ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಅವರ ಕೊರೊನಾ ವರದಿ ಪಾಸಿಟಿವ್ ಬಂದಿದೆ. ಆದರೆ ಅವರಿಗೆ ಯಾವುದೇ ರೋಗ ಲಕ್ಷಣಗಳು ಇಲ್ಲ. ಹೀಗಾಗಿ ಸಿ.ಟಿ. ರವಿ ಅವರು ಮನೆಯಲ್ಲಿಯೇ ಇದ್ದು ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ಸಚಿವ ಸಿ.ಟಿ. ರವಿಯವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಇಂದು ಸಂಜೆಯಷ್ಟೇ ಸುದ್ದಿಗೋಷ್ಠಿ ವೇಳೆ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ತಿಳಿಸಿದ್ದರು. ಇದರ ಬೆನ್ನಲ್ಲೇ ಸಿ.ಟಿ. ರವಿ ಟ್ವೀಟ್ ಮಾಡಿದ್ದಾರೆ. 'ನಾನು ಕ್ಷೇಮವಾಗಿದ್ದೇನೆ. ನನ್ನಲ್ಲಿ ಕೊರೊನಾ ಲಕ್ಷಣಗಳಿಲ್ಲ. ಹೋಮ್ ಕ್ವಾರಂಟೈನ್ನಲ್ಲಿ ಇದ್ದೇನೆ. ಸದ್ಯ ನನ್ನ ತೋಟದ ಮನೆಯಲ್ಲೇ ವಾಕ್ ಮಾಡುತ್ತಿದ್ದೇನೆ' ಎಂದು ಸಿ.ಟಿ. ರವಿ ಹೇಳಿದ್ದಾರೆ.
-
ನಾನು ಕ್ಷೇಮವಾಗಿದ್ದೇನೆ. ಕೋರೋನಾ ಲಕ್ಷಣಗಳಿಲ್ಲ. ಈಗ ಹೋಮ್ ಕ್ವಾರಂಟೈನ್-ನಲ್ಲಿ ಇದ್ದೇನೆ. ಸದ್ಯ ನನ್ನ ತೋಟದ ಮನೆಯಲ್ಲೇ ವಾಕ್ ಮಾಡುತ್ತಿದ್ದೇನೆ.
— C T Ravi 🇮🇳 ಸಿ ಟಿ ರವಿ (@CTRavi_BJP) July 11, 2020 " class="align-text-top noRightClick twitterSection" data="
">ನಾನು ಕ್ಷೇಮವಾಗಿದ್ದೇನೆ. ಕೋರೋನಾ ಲಕ್ಷಣಗಳಿಲ್ಲ. ಈಗ ಹೋಮ್ ಕ್ವಾರಂಟೈನ್-ನಲ್ಲಿ ಇದ್ದೇನೆ. ಸದ್ಯ ನನ್ನ ತೋಟದ ಮನೆಯಲ್ಲೇ ವಾಕ್ ಮಾಡುತ್ತಿದ್ದೇನೆ.
— C T Ravi 🇮🇳 ಸಿ ಟಿ ರವಿ (@CTRavi_BJP) July 11, 2020ನಾನು ಕ್ಷೇಮವಾಗಿದ್ದೇನೆ. ಕೋರೋನಾ ಲಕ್ಷಣಗಳಿಲ್ಲ. ಈಗ ಹೋಮ್ ಕ್ವಾರಂಟೈನ್-ನಲ್ಲಿ ಇದ್ದೇನೆ. ಸದ್ಯ ನನ್ನ ತೋಟದ ಮನೆಯಲ್ಲೇ ವಾಕ್ ಮಾಡುತ್ತಿದ್ದೇನೆ.
— C T Ravi 🇮🇳 ಸಿ ಟಿ ರವಿ (@CTRavi_BJP) July 11, 2020
ರಾಜ್ಯದಲ್ಲಿ ಹಲವು ರಾಜಕೀಯ ನಾಯಕರುಗಳಿಗೆ ಸೋಂಕು ದೃಢಪಟ್ಟಿದೆ. ಸಂಸದೆ ಸುಮಲತಾ ಅಂಬರೀಷ್, ಕುಣಿಗಲ್ ಶಾಸಕ ಡಾ. ರಂಗನಾಥ್, ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ, ವಿಧಾನ ಪರಿಷತ್ ಸದಸ್ಯರಾದ ಬೋಜೇಗೌಡ ಮತ್ತು ಪ್ರಾಣೇಶ್ ಅವರಿಗೆ ಈ ಮೊದಲು ಸೋಂಕು ದೃಢಪಟ್ಟಿತ್ತು. ಆದರೆ ರಾಜ್ಯದ ಸಚಿವರೊಬ್ಬರಿಗೆ ಸೋಂಕು ದೃಢಪಟ್ಟ ಮೊದಲ ಪ್ರಕರಣ ಇದಾಗಿದೆ.