಗಿವೆ. ಈ ಪ್ರಕರಣಗಳನ್ನು ಶೀಘ್ರ ಇತ್ಯರ್ಥಪಡಿಸಲು ನ್ಯಾಯಾಂಗ ಮುಂದಾಗಿದೆ.

ಸಂಸದರು, ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣಗಳನ್ನು ಅನಗತ್ಯ ಮುಂದೂಡಿಕೊಂಡು ಬರಲಾಗುತ್ತಿದೆ ಎಂಬ ಆರೋಪ ಹಿಂದಿನಿಂದಲೂ ಇದೆ. ಈ ಹಿನ್ನೆಲೆ ಸುಪ್ರೀಂಕೋರ್ಟ್ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳನ್ನು ತ್ವರಿತ ಇತ್ಯರ್ಥಪಡಿಸಲು ನೀಡಿದ ಆದೇಶದಂತೆ ಎಲ್ಲ ರಾಜ್ಯಗಳಲ್ಲಿಯೂ 'ಶಾಸಕರು ಮತ್ತು ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣಾ ವಿಶೇಷ ನ್ಯಾಯಾಲಯ' ಸ್ಥಾಪಿಸಲಾಗಿದೆ. ಅದರಂತೆ ರಾಜ್ಯದಲ್ಲಿ ಒಂದು ವಿಶೇಷ ನ್ಯಾಯಾಲಯವನ್ನು ಬೆಂಗಳೂರಿನ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿ ಸ್ಥಾಪಿಸಲಾಗಿದೆ.

ಹೈಕೋರ್ಟ್ ಮೇಲ್ವಿಚಾರಣೆ : ವಿಶೇಷ ನ್ಯಾಯಾಲಯದಲ್ಲಿಯೂ ಜನಪ್ರತಿನಿಧಿಗಳ ವಿರುದ್ಧದ ಕ್ರಿಮಿನಲ್ ಪ್ರಕರಣಗಳು ಶೀಘ್ರ ಇತ್ಯರ್ಥವಾಗುತ್ತಿಲ್ಲ ಎಂಬ ಹಿನ್ನೆಲೆ ಸುಪ್ರೀಂಕೋರ್ಟ್ ಎಲ್ಲ ಹೈಕೋರ್ಟ್​ಗಳಿಗೆ ಮೇಲ್ವಿಚಾರಣೆ ನಡೆಸಲು ಸೂಚಿಸಿದೆ. ಅದರಂತೆ ರಾಜ್ಯ ಹೈಕೋರ್ಟ್ ಸೆಪ್ಟೆಂಬರ್ 21ರಂದು ಸ್ವಯಂಪ್ರೇರಿತ ಸಾರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿಕೊಂಡಿದ್ದು, ವಿಶೇಷ ನ್ಯಾಯಾಲಯದಲ್ಲಿ ಬಾಕಿ ಉಳಿದಿರುವ ಪ್ರಕರಣಗಳನ್ನು ಹೇಗೆ ಶೀಘ್ರವಾಗಿ ಇತ್ಯರ್ಥಪಡಿಸಬಹುದು ಎಂಬ ಬಗ್ಗೆ ವಿಚಾರಣೆ ನಡೆಸುತ್ತಿದೆ.

ಈ ನಿಟ್ಟಿನಲ್ಲಿ ಹೈಕೋರ್ಟ್​​ಗೆ ಸಹಾಯ ನೀಡಲು ಅಮಿಕಸ್ ಕ್ಯೂರಿ ಆಗಿ ಹಿರಿಯ ವಕೀಲ ಆದಿತ್ಯ ಸೋಂಧಿ ಅವರನ್ನು ನೇಮಿಸಿದ್ದು, ರಾಜ್ಯ ಸರ್ಕಾರದ ಪರ ಅಡ್ವೋಕೇಟ್ ಜನರಲ್ ವಾದಿಸುತ್ತಿದ್ದಾರೆ. ಸುಪ್ರೀಂಕೋರ್ಟ್ ಸೂಚನೆಯಂತೆ ಪ್ರಕರಣಗಳ ವಸ್ತುಸ್ಥಿತಿ ಪರಿಶೀಲಿಸುವ ಹಾಗೂ ತ್ವರಿತವಾಗಿ ಇತ್ಯರ್ಥಪಡಿಸುವ ನಿಟ್ಟಿನಲ್ಲಿ ಮುಖ್ಯ ನ್ಯಾಯಮೂರ್ತಿಗಳು ಪ್ರಕರಣಗಳ ಮೇಲ್ವಿಚಾರಣೆ ನಡೆಸಲಿದ್ದಾರೆ.

