ಆನೇಕಲ್: ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ ನಂತರ ಪತಿ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಆನೇಕಲ್ ತಾಲೂಕಿನ ಸರ್ಜಾಪುರ ಸಮೀಪದ ಬಿಕ್ಕನಹಳ್ಳಿಯ ಜನತಾ ಕಾಲೊನಿಯಲ್ಲಿ ನಡೆದಿದೆ. ಲಕ್ಷ್ಮಮ್ಮ (47) ಪತಿಯಿಂದಲೇ ದಾರುಣವಾಗಿ ಕೊಲೆಯಾದ ಮಹಿಳೆ. ವೆಂಕಟಸ್ವಾಮಿ(53) ಪತ್ನಿಯನ್ನ ಕೊಲೆ ಮಾಡಿ, ಆತ್ಮಹತ್ಯೆ ಮಾಡಿಕೊಂಡ ಪತಿ.
ಇನ್ನೂ ಇಬ್ಬರು ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಅಷ್ಟೇ ಅಲ್ಲ ಈ ದಂಪತಿ ಇಬ್ಬರು ಹೆಣ್ಣು ಮಕ್ಕಳನ್ನು ಮದುವೆ ಮಾಡಿಕೊಟ್ಟಿದ್ದರು. ರಾತ್ರಿ ಕ್ಷುಲ್ಲಕ ಕಾರಣಕ್ಕೆ ಇಬ್ಬರ ನಡುವೆ ಗಲಾಟೆ ನಡೆದಿದೆ. ಈ ವೇಳೆ, ಮನೆಯಲ್ಲಿದ್ದ ಮಚ್ಚಿನಿಂದ ಪತ್ನಿಯನ್ನು ಬರ್ಬರವಾಗಿ ಕೊಚ್ಚಿ ಪತಿ ಕೊಲೆ ಮಾಡಿದ್ದಾನೆ. ಬಳಿಕ ವಿಷ ಸೇವಿಸಿ ತಾನು ಕೂಡ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಳಗ್ಗೆ ಅಕ್ಕಪಕ್ಕದ ಮನೆಯ ನಿವಾಸಿಗಳು ನೋಡಿ ಪೊಲೀಸರಿಗೆ ಮಾಹಿತಿ ರವಾನೆ ಮಾಡಿದ್ದಾರೆ. ಸ್ಥಳಕ್ಕೆ ಸರ್ಜಾಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಪತ್ನಿ ಗುಪ್ತಾಂಗಕ್ಕೆ ಪತಿಯಿಂದ ಹಲ್ಲೆ: ಪತ್ನಿಯ ಶಿಲ ಶಂಕಿಸಿ ಜಗಳವಾಡಿದ ಪತಿಯೋರ್ವ ಹೆಂಡತಿಯ ಗುಪ್ತಾಂಗಕ್ಕೆ ಮನಸೋಇಚ್ಛೆ ಕ್ರಿಕೆಟ್ ವಿಕೆಟ್ನಿಂದ ಹಲ್ಲೆ ನಡೆಸಿದ್ದ ಘಟನೆ ಇತ್ತೀಚೆಗೆ ಚಿತ್ರದುರ್ಗದಲ್ಲಿ ನಡೆದಿತ್ತು. ತೀವ್ರವಾಗಿ ಗಾಯಗೊಂಡಿರುವ ಪತ್ನಿ ದಾವಣಗೆರೆಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಆರೋಗ್ಯ ಇಲಾಖೆಯಲ್ಲಿ ಫಾರ್ಮಾಸಿಸ್ಟ್ ಆಗಿ ಕೆಲ ಮಾಡುತ್ತಿರುವ ಪತಿ ಸೈಕೋ ರೀತಿ ವರ್ತಿಸುತ್ತಿದ್ದು, ಹೆಂಡತಿ ಮೇಲೆ ಅಮಾನವೀಯವಾಗಿ ಹಲ್ಲೆ ಮಾಡಿದ್ದ. ಹಲ್ಲೆ ಮಾಡಿದವನೇ ತಾನು ಮುಗ್ಧ ಎಂದು ಬಿಂಬಿಸಲು ಆತನೂ ಸಾರ್ವಜನಿಕ ಆಸ್ಪತ್ರೆಗೆ ದಾಖಲಾಗಿದ್ದ. ಆದರೆ ಘಟನೆ ಬಗ್ಗೆ ತಿಳಿದು ಸ್ಥಳಕ್ಕೆ ಆಗಮಿಸಿದ್ದ ಪೊಲೀಸರು, ಗಟನೆ ನಡೆದ ಕೆಲವೇ ಗಂಟೆಗಳಲ್ಲಿ ಆರೋಪಿ ಪತಿಯನ್ನು ಬಂಧಿಸಿದ್ದರು.
ದಿನವೂ ಹೆಂಡತಿ ಮೇಲೆ ಅನುಮಾನ ಪಡುತ್ತಿದ್ದ ಪತಿ, ಆ ದಿನ ಹೆಂಡತಿ ಜೊತೆ ಗಲಾಟೆ ಮಾಡಿಕೊಂಡಿದ್ದ. ಗಲಾಟೆ ತಾರಕಕ್ಕೇರಿ, ಹೆಂಡತಿ ಗುಪ್ತಾಂಗಕ್ಕೆ ಮಕ್ಕಳು ಆಟವಾಡುತ್ತಿದ್ದ ಕ್ರಿಕೆಟ್ ವಿಕೆಟ್ನಿಂದ ಅಮಾನವೀಯವಾಗಿ ಹಲ್ಲೆ ನಡೆಸಿದ್ದ. ಹಲ್ಲೆ ನಡೆಸಿದ ಪರಿಣಾಮ ಮನೆ ಗೋಡೆಯೆಲ್ಲಾ ರಕ್ತದ ಕಲೆಗಳು ತುಂಬಿದ್ದವು. ಮಾಹಿತಿ ತಿಳಿದು ಚಳ್ಳಕೆರೆ ಪೊಲೀಸ್ ಠಾಣೆ ಪೊಲೀಸ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ಈ ಸಂಬಂಧ ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಇದನ್ನೂ ಓದಿ: ಪತ್ನಿಯ ಶೀಲ ಶಂಕಿಸಿ ಪತಿಯಿಂದ ವಿಕೃತಿ.. ಹಲ್ಲೆ ಮಾಡಿ ಆಸ್ಪತ್ರೆಗೆ ದಾಖಲಾಗಿದ್ದ ಆರೋಪಿ ಅರೆಸ್ಟ್