ETV Bharat / state

ಯಶಸ್ವಿನಿ ಯೋಜನೆಯಡಿ ನೋಂದಣಿಯಾದ ಸದಸ್ಯರ ಸಂಖ್ಯೆ ಎಷ್ಟು..? ಸರ್ಕಾರದ ಮಾರ್ಗಸೂಚಿಯಲ್ಲೇನಿದೆ..? - ​ ETV Bharat Karnataka

ರಾಜ್ಯದ ರೈತರು, ಬಡವರು, ಆರ್ಥಿಕ ದುರ್ಬಲರಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ ಸಿಗಬೇಕು ಎಂಬ ದೃಷ್ಟಿಯಿಂದ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು 2002ರಲ್ಲಿ ಅಂದಿನ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಆರಂಭಿಸಿದ್ದರು.

ಯಶಸ್ವಿನಿ ಯೋಜನೆ
ಯಶಸ್ವಿನಿ ಯೋಜನೆ
author img

By ETV Bharat Karnataka Team

Published : Dec 18, 2023, 5:47 PM IST

ಬೆಂಗಳೂರು : ರಾಜ್ಯದಲ್ಲಿ ಇದುವರೆಗೂ ಯಶಸ್ವಿನಿ ಯೋಜನೆಯಡಿ ಸಹಕಾರ ಸಂಘಗಳ 48.24 ಲಕ್ಷ ಸದಸ್ಯರು ನೋಂದಣಿ ಮಾಡಿಸಿಕೊಂಡಿದ್ದಾರೆ. ಗ್ರಾಮೀಣ ಭಾಗದಲ್ಲಿ 44,35,202 ಸದಸ್ಯರು ನೋಂದಣಿಯಾಗಿದ್ದು, ಇದರಲ್ಲಿ 12,14,472 ಮಂದಿಗೆ ಕಾರ್ಡ್ ವಿತರಿಸಲಾಗಿದೆ. ನಗರ ಪ್ರದೇಶದಲ್ಲಿ 3,89,467 ಸದಸ್ಯರು ನೋಂದಣಿಯಾಗಿದ್ದು, ಇದರಲ್ಲಿ1,15,193 ಮಂದಿಗೆ ಕಾರ್ಡ್ ವಿತರಿಸಲಾಗಿದೆ. ಒಟ್ಟಾರೆ ಯಶಸ್ವಿನಿ ಕಾರ್ಡ್ ವಿತರಣೆಯ ಪ್ರಮಾಣ ಶೇ.27 ರಷ್ಟಾಗಿದ್ದು, 13,21,665 ಮಂದಿಗೆ ಮಾತ್ರ ಕಾರ್ಡ್‍ಗಳನ್ನು ತಲುಪಿಸಲಾಗಿದೆ ಎಂದು ಇಲಾಖೆ ತಿಳಿಸಿದೆ.

ಜಿಲ್ಲಾ ಹಾಲು ಒಕ್ಕೂಟಗಳ ಸಹಯೋಗದೊಂದಿಗೆ ಯೋಜನೆಯ ಶಿಬಿರಗಳನ್ನು ಆಯೋಜಿಸಿ ಹಾಲು ಉತ್ಪಾದಕರ ಸಹಕಾರ ಸಂಘಗಳ ಕಾರ್ಯಾಧ್ಯಕ್ಷರ ಸಭೆ ನಡೆಸಿ ಹೆಚ್ಚಿನ ಸದಸ್ಯರನ್ನು ನೋಂದಾಯಿಸಲು ಕ್ರಮ ವಹಿಸಲಾಗುತ್ತಿದೆ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ತಿಳಿಸಿದ್ದಾರೆ.

ರಾಜ್ಯದ ರೈತರು, ಬಡವರು, ಆರ್ಥಿಕ ದುರ್ಬಲರಿಗೆ ಕೈಗೆಟುಕುವ ದರದಲ್ಲಿ ಆರೋಗ್ಯ ಸೇವೆ ಸಿಗಬೇಕು ಎಂಬ ದೃಷ್ಟಿಯಿಂದ ಯಶಸ್ವಿನಿ ಆರೋಗ್ಯ ವಿಮಾ ಯೋಜನೆಯನ್ನು 2002ರಲ್ಲಿ ಅಂದಿನ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಆರಂಭಿಸಿದ್ದರು. ಬಳಿಕ 2003-04 ರಿಂದ 2017018 ರವರೆಗೆ ಜಾರಿಯಲ್ಲಿತ್ತು. ನಂತರ ಆರೋಗ್ಯ ಮ್ತು ಕುಟುಂಬ ಕಲ್ಯಾಣ ಇಲಾಖೆಗೆ ವರ್ಗಾವಣೆಗೊಂಡಿತ್ತು. 2018 ಮೇ 31 ರಿಂದ ಈ ಯೋಜನೆ ಸ್ಥಗಿತಗೊಂಡಿತ್ತು. ನಂತರ ಆರೋಗ್ಯ ಕರ್ನಾಟಕ ಯೋಜನೆಯೊಂದಿಗೆ ಅದು ವಿಲೀನಗೊಂಡಿದೆ.

