ಬೆಂಗಳೂರು : ಮದ್ಯ ಮಾರಾಟಕ್ಕೆ ಅವಕಾಶ ನೀಡಿದ ಬೆನ್ನಲ್ಲೇ ಅಬಕಾರಿ ಇಲಾಖೆಯಲ್ಲಿ ಭಾರೀ ಬದಲಾವಣೆ ಮಾಡಲಾಗಿದೆ. ಇಲಾಖೆಯನ್ನು ಮರು ವಿನ್ಯಾಸಗೊಳಿಸಿ ಅಧಿಕಾರಿಗಳ ಸ್ಥಳ ನಿಯುಕ್ತಿ ಹಾಗೂ ವರ್ಗಾವಣೆ ಮಾಡಲಾಗಿದೆ.
![Huge change in the excise department after the sale of liquor](https://etvbharatimages.akamaized.net/etvbharat/prod-images/kn-bng-02-excise-department-officers-transfer-script-7208083_09052020153428_0905f_1589018668_248.jpg)
11 ಮಂದಿ ಅಬಕಾರಿ ಉಪ ಆಯುಕ್ತರನ್ನು ವರ್ಗಾವಣೆ ಮಾಡಿ ಆದೇಶಿಸಲಾಗಿದೆ. ಅದೇ ರೀತಿ, 15 ಮಂದಿ ಅಬಕಾರಿ ಉಪ ಅಧೀಕ್ಷಕರಿಗೆ ಸ್ಥಳ ನಿಯುಕ್ತಿಗೊಳಿಸಿ ಆದೇಶ ಹೊರಡಿಸಲಾಗಿದೆ. ಮೂರು ಮಂದಿ ಅಬಕಾರಿ ಅಧೀಕ್ಷಕರುಗಳನ್ನು ವರ್ಗಾವಣೆ ಮಾಡಲಾಗಿದ್ದು, 14 ಮಂದಿ ಉಪ ನಿರೀಕ್ಷಕರನ್ನು ಸ್ಥಳ ನಿಯುಕ್ತಿಗೊಳಿಸಲಾಗಿದೆ. 27 ಮಂದಿ ಅಬಕಾರಿ ನಿರೀಕ್ಷಕರನ್ನು ವರ್ಗಾವಣೆ ಮಾಡಲಾಗಿದೆ.
ಇಲಾಖೆಯನ್ನು ಮರು ವಿನ್ಯಾಸಗೊಳಿಸಿದ ನಂತರ 61 ಅಬಕಾರಿ ನಿರೀಕ್ಷಕರನ್ನು ಸ್ಥಳ ನಿಯುಕ್ತಿಗೊಳಿಸಲಾಗಿದೆ. ಇವರಿಂದ ತೆರವಾದ ಖಾಲಿ ಹುದ್ದೆಗಳಿಗೆ ಅಬಕಾರಿ ನಿರೀಕ್ಷಕರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.