ETV Bharat / state

ನಾಡಿನ ಹೆಣ್ಣು ಮಕ್ಕಳಿಗೆ ಅವಮಾನವಾಗುವ ರೀತಿ ನನ್ನ ಮಾತುಗಳಲ್ಲಿ ಅರ್ಥೈಸಿಲ್ಲ: ಪ್ರಿಯಾಂಕ್​ ಖರ್ಗೆ - Etv Bharat Kannada

ನನ್ನ ಇಡೀ ಜೀವನ ಬಾಬಾಸಾಹೇಬರ ಆದರ್ಶಗಳ ಹಾದಿಯಲ್ಲಿ ಸಾಗಿದೆ. ನಾಡಿನ ಹೆಣ್ಣು ಮಕ್ಕಳಿಗೆ ಯಾವುದೇ ರೀತಿಯಲ್ಲಿ ಅವಮಾನವಾಗುವ ರೀತಿಯಲ್ಲಿ ನನ್ನ ಮಾತುಗಳಲ್ಲಿ ನಾನು ಅರ್ಥೈಸಿಲ್ಲ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವುಂಟಾಗಿದ್ದರೆ, ನಾನು ಕ್ಷಮೆ ಕೇಳಲು ಸಿದ್ಧನಿದ್ದೇನೆ ಕಾಂಗ್ರೆಸ್​ ಶಾಸಕ ಪ್ರಿಯಾಂಕ್​ ಖರ್ಗೆ ಹೇಳಿದ್ದಾರೆ.

i-did-not-mean-to-insult-the-women-says-congress-leader-priyank-kharge
ನಾಡಿನ ಹೆಣ್ಣು ಮಕ್ಕಳಿಗೆ ಅವಮಾನವಾಗುವ ರೀತಿಯಲ್ಲಿ ನನ್ನ ಮಾತುಗಳಲ್ಲಿ ಅರ್ಥೈಸಿಲ್ಲ: ಪ್ರಿಯಾಂಕ್​ ಖರ್ಗೆ
author img

By

Published : Aug 13, 2022, 9:21 PM IST

ಬೆಂಗಳೂರು: ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಾಗಿನಿಂದ ಒಂದಲ್ಲಾ ಒಂದು ಹಗರಣಗಳು ದಿನಂಪ್ರತಿ ಬೆಳಕಿಗೆ ಬರುತ್ತಲೇ ಇವೆ. ಇದು ಈ ಸರ್ಕಾರದ ಭ್ರಷ್ಟಾಚಾರದ ವಿರಾಟ್ ರೂಪ ಹಾಗೂ ಲಂಚಕೋರ ಆಡಳಿತಕ್ಕೆ ಹಿಡಿದ ಕೈಗನ್ನಡಿ ಎಂದು ಕಾಂಗ್ರೆಸ್​ ಶಾಸಕ, ಮಾಜಿ ಸಚಿವ ಪ್ರಿಯಾಂಕ್​ ಖರ್ಗೆ ತಮ್ಮ ವಾಗ್ದಾಳಿ ಮಂದುವರಿಸಿದ್ದಾರೆ.