ಯಶಸ್ವಿನಿ ಯೋಜನೆ ಸಹಕಾರ ಸಂಘಗಳ ಸದಸ್ಯರ ಅನುಕೂಲಕ್ಕಾಗಿ ಜಾರಿಗೊಂಡಿರುವ ವಿಶೇಷ ಯೋಜನೆಯಾಗಿದ್ದು, ಇದರಲ್ಲಿ ಫಲಾನುಭವಿ ಕುಟುಂಬಕ್ಕೆ ವಾರ್ಷಿಕ ವೈದ್ಯಕೀಯ ಚಿಕಿತ್ಸಾ ವೆಚ್ಚದ ಗರಿಷ್ಠ ಮಿತಿ 5 ಲಕ್ಷಕ್ಕೆ ನಿಗದಿಪಡಿಸಿದೆ. ರಾಜ್ಯದ ಯಾವುದೇ ಯಶಸ್ವಿನಿ ನೆಟ್ ವರ್ಕ್ ಆಸ್ಪತ್ರೆಯಲ್ಲಿ ನಗದು ರಹಿತ ಚಿಕಿತ್ಸೆ ಪಡೆಯಲು ಅವಕಾಶವಿದೆ.

ಮಾರ್ಗಸೂಚಿಗಳೇನು? :

  • ಕರ್ನಾಟಕ ಸಹಕಾರ ಸಂಘಗಳ ಕಾಯ್ದೆ 1959 ರಡಿ ಅಥವಾ ಕರ್ನಾಟಕ ಸೌಹಾರ್ದ ಸಹಕಾರಿಗಳ ಕಾಯ್ದೆ 1997ರ ಅಡಿ ಅಥವಾ ಬಹು ರಾಜ್ಯ ಸಹಕಾರಿ ಸಂಘಗಳ ಕಾಯ್ದೆ 2002 ರಡಿ ನೋಂದಾಯಿಸಿ, ಕಾರ್ಯನಿರ್ವಹಿಸುತ್ತಿರುವ ಯಾವುದೇ ಸಹಕಾರ ಸಂಘದ ಸದಸ್ಯರು ಮತ್ತು ಅವರ ಕುಟುಂಬವರ್ಗದವರಿಗೆ ಯಶಸ್ವಿನಿ ಯೋಜನೆ ಅನ್ವಯಿಸುತ್ತದೆ.
  • ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕುಗಳ ಹಾಗೂ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ವತಿಯಿಂದ ಸಂಘಟಿಸಲ್ಪಟ್ಟಿರುವ ಎಲ್ಲಾ ಗ್ರಾಮೀಣ ಸ್ವ-ಸಹಾಯ ಗುಂಪುಗಳ ಸದಸ್ಯರು ಹಾಗೂ ಅವರ ಕುಟುಂಬ ವರ್ಗದವರಿಗೂ ಈ ಯೋಜನೆ ಅನ್ವಯಿಸುತ್ತದೆ.
  • ರಾಜ್ಯದ ಯಾವುದೇ ಸಹಕಾರ ಸಂಘ/ಗ್ರಾಮೀಣ ಸ್ವ-ಸಹಾಯ ಗುಂಪಿನಲ್ಲಿ ಕುಟುಂಬದ ಒಬ್ಬ ವ್ಯಕ್ತಿ ಸದಸ್ಯನಾಗಿ ಮೂರು ತಿಂಗಳು ಗತಿಸಿದ್ದಲ್ಲಿ ಅವರ ಕುಟುಂಬವನ್ನು ಒಂದು ಘಟಕವನ್ನಾಗಿ ಪರಿಗಣಿಸಿ ವಾರ್ಷಿಕ ವಂತಿಗೆ ಪಾವತಿಸಿ ಯಶಸ್ವಿನಿ ಯೋಜನೆ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಕುಟುಂಬ ಎಂದರೆ ಪ್ರಧಾನ ಅರ್ಜಿದಾರರ ತಂದೆ, ತಾಯಿ, ಗಂಡ/ ಹೆಂಡತಿ, ಗಂಡು ಮಕ್ಕಳು, ಮದುವೆಯಾಗದ ಹೆಣ್ಣು ಮಕ್ಕಳು, ಸೊಸೆಯಂದಿರು ಮತ್ತು ಮೊಮ್ಮಕ್ಕಳು ಅರ್ಹತೆ ಹೊಂದಿದ್ದಾರೆ.