how-many-pending-criminal-cases-against-mlas
ಹೈಕೋರ್ಟ್​ ಪರಿಶೀಲಿಸುವ ಅಂಶಗಳು

ಜನಪ್ರತಿನಿಧಿಗಳ ವಿರುದ್ಧ ದಾಖಲಾಗಿರುವ ಪ್ರಕರಣಗಳು : ರಾಜ್ಯದಲ್ಲಿನ ಶಾಸಕರು, ಸಂಸದರು ಹಾಗೂ ಎಂಎಲ್​​ಸಿಗಳ ವಿರುದ್ಧ ಒಟ್ಟು 162 ಕ್ರಿಮಿನಲ್ ಪ್ರಕರಣ ದಾಖಲಾಗಿವೆ. ಭ್ರಷ್ಟಾಚಾರ, ಅಕ್ರಮ ಹಣ ವರ್ಗಾವಣೆ, ಚುನಾವಣಾ ಅಕ್ರಮ, ವಂಚನೆ, ಗುಂಪು ಘರ್ಷಣೆ, ಹಲ್ಲೆ, ಕೊಲೆ ಬೆದರಿಕೆ ಸೇರಿದಂತೆ ಹಲವು ಆರೋಪಗಳ ಅಡಿ ಪ್ರಕರಣಗಳನ್ನು ದಾಖಲಿಸಲಾಗಿದೆ.

ಈ ಸಂಬಂಧ ಸಿಬಿಐ, ಇಡಿ, ಐಟಿ, ಎಸಿಬಿ, ಲೋಕಾಯುಕ್ತ ಹಾಗೂ ಸ್ಥಳೀಯ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ದಾಖಲಾಗಿರುವ 162 ಪ್ರಕರಣಗಳಲ್ಲಿ 36 ಪ್ರಕರಣಗಳಿಗೆ ಹೈಕೋರ್ಟ್​​​ನ ಪೀಠಗಳು ಮೆರಿಟ್ಸ್ ಆಧಾರದಲ್ಲಿ ತಡೆಯಾಜ್ಞೆ ನೀಡಿವೆ.

ಈ ಹಿನ್ನೆಲೆ ತಡೆಯಾಜ್ಞೆ ನೀಡಿರುವ ಪ್ರಕರಣಗಳ ವಿವರ ಹಾಗೂ ಜನಪ್ರತಿನಿಧಿಗಳ ವಿರುದ್ದ ಜಿಲ್ಲಾವಾರು ದಾಖಲಿಸಿರುವ ಪ್ರಕರಣಗಳು ಹಾಗೂ ಈ ಸಂಬಂಧ ತನಿಖೆ ನಡೆಸುತ್ತಿರುವ ತನಿಖಾ ಸಂಸ್ಥೆಗಳ ವಿವರಗಳನ್ನು ನೀಡುವಂತೆ ಹೈಕೋರ್ಟ್ ಸೂಚಿಸಿದೆ. ಇನ್ನು, ಹೈಕೋರ್ಟ್ ಸೂಚನೆಯಂತೆ ರಾಜ್ಯ ಸರ್ಕಾರ ಅಪರಾಧ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕರನ್ನು ನೋಡಲ್ ಅಧಿಕಾರಿಯಾಗಿ ನೇಮಿಸಿದೆ.

ಜನಪ್ರತಿನಿಧಿಗಳ ಮೇಲಿರುವ ಪ್ರಕರಣಗಳ ಪಟ್ಟಿ ಹೀಗಿವೆ

ಎಜಿ ಹಾಗೂ ಎಎಜಿಗೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿ ಒದಗಿಸಿಕೊಡುವ, ಪ್ರಕರಣಗಳಿಗೆ ಸಂಬಂಧಿಸಿದ ಸಾಕ್ಷಿಗಳಿಗೆ ಸಮನ್ಸ್ ಜಾರಿ ಮಾಡಲು ಮತ್ತು ಅವರನ್ನು ಹಾಜರುಪಡಿಸಲು ಈ ಅಧಿಕಾರಿ ನೆರವು ನೀಡಲಿದ್ದಾರೆ. ಅಂತೆಯೇ, ಸಾಕ್ಷಿಗಳ ವಿಚಾರಣೆಗೆ ಸುರಕ್ಷಿತ ಮತ್ತು ಸುಸಜ್ಜಿತ ಪ್ರತ್ಯೇಕ ಕೊಠಡಿಯನ್ನು ವಿಶೇಷ ನ್ಯಾಯಾಲಯದ ಆವರಣದಲ್ಲಿ ಸ್ಥಾಪಿಸುವ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಲಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.