ಬೆಂಗಳೂರು : ಮನೆ ಮುಂದೆ ನಿಲ್ಲಿಸಿದ್ದ ಕಾರೊಂದು ಬೆಂಕಿಗಾಹುತಿಯಾಗಿರುವ ಘಟನೆ ಬೆಂಗಳೂರಿನ ಕೋಲ್ಸ್ ಪಾರ್ಕ್ ಬಳಿ ನಡೆದಿದೆ.
ಮನೆ ಮುಂಭಾಗ ನಿಲ್ಲಿಸಿದ್ದ ಕಾರಿಗೆ ಬೆಂಕಿ ಹೊತ್ತಿಕೊಂಡಿತ್ತು. ಇದನ್ನು ಕಂಡ ತಕ್ಷಣ ಅಗ್ನಿಶಾಮಕ ಸಿಬ್ಬಂದಿಗೆ ಕಾರು ಮಾಲೀಕ ಸಿದ್ದಾರ್ಥ್ ವಿಚಾರ ತಿಳಿಸಿದ್ದರು. ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಬರುವಷ್ಟರಲ್ಲಿ ಕಾರು ಸುಟ್ಟು ಕರಕಲಾಗಿದೆ.
ನಿನ್ನೆ ರಾತ್ರಿ ಸುಮಾರು 2 ಘಂಟೆ ಹೊತ್ತಿಗೆ ಈ ಘಟನೆ ನಡೆದಿದ್ದು, ಕಿಡಿಗೇಡಿಗಳು ಬೆಂಕಿ ಇಟ್ಟಿರುವ ಶಂಕೆ ವೈಕ್ತವಾಗಿದೆ. ಭಾರತಿನಗರ ಠಾಣೆಯಲ್ಲಿ ದೂರು ದಾಖಲಾಗಿದೆ. ಪೊಲೀಸರು ಸ್ಥಳದ ಸಿಸಿಟಿವಿ ದೃಶ್ಯ ಕಲೆ ಹಾಕಿ ತನಿಖೆ ಮುಂದುವರಿಸಿದ್ದಾರೆ.