ಸಾಮಾಜಿಕ ಜಾಲತಾಣದಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿರುವ ಅವರು, ವಿಷೇಶವಾಗಿ ನೇಮಕಾತಿ ಪರೀಕ್ಷೆಗಳಲ್ಲಿ ನಡೆಯುತ್ತಿರುವ ಬ್ರಹ್ಮಾಂಡ ಭ್ರಷ್ಟಾಚಾರ ರಾಜ್ಯದ ಸಾವಿರಾರು ಯುವಕರ ಕಣ್ಣಲ್ಲಿ ನೀರು ತರಿಸುತ್ತಿದೆ. ಇತ್ತೀಚೆಗೆ ನಡೆದ ಕೆಪಿಟಿಸಿಎಲ್ ಪರೀಕ್ಷೆಯಲ್ಲಿ ಆಗಿರುವ ಅಕ್ರಮಕ್ಕೆ ಯಾವುದೇ ಶಿಕ್ಷೆ ನೀಡಿದರೂ ಕಮ್ಮಿಯೇ. ಸರ್ಕಾರಿ ಕೆಲಸ ಒಂದಿಡೀ ಕುಟುಂಬವನ್ನೇ ಬಡತನದಿಂದ ಮೇಲೆತ್ತುವ, ಸುಭದ್ರ ಭವಿಷ್ಯ ಕಟ್ಟಿಕೊಡುವ ಅವಕಾಶ. ಲಂಚ ಪಡೆದು ಪರೀಕ್ಷೆಯಲ್ಲಿ ಅಕ್ರಮವಾಗಿ ಉತ್ತೀರ್ಣರಾಗುವ ಮೂಲಕ ವ್ಯವಸ್ಥಿತವಾಗಿ ಬಡವರ್ಗದ ಹಾಗೂ ಯೋಗ್ಯ ಯುವ ಜನರ ಕೈಯಿಂದ ಆ ಅವಕಾಶವನ್ನು ಕಿತ್ತುಕೊಳ್ಳುವುದನ್ನು ಈ ಭ್ರಷ್ಟ ಬಿಜೆಪಿ ಸರ್ಕಾರ ಸಕ್ರಮಗೊಳಿಸಿಬಿಟ್ಟಿದೆ ಎಂದು ಆರೋಪಿಸಿದ್ಧಾರೆ.

ಇದನ್ನು ವಿರೋಧಿಸಿ ನಾನು ಶುಕ್ರವಾರ ನಡೆಸಿದ್ದ ಸುದ್ದಿಗೋಷ್ಟಿಯಲ್ಲಿ ಈ ಸರ್ಕಾರವನ್ನು ಲಂಚ ಮತ್ತು ಮಂಚದ ಸರ್ಕಾರವೆಂದು ಕರೆದಿದ್ದೆ. ತನ್ನ ಅಕ್ರಮಗಳನ್ನು ಮುಚ್ಚಿಕೊಳ್ಳಲು, ತನ್ನ ಭ್ರಷ್ಟ ರೂಪವನ್ನು ರಕ್ಷಿಸಿಕೊಳ್ಳಲು ಹಾಗೂ ತನ್ನ ತಪ್ಪನ್ನು ಸಮರ್ಥಿಸಿಕೊಳ್ಳಲು ನನ್ನ ಹೇಳಿಕೆಯನ್ನು ಅವರ ಅನುಕೂಲಕ್ಕೆ ತಕ್ಕಂತೆ ತಿರುಚಿ ಕೆಪಿಟಿಸಿಎಲ್ ಅಕ್ರಮವನ್ನು ಈ ಮೂಲಕ ಮುಚ್ಚಿ ಹಾಕಲು ಬಿಜೆಪಿ ಹೊರಟು ನಿಂತಿದೆ ಎಂದಿದ್ದಾರೆ.

