ನವದೆಹಲಿ/ಬೆಂಗಳೂರು: ಕಾಂಗ್ರೆಸ್ನಲ್ಲಿ ಎಷ್ಟು ಜನ ರೌಡಿಶೀಟರ್‌ಗಳಿದ್ದಾರೆ ಎಂದು ಲೆಕ್ಕ ಹಾಕಲಿ ಎನ್ನುತ್ತಾ ರೌಡಿಶೀಟರ್ ಆಯೋಜಿಸಿದ್ದ ರಕ್ತದಾನ ಶಿಬಿರದಲ್ಲಿ ಬಿಜೆಪಿ ನಾಯಕರು ಪಾಲ್ಗೊಂಡಿದ್ದನ್ನು ಟೀಕಿಸಿದ್ದ ಕಾಂಗ್ರೆಸ್ ನಾಯಕರ ಮೇಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹರಿಹಾಯ್ದರು.
ನವದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಸೈಲೆಂಟ್ ಸುನೀಲ್ ಜೊತೆಗೆ ಬಿಜೆಪಿ ನಾಯಕರು ವೇದಿಕೆ ಹಂಚಿಕೊಂಡ ವಿಚಾರದ ಬಗ್ಗೆ ಹೆಚ್ಚಿನ ಚರ್ಚೆ ನಡೆಯುತ್ತಿದೆ. ಆದರೆ ಈಗಾಗಲೇ ಆ ಬಗ್ಗೆ ನಮ್ಮ ನಾಯಕರೆಲ್ಲಾ ಸ್ಪಷ್ಟೀಕರಣ ನೀಡಿದ್ದಾರೆ. ಕಾಂಗ್ರೆಸ್ ರಾಜಕೀಯ ಕಾರಣಕ್ಕಾಗಿ ಬಿಜೆಪಿ ವಿರುದ್ಧ ಟೀಕೆ ಮಾಡುತ್ತಿದೆ. ನಮ್ಮ ವಿರುದ್ಧ ಟೀಕೆ ಮಾಡುವ ನೀವು ನಿಮ್ಮ ಪಕ್ಷದಲ್ಲಿರುವ ರೌಡಿ ಶೀಟರ್ಗಳ ಲೆಕ್ಕ ಹಾಕಿ ಎಂದರು.
ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ ಅವರ ಭೇಟಿಗೆ ಸಮಯ ಕೇಳಿದ್ದು, ನಾಳೆ ಸಮಯ ದೊರೆಯುವ ವಿಶ್ವಾಸವಿದೆ. ಕೇಂದ್ರ ಸಚಿವರಾದ ಗಜೇಂದ್ರ ಸಿಂಗ್ ಶೇಖಾವತ್, ಭೂಪೇಂದ್ರ ಯಾದವ್ ಮತ್ತು ರಾಜನಾಥ್ ಸಿಂಗ್ ಅವರನ್ನು ಭೇಟಿ ಮಾಡಲಿದ್ದೇನೆ. ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಜೊತೆಗೆ ಮೇಕೆದಾಟು, ಭದ್ರಾ ಮೇಲ್ಡಂಡೆ ಯೋಜನೆ, ಮಹದಾಯಿ ಬಗ್ಗೆ ಚರ್ಚೆ ಮಾಡಲಿರುವುದಾಗಿ ತಿಳಿಸಿದರು.
ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರನ್ನು ಸಂಗೊಳ್ಳಿ ರಾಯಣ್ಣ ಸೈನಿಕ ಶಾಲೆ ಉದ್ಘಾಟನೆಗೆ ಆಹ್ವಾನಿಸಲಾಗುವುದು ಹಾಗೂ ಭೂಪೇಂದ್ರ ಯಾದವ್ ಅವರೊಂದಿಗೆ ಪರಿಸರ ಸಂಬಂಧಿ ಯೋಜನೆಗಳ ಬಗ್ಗೆ ಚರ್ಚಿಸುವುದಾಗಿ ಮುಖ್ಯಮಂತ್ರಿಗಳು ಮಾಹಿತಿ ನೀಡಿದರು.
ಇದನ್ನೂ ಓದಿ:'ಸೈಲೆಂಟ್ ಸುನೀಲ್ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದು, ಫೈಟರ್ ರವಿ ಬಿಜೆಪಿ ಸೇರಿದ್ದು ತಪ್ಪಲ್ಲ'ಗ್ ನೀಡಿದರು.