ETV Bharat / state

ಬೆಂಗಳೂರು: ಆರ್‌.ಅಶೋಕ್ ಸೇರಿ ಬಿಜೆಪಿ ನಾಯಕರು ಪೊಲೀಸ್​ ವಶಕ್ಕೆ - ಕರಸೇವಕ ಶ್ರೀಕಾಂತ್‌ ಪೂಜಾರಿ

'ನಾನು ಅಯೋಧ್ಯೆ ಶ್ರೀರಾಮ ಮಂದಿರದ ಕರಸೇವಕ, ನನ್ನನ್ನೂ ಬಂಧಿಸಿ' ಎಂಬ ಬಿಜೆಪಿ ಅಭಿಯಾನದಲ್ಲಿ ಇಂದು ಪ್ರತಿಪಕ್ಷ ನಾಯಕ ಆರ್.ಅಶೋಕ್​ ಪಾಲ್ಗೊಂಡರು.

Protest by BJP leaders
ಬಿಜೆಪಿ ನಾಯಕರಿಂದ ಪ್ರತಿಭಟನೆ
author img

By ETV Bharat Karnataka Team

Published : Jan 5, 2024, 4:37 PM IST

ಬೆಂಗಳೂರು: ಕರಸೇವಕ ಶ್ರೀಕಾಂತ್‌ ಪೂಜಾರಿ ಬಂಧನ ಖಂಡಿಸಿ ಬಿಜೆಪಿ ಕರೆ ನೀಡಿರುವ 'ನಾನೊಬ್ಬ ಕರಸೇವಕ, ನನ್ನನ್ನೂ ಬಂಧಿಸಿ' ಅಭಿಯಾನದಡಿ ಇಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಮುಂಭಾಗದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಪಕ್ಷ ನಾಯಕ ಆರ್.ಅಶೋಕ್ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.

ಕೇಸರಿ ಪಂಚೆ ಉಟ್ಟು, ಚಪ್ಪಲಿ ಹಾಕದೇ ಅಶೋಕ್ ಅಭಿಯಾನ ನಡೆಸಿದ್ದು, "ಕ್ರಿ.ಶ 1992 ಡಿಸೆಂಬರ್ 2ರ ರಾಮಮಂದಿರ ಹೋರಾಟದಲ್ಲಿ ಭಾಗಿಯಾಗಿದ್ದೆ. ನನ್ನನ್ನೂ ಅರೆಸ್ಟ್ ಮಾಡಿ" ಎಂದು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ಮುಂಭಾಗ ಪೋಸ್ಟರ್ ಹಿಡಿದು ಧರಣಿ ನಡೆಸಿದರು. ಆರ್.ಅಶೋಕ್ ಅವರಿಗೆ ಸಂಸದ ಪಿ.ಸಿ.ಮೋಹನ್, ಪರಿಷತ್ ಪ್ರತಿಪಕ್ಷ ಸಚೇತಕ ರವಿಕುಮಾರ್ ಸಾಥ್​ ನೀಡಿದರು. ಇದೇ ವೇಳೆ ಜೈ ಶ್ರೀರಾಮ್ ಘೋಷಣೆ ಕೂಗಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅಶೋಕ್, "ಕರಸೇವಕ ಶ್ರೀಕಾಂತ್‌ ಪೂಜಾರಿ ಬಂಧನಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿ ಸುಳ್ಳು ಹೇಳಿದ್ದು, ನೈತಿಕತೆ ದೃಷ್ಟಿಯಿಂದ ಕೂಡಲೇ ರಾಜೀನಾಮೆ ನೀಡಬೇಕು. ಸಿದ್ದರಾಮಯ್ಯ ಅವರಿಗೆ ಆಡಳಿತದ ಮೇಲೆ ಸಂಪೂರ್ಣ ನಿಯಂತ್ರಣ ಕೈತಪ್ಪಿ, ಕಾಣದ ಕೈಗಳು ದಿಕ್ಕು ತಪ್ಪಿಸುತ್ತಿವೆ. ಇಲ್ಲವೆಂದರೆ ರಾಮ ಮಂದಿರ ಉದ್ಘಾಟನೆ ಸಂದರ್ಭದಲ್ಲಿ ಹಿಂದೂ ಕಾರ್ಯಕರ್ತರನ್ನು ಕೆಣಕಲು ಉದ್ದೇಶಪೂರ್ವಕವಾಗಿ ಈ ಪ್ರಕರಣಕ್ಕೆ ಮರುಜೀವ ನೀಡಲಾಗಿದೆ. ಇವೆರಡರಲ್ಲಿ ಯಾವುದು ಸತ್ಯವಾದರೂ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಸ್ಥಾನದಲ್ಲಿ ಮುಂದುವರಿಯುವ ನೈತಿಕತೆ ಕಳೆದುಕೊಂಡಿದ್ದಾರೆ ಎಂದರ್ಥ. ಆದ್ದರಿಂದ ಕೂಡಲೇ ತಮ್ಮ ತಪ್ಪನ್ನು ಒಪ್ಪಿಕೊಂಡು ಶ್ರೀಕಾಂತ್ ಪೂಜಾರಿ ಅವರನ್ನು ಬಿಡುಗಡೆ ಮಾಡಬೇಕು. ರಾಜ್ಯದ ಜನರಲ್ಲಿ ಕ್ಷಮಾಪಣೆ ಕೋರಿ ರಾಜೀನಾಮೆ ನೀಡಬೇಕು. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ಒಬ್ಬ ಸಮರ್ಥ ಮುಖ್ಯಮಂತ್ರಿಗೆ ದಾರಿ ಮಾಡಿಕೊಡಬೇಕು" ಎಂದು ಆಗ್ರಹಿಸಿದರು.