'ಮಂಚದ ವಿಚಾರ'ಕ್ಕೆ ಹೆದರಿ ಹೈಕೋರ್ಟ್​​ನಿಂದ ಸ್ಟೇ: ಕೆಲಸಕ್ಕಾಗಿ ಬಂದ ಯುವತಿಯನ್ನು ಈ ಸರ್ಕಾರದ ಮಂತ್ರಿ ಮೋಸ ಮಾಡಿ, ಸಿಕ್ಕಿಬಿದ್ದು ರಾಜೀನಾಮೆ ನೀಡಬೇಕಾಯಿತು. ಆದರೆ ಅವರ ಬಳಿ ಕ್ಷಮೆಯನ್ನು ಬಿಜೆಪಿಯ ಯಾರೊಬ್ಬರೂ ಕೇಳಲಿಲ್ಲ!. ಕೇಂದ್ರ ಮಂತ್ರಿಯೊಬ್ಬರು ಅಶ್ಲೀಲವಾಗಿ ಪರಸ್ತ್ರೀಯೊಬ್ಬರೊಂದಿಗೆ ನಡೆಸಿದ್ದ ವಿಡಿಯೋ ವೈರಲ್ ಆದಾಗ ಮಹಿಳೆಯನ್ನು ತೃಣವಾಗಿ ಕಂಡಿದ್ದ ಅವರ ಬಳಿ ಬಿಜೆಪಿಯ ಯಾರೊಬ್ಬರೂ ಕ್ಷಮೆಗೆ ಆಗ್ರಹಿಸಲಿಲ್ಲ. ಸದನದಲ್ಲಿ ಕುಳಿತು ಪಾರ್ನ್ ವೀಕ್ಷಿಸಿ ಇಡೀ ರಾಜ್ಯದ ಹೆಣ್ಣು ಕುಲಕ್ಕೆ ಅಪಮಾನ ಮಾಡಿದವರ ಬಳಿ ಕ್ಷಮೆಗೆ ಆಗ್ರಹಿಸಲಿಲ್ಲ, ಬದಲಾಗಿ ಮತ್ತೆ ಟಿಕೆಟ್ ಕೊಟ್ಟು ಗೆಲ್ಲಿಸಿಕೊಂಡು ಬಂದರು. ಸೋತವರನ್ನ ಎಂಎಲ್ಸಿ ಮಾಡಿ ಡಿಸಿಎಂ ಮಾಡಿದ್ದು ಇದೇ ಬಿಜೆಪಿ ಎಂದು ಲೇವಡಿ ಮಾಡಿದ್ದಾರೆ.

ಈ ಸರ್ಕಾರದ ಮಂತ್ರಿಯೊಬ್ಬರ 'ಈ ರಾಜ್ಯದ ಯಾವ ಶಾಸಕ ಏಕ ಪತ್ನಿವ್ರತಸ್ಥ' ಎಂಬ ಪ್ರಶ್ನೆ ಬಿಜೆಪಿಗೆ ಈ ನಾಡಿನ ಹೆಣ್ಣು ಮಕ್ಕಳ ಅವಮಾನದಂತೆ ಕಂಡುಬರಲಿಲ್ಲ. ಈ ನಾಡಿನ ಹೆಣ್ಣು ಮಕ್ಕಳು ಕೆಲಸಕ್ಕಾಗಿ ಹೋದಾಗ ಅಶ್ಲೀಲವಾಗಿ ವರ್ತಿಸಿ 'ಮೀ ಟೂ' ಪ್ರಕರಣದಲ್ಲಿ ಬಿಜೆಪಿಯ ಇಬ್ಬರು ಸಂಸದರು ಸಿಕ್ಕಿಬಿದ್ದಾಗ ಬಿಜೆಪಿ ಅವರ ಬಳಿ ಕ್ಷಮೆ ಕೇಳಲಿಲ್ಲ ಎಂದು ಪ್ರಿಯಾಂಕ್​ ಟೀಕಿಸಿದ್ದಾರೆ.