ಪಾವತಿಸಬೇಕಾದ ಶುಲ್ಕ : ಗ್ರಾಮೀಣ ಸಹಕಾರ ಸಂಘಗಳ/ಸ್ವ-ಸಹಾಯ ಗುಂಪುಗಳ ಗರಿಷ್ಠ ನಾಲ್ಕು ಸದಸ್ಯರ ಕುಟುಂಬ ಒಂದಕ್ಕೆ ವಾರ್ಷಿಕ 500 ರೂ. ವಂತಿಗೆ ಮತ್ತು ನಾಲ್ಕಕ್ಕಿಂತ ಹೆಚ್ಚಿನ ಸದಸ್ಯರುಳ್ಳ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ಶೇ.20 ರಷ್ಟು ಹೆಚ್ಚುವರಿಯಾಗಿ ಅಂದರೆ ಪ್ರತಿ ಹೆಚ್ಚುವರಿ ಸದಸ್ಯರಿಗೆ 100 ರೂ. ಗಳನ್ನು ಪಾವತಿಸಬೇಕು. ನಗರ ಸಹಕಾರ ಸಂಘಗಳ ಗರಿಷ್ಠ ನಾಲ್ಕು ಸದಸ್ಯರ ಕುಟುಂಬ ಒಂದಕ್ಕೆ ವಾರ್ಷಿಕ 1000 ರೂ.ಗಳ ವಂತಿಗೆ ಮತ್ತು ನಾಲ್ಕಕ್ಕಿಂತ ಹೆಚ್ಚಿನ ಸದಸ್ಯರುಳ್ಳ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೆ ಶೇ.20 ರಷ್ಟು ಹೆಚ್ಚುವರಿಯಾಗಿ ಅಂದರೆ ಪ್ರತಿ ಹೆಚ್ಚುವರಿ ಸದಸ್ಯರಿಗೆ 200 ರೂ. ಪಾವತಿಸಬೇಕು.

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಸದಸ್ಯರಿಗೆ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ಸಹಾಯಧನ ನೀಡುವ ಮೂಲಕ ಅವರ ವಾರ್ಷಿಕ ಸದಸ್ಯತ್ವದ ವಂತಿಗೆಯನ್ನು ಸರ್ಕಾರವೇ ಭರಿಸುತ್ತದೆ. ಸಹಕಾರಿ ಮೀನುಗಾರರು, ಸಹಕಾರಿ ಬೀಡಿ ಕಾರ್ಮಿಕರು ಹಾಗೂ ಸಹಕಾರಿ ನೇಕಾರರು ಕೂಡ ಈ ಯೋಜನೆಯ ಸೌಲಭ್ಯ ಪಡೆಯಲು ಅರ್ಹರಾಗಿದ್ದಾರೆ. 2022-23 ನೇ ಯಶಸ್ವಿನಿ ಯೋಜನೆಯ ಅವಧಿ 2023 ಜನವರಿ 1 ರಿಂದ 2023 ಡಿ.31 ರವರೆಗೆ ಜಾರಿಯಲ್ಲಿರುತ್ತದೆ. ಯಶಸ್ವಿನಿ ಯೋಜನೆಯಡಿ ನೋಂದಾಯಿತ ಸದಸ್ಯರು ಈ ಕಾರ್ಡ್ ನ್ನು ಬಳಸಿ ನಗದು ರಹಿತ ಚಿಕಿತ್ಸೆಗಳನ್ನು ಪಡೆಯಬಹುದಾಗಿದೆ.

ಯಶಸ್ವಿನಿ ಯೋಜನೆಯಡಿ ಮುಖ್ಯವಾಗಿ ಹೃದಯಕ್ಕೆ ಸಂಬಂಧಿಸಿದ ರೋಗಗಳು ಕಿವಿ, ಮೂಗು, ಗಂಟಲು ವ್ಯಾದಿಗಳು, ಕರುಳಿನ ಖಾಯಿಲೆಗಳು, ನರಗಳಿಗೆ ಸಂಬಂಧಿಸಿದ ಖಾಯಿಲೆಗಳು, ಕಣ್ಣಿನ ಖಾಯಿಲೆಗಳು, ಮೂಳೆ ರೋಗಗಳು, ಸ್ತ್ರೀಯರಿಗೆ ಸಂಬಂಧಿಸಿದ ಖಾಯಿಲೆಗಳು ಹಾಗೂ ಈ ಯೋಜನೆಯಡಿ ಇತರೆ ಅನುಸೂಚಿತ ಸಾಮಾನ್ಯ ರೋಗಿಗಳಿಗೆ ಸಂಬಂಧಿಸಿದ ಚಿಕಿತ್ಸಾ ಸೌಲಭ್ಯಗಳನ್ನು ರಾಜ್ಯದ ಯಶಸ್ವಿನಿ ನೆಟ್ ವರ್ಕ್ ಆಸ್ಪತ್ರೆಗಳಲ್ಲಿ ಕಲ್ಪಿಸಲಾಗಿದೆ.

ಇದನ್ನೂ ಓದಿ : 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ, ಕೊರೊನಾ ರೂಪಾಂತರಿ ಬಗ್ಗೆ ಆತಂಕ ಬೇಡ: ದಿನೇಶ್ ಗುಂಡೂರಾವ್​

ETV Bharat Logo

Copyright © 2025 Ushodaya Enterprises Pvt. Ltd., All Rights Reserved.