"ಶ್ರೀಕಾಂತ್ ಪೂಜಾರಿ ಅವರ ಮೇಲೆ ಇದ್ದ 16 ಪ್ರಕರಣಗಳಲ್ಲಿ 15 ಪ್ರಕರಣಗಳು ಈಗಾಗಲೇ ತಾರ್ಕಿಕ ಅಂತ್ಯ ಕಂಡಿದ್ದು, ಬಾಕಿ ಇರುವ ಒಂದು ಪ್ರಕರಣ ಸಹ 1992 ರಲ್ಲಿ ಅವರು ನಾಪತ್ತೆಯಾಗಿದ್ದರು ಎಂಬ ಕಾರಣಕ್ಕೆ ದಾಖಲಾಗಿತ್ತು. ಆದರೆ ಅವರ ಮೇಲೆ 16 ಪ್ರಕರಣಗಳು ಬಾಕಿ ಇದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಸಿ ಸುಳ್ಳು ಹೇಳಿದ್ದು, ಅವರನ್ನು ಆ ಪ್ರಭು ಶ್ರೀರಾಮ ಕ್ಷಮಿಸುವುದಿಲ್ಲ" ಎಂದರು.

"ರಾಮಮಂದಿರ ಉದ್ಘಾಟನೆಯ ಸಮಯದಲ್ಲಿ ಕಾಂಗ್ರೆಸ್‌ ಸರ್ಕಾರ ಕರಾಳ ಛಾಯೆ ಮೂಡಿಸುತ್ತಿದೆ. ರಾಹುಲ್‌ ಗಾಂಧಿ, ಸೋನಿಯಾ ಗಾಂಧಿ ಅವರನ್ನು ಮೆಚ್ಚಿಸಲು ಕರಸೇವಕರನ್ನು ಹುಡುಕಿ ಹಳೆಯ ಪ್ರಕರಣಗಳಲ್ಲಿ ಬಂಧಿಸಲಾಗುತ್ತಿದೆ. ಹುಬ್ಬಳ್ಳಿಯಂತೆಯೇ ಚಿಕ್ಕಮಗಳೂರು, ಕಲಬುರ್ಗಿ ಮೊದಲಾದ ಕಡೆಗಳಲ್ಲಿ ಹೀಗೆಯೇ ಆಗುತ್ತಿದೆ. ರಾಜ್ಯದಲ್ಲಿ ತುರ್ತು ಪರಿಸ್ಥಿತಿಯನ್ನು ಸರ್ಕಾರ ಹೇರಿದೆ" ಎಂದು ಹೇಳಿದರು.

"ರಾಮಭಕ್ತರ ಉತ್ಸಾಹ, ಮೆರವಣಿಗೆ, ಮಂತ್ರಾಕ್ಷತೆ ವಿತರಣೆ ಮೊದಲಾದವು ಕಾಂಗ್ರೆಸ್‌ ನಾಯಕರ ತಲೆ ಕೆಡುವಂತೆ ಮಾಡಿದೆ. ಕರಸೇವಕರನ್ನು ಬಂಧಿಸುವ ನೀಚತನವನ್ನು ಸರ್ಕಾರ ತೋರಿದೆ. ಪ್ರಧಾನಿ ನರೇಂದ್ರ ಮೋದಿ, ಬಿ.ಎಸ್‌.ಯಡಿಯೂರಪ್ಪ, ಪಿ.ಸಿ.ಮೋಹನ್‌, ರವಿಕುಮಾರ್‌ ಸೇರಿದಂತೆ ನಾವೆಲ್ಲರೂ ಕರಸೇವಕರಾಗಿದ್ದು, ತಾಕತ್ತಿದ್ದರೆ ಸರ್ಕಾರ ನಮ್ಮನ್ನು ಬಂಧಿಸಲಿ. ರಾಜ್ಯದಲ್ಲಿ ಎಲ್ಲ ಜೈಲುಗಳನ್ನು ತೆರೆದು ನಮ್ಮೆಲ್ಲರನ್ನೂ ಕಳುಹಿಸಲಿ. ರಾಮಭಕ್ತರನ್ನು ತಡೆಯುವ ಶಕ್ತಿ ಇದೆಯೇ ಎಂಬುದನ್ನು ಸರ್ಕಾರ ತೋರಿಸಲಿ" ಎಂದು ಸವಾಲೆಸೆದರು.

ಇದನ್ನೂ ಓದಿ: 'ನನ್ನನ್ನೂ ಬಂಧಿಸಿ': ಮಲ್ಲೇಶ್ವರ ಪೊಲೀಸ್ ಠಾಣೆ ಮುಂದೆ ಸುರೇಶ್ ಕುಮಾರ್ ಪ್ರತಿಭಟನೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.