ವಿಚಲಿತರಾಗಿ ಬಿಜೆಪಿ ನಾಯಕರ ಹೇಳಿಕೆ: ಈ ಸರ್ಕಾರದ ಅನಿಷ್ಟ ಆಡಳಿತಕ್ಕೆ ಇವರ ಕಾರ್ಯಕರ್ತರೇ 'ಜನಾಕ್ರೋಶ' ರೂಪಿಸಿ ಇವರ ಜನೋತ್ಸವಕ್ಕೆ ಬ್ರೇಕ್ ಹಾಕಿದ್ದಾರೆ. ಇನ್ನು ಈಗಷ್ಟೇ ಬಿಜೆಪಿ ಸರ್ಕಾರದ ಮಂತ್ರಿಯೊಬ್ಬರು 'ಬಿಜೆಪಿ ಸರ್ಕಾರ ಆಡಳಿತ ಮಾಡುತ್ತಿಲ್ಲ, ಬದಲಿಗೆ ಮ್ಯಾನೇಜ್ಮೆಂಟ್ ನಡೆಸುತ್ತಿದ್ದೇವೆ' ಎಂದು ಮಾತನಾಡಿರುವ ಆಡಿಯೋ ವೈರಲ್ ಆಗುತ್ತಿದೆ. ಈ ಸರ್ಕಾರದಲ್ಲಿ ಆಗಿರುವ ಹಾಗೂ ಈಗಲೂ ಘಟಿಸುತ್ತಿರುವ ಮಂಚ-ಲಂಚದ ಪ್ರಕರಣಗಳಿಗೆ ಕನ್ನಡಿಯಾಗಿ ಮಾತನಾಡುವುದು ವಿರೋಧ ಪಕ್ಷವಾಗಿ ನಮ್ಮ ಆದ್ಯ ಕರ್ತವ್ಯ. ಆ ಕೆಲಸವನ್ನು ಇಂದು ನಾವು ಸರಿಯಾಗಿ ನಿರ್ವಹಿಸುತ್ತಿರುವುದರಿಂದಲೇ ಬಿಜೆಪಿ ನಾಯಕರು ಇಂದು ವಿಚಲಿತರಾಗಿ ಹೇಳಿಕೆ ನೀಡುತ್ತಿರುವುದು ಎಂದು ತಿರುಗೇಟು ನೀಡಿದ್ದಾರೆ.

ನನ್ನ ಇಡೀ ಜೀವನ ಬಾಬಾಸಾಹೇಬರ ಆದರ್ಶಗಳ ಹಾದಿಯಲ್ಲಿ ಸಾಗಿದೆ. ನಾಡಿನ ಹೆಣ್ಣು ಮಕ್ಕಳಿಗೆ ಯಾವುದೇ ರೀತಿಯಲ್ಲಿ ಅವಮಾನವಾಗುವ ರೀತಿಯಲ್ಲಿ ನನ್ನ ಮಾತುಗಳಲ್ಲಿ ನಾನು ಅರ್ಥೈಸಿಲ್ಲ. ನನ್ನ ಹೇಳಿಕೆಯಿಂದ ಯಾರಿಗಾದರೂ ನೋವುಂಟಾಗಿದ್ದರೆ, ನಾನು ಕ್ಷಮೆ ಕೇಳಲು ಸಿದ್ಧನಿದ್ದೇನೆ. ಆದರೆ, ಬಿಜೆಪಿಯವರು ಹೆಣ್ಣು ಮಕ್ಕಳಿಗೆ ನಿಜವಾಗಿ ಅಪಮಾನ ಮಾಡಿರುವ ತನ್ನೆಲ್ಲಾ ನಾಯಕರ ಬಳಿ ರಾಜೀನಾಮೆ ಪಡೆದು ರಾಜ್ಯದ ಮಹಿಳಾ ಸಮುದಾಯಕ್ಕೆ ಎಸಗಿದ ಅವಮಾನಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳುವ ಕೆಲಸ ಮಾಡಲಿದೆಯಾ?. ಇದಕ್ಕೆ ಸಕಾರಾತ್ಮಕ ರೀತಿಯಲ್ಲಿ ಬಿಜೆಪಿಯಿಂದ ಉತ್ತರವನ್ನು ನಿರೀಕ್ಷಿಸಬಹುದೇ? ಎಂದು ಪ್ರಿಯಾಂಕ್​ ಖರ್ಗೆ ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಪ್ರಿಯಾಂಕ್ ಖರ್ಗೆಗೆ ತಮ್ಮ ಮನೆಯ ಹೆಂಚು ತೂತು ಎಂಬುದೇ ಗೊತ್ತಿಲ್ಲ: ಬಿಜೆಪಿ ಟ್ವೀಟ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.