ETV Bharat / state

'ನನ್ನನ್ನೂ ಬಂಧಿಸಿ': ಮಲ್ಲೇಶ್ವರ ಪೊಲೀಸ್ ಠಾಣೆ ಮುಂದೆ ಸುರೇಶ್ ಕುಮಾರ್ ಪ್ರತಿಭಟನೆ - ಪೊಲೀಸ್​ ಠಾಣೆ

ಪೊಲೀಸ್​ ಠಾಣೆ ಮುಂದೆ ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಮುಖಂಡ, ಮಾಜಿ ಸಚಿವ ಎಸ್​.ಸುರೇಶ್​ ಕುಮಾರ್​ ಅವರನ್ನು ಪೊಲೀಸರು ವಶಕ್ಕೆ ಪಡೆದರು.

Suresh Kumar protests
ಮಲ್ಲೇಶ್ವರ ಠಾಣೆ ಮುಂದೆ ಸುರೇಶ್ ಕುಮಾರ್ ಪ್ರತಿಭಟನೆ
author img

By ETV Bharat Karnataka Team

Published : Jan 5, 2024, 4:14 PM IST

ಬೆಂಗಳೂರು: 'ನಾನೊಬ್ಬ ಕರಸೇವಕ, ನನ್ನನ್ನೂ ಬಂಧಿಸಿ' ಎಂಬ ಅಭಿಯಾನದಡಿ ಮಾಜಿ ಸಚಿವ ಎಸ್.ಸುರೇಶ್ ಕುಮಾರ್ ಅವರು ಇಂದು ಮಲ್ಲೇಶ್ವರ ಪೊಲೀಸ್ ಠಾಣೆಯ ಮುಂದೆ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಧರಣಿನಿರತ ಮಾಜಿ ಸಚಿವರನ್ನು ಪೊಲೀಸರು ವಶಕ್ಕೆ ಪಡೆದರು.

"ಅಯೋಧ್ಯೆ ಅಭಿಯಾನದ ಘಟನಾವಳಿಗಳಿಗೆ ನಾನು ಕೂಡ ಸಾಕ್ಷಿಯಾಗಿದ್ದೆ. ಇದೀಗ ಸರ್ಕಾರ ಕರಸೇವಕರನ್ನು ಬಂಧಿಸುತ್ತಿದೆ. ಇದನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದೇನೆ" ಎಂದು ಪ್ರಕಟಿಸಿ ಠಾಣೆ ಮುಂದೆ ಧರಣಿ ನಡೆಸಿದರು.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮಂದಿರ ವಹೀ ಬನಾಯೇಂಗೇ ಎಂಬುದು ನಮ್ಮ ಘೋಷವಾಕ್ಯವಾಗಿತ್ತು. ಇವತ್ತು ಮಂದಿರ ಅಲ್ಲೇ ಕಟ್ಟಿದೆವು ಎಂಬ ಕಾಲಕ್ಕೆ ಬಂದಿದ್ದೇವೆ. ಜನವರಿ 22ರಂದು ಮಂದಿರದ ಉದ್ಘಾಟನೆ ಹಾಗೂ ಶ್ರೀರಾಮ ಲಲ್ಲಾನ ವಿಗ್ರಹ ಪ್ರತಿಷ್ಠಾಪನೆ ನಡೆಯಲಿದೆ. ಸಹಜವಾಗಿ ಇಲ್ಲಿನ ಕಾಂಗ್ರೆಸ್ ಸರ್ಕಾರಕ್ಕೆ ಇದನ್ನು ಸಹಿಸಿಕೊಳ್ಳಲು ಆಗುತ್ತಿಲ್ಲ" ಎಂದರು.

"30 ವರ್ಷಗಳ ಹಿಂದಿನ ಕೇಸನ್ನು ರಿ ಓಪನ್ ಮಾಡಿ ಕರಸೇವಕರನ್ನು ಸರ್ಕಾರ ಬಂಧಿಸುತ್ತಿದೆ. ಈಗ ಬಂಧಿಸುವ ಅಗತ್ಯ ಏನಿತ್ತು? ಈಗಿನದು ಬಿಜೆಪಿ ಶ್ರೀರಾಮ ಎಂದು ಕಾಂಗ್ರೆಸ್‍ನವರು ಹೇಳುತ್ತಾರೆ. ಹಾಗಿದ್ದರೆ ಡಿಸೆಂಬರ್ 6ಕ್ಕೆ ಮೊದಲು ಇದ್ದುದು ಕಾಂಗ್ರೆಸ್ ಮಸೀದಿಯೇ?" ಎಂದು ಪ್ರಶ್ನಿಸಿದರು.

"ಹರಿಪ್ರಸಾದ್ ಅವರ ಹೇಳಿಕೆಯು ಅವರ ಕೆಳಮಟ್ಟದ ಮನಸ್ಥಿತಿಯನ್ನು ತೋರಿಸುತ್ತದೆ. ಹಿಂದೆ ನರೇಂದ್ರ ಮೋದಿಯವರಿಗೆ ಬೈದದ್ದು ಗೊತ್ತಿದೆ. ಇವತ್ತು ಯಾರನ್ನಾದರೂ ಕ್ರಿಮಿನಲ್ ಎನ್ನಲು ಕಾಂಗ್ರೆಸ್ಸಿಗರು ಸಿದ್ಧರಾಗಿದ್ದಾರೆ. 30 ವರ್ಷಗಳಷ್ಟು ಹಿಂದಿನ ಪ್ರಕರಣಕ್ಕೆ ಇವತ್ತು ಯಾಕೆ ಜೀವ ಕೊಟ್ಟಿದ್ದೀರಿ? ಕರಸೇವಕ ಎಂಬ ಕಾರಣಕ್ಕೇ ರೀಓಪನ್ ಮಾಡಿದ್ದೀರಿ" ಎಂದರು.

ಮಾಜಿ ಸಚಿವ ರಾಮಚಂದ್ರ ಗೌಡ ಸ್ಥಳದಲ್ಲಿದ್ದರು. ಬಿಜೆಪಿ ಕಾರ್ಯಕರ್ತರು ಜೈ ಶ್ರೀರಾಮ್ ಘೋಷಣೆ ಕೂಗಿದರು. ಧರಣಿನಿರತರನ್ನು ಪೊಲೀಸರು ವಶಕ್ಕೆ ಪಡೆದರು.

ಇದನ್ನೂ ಓದಿ: ನಾವು ಕಾನೂನು ಬಿಟ್ಟು ಏನೂ ಮಾಡಿಲ್ಲ, ಬಿಜೆಪಿ ರಾಜಕೀಯವಾಗಿ ಬಳಸುತ್ತಿದೆ: ಪರಮೇಶ್ವರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.