ಬೆಂಗಳೂರು: ''ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭ್ರಷ್ಟ ಮುಖ್ಯಮಂತ್ರಿ ಎಂದು ಹೇಳಿದ್ದೆ. ಆದರೆ ಲಿಂಗಾಯತರೆಲ್ಲ ಭ್ರಷ್ಟರು ಎಂದು ನಾನು ಹೇಳಿಲ್ಲ'' ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಲಿಂಗಾಯತರ ಬಗ್ಗೆ ನೀಡಿದ್ದ ಹೇಳಿಕೆ ಕುರಿತಂತೆ ಸ್ಪಷ್ಟನೆ ನೀಡಿದ್ದಾರೆ.
ಶನಿವಾರ ಸುದ್ದಿ ಮಾಧ್ಯಮವೊಂದರ ಜೊತೆಗೆ ಮಾತನಾಡಿದ್ದ ಸಿದ್ದರಾಮಯ್ಯ, ಬಿಜೆಪಿಯ ಲಿಂಗಾಯತ ಸಿಎಂ ಅಸ್ತ್ರದ ಬಗ್ಗೆ ತಿರುಗೇಟು ನೀಡಿದ್ದರು. "ರಾಜ್ಯದಲ್ಲಿ ಈಗಾಗಲೇ ಲಿಂಗಾಯತ ಮುಖ್ಯಮಂತ್ರಿ ಇದ್ದಾರೆ. ಅವರೇ ಎಲ್ಲ ಭ್ರಷ್ಟಾಚಾರ ಮಾಡಿ ರಾಜ್ಯವನ್ನು ಹಾಳು ಮಾಡಿದ್ದಾರೆ" ಎಂದು ಹೇಳಿದ್ದರು. ಸಿದ್ದರಾಮಯ್ಯ ಅವರ ಈ ಹೇಳಿಕೆಯು ಲಿಂಗಾಯತ ಸಮುದಾಯದ ಆಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ ರಾಜ್ಯ ಬಿಜೆಪಿಯು ಟ್ವೀಟ್ ಮೂಲಕ ಆಕ್ರೋಶ ವ್ಯಕ್ತಪಡಿಸಿತ್ತು.
ಈ ವಿವಾದದ ಕುರಿತು ಟ್ವೀಟ್ನಲ್ಲಿ ಸ್ಪಷ್ಟನೆ ನೀಡುತ್ತ ವಿಡಿಯೋ ಹಂಚಿಕೊಂಡಿರುವ ಸಿದ್ದರಾಮಯ್ಯ, "ಬಿಜೆಪಿಯವರು ನನ್ನ ಹೇಳಿಕೆಯ ವಿಡಿಯೋವನ್ನು ತಮಗೆ ಬೇಕಾದಂತೆ ತಿರುಚಿದ್ದಾರೆ" ಎಂದು ಹೇಳಿದ್ದಾರೆ. ಬಿಜೆಪಿಯವರು ನನ್ನ ಹೇಳಿಕೆಯ ವಿಡಿಯೋವನ್ನು ಕಟ್ ಮಾಡಿ ತಮಗೆ ಬೇಕಾದಂತೆ ಎಡಿಟ್ ಮಾಡಿದ್ದಾರೆ. ಲಿಂಗಾಯತರೆಲ್ಲ ಭ್ರಷ್ಟರೆಂದು ಹೇಳಿದ್ದೇನೆ ಎಂಬಂತೆ ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ. ಚುನಾವಣಾ ಲಾಭ ಪಡೆಯುವ ಬಿಜೆಪಿಯ ಇಂತಹ ಷಡ್ಯಂತ್ರಗಳಿಗೆ ನಾಡಿನ ಲಿಂಗಾಯತ ಸಮುದಾಯ ಕಿವಿಗೊಡುವುದಿಲ್ಲ ಎಂಬ ನಂಬಿಕೆ ನನಗಿದೆ. ಲಿಂಗಾಯತರೆಲ್ಲ ಭ್ರಷ್ಟರು ಎಂದು ನಾನು ಹೇಳಿಲ್ಲ. ಇದೆಲ್ಲ ಬಿಜೆಪಿ ಸೃಷ್ಟಿಸಿದ ಸುಳ್ಳು ಎಂದು ಸಿದ್ದರಾಮಯ್ಯ ಸ್ಪಷ್ಟನೆ ನೀಡಿದ್ದಾರೆ.
-
ಬಿಜೆಪಿಯವರು ನನ್ನ ಹೇಳಿಕೆಯ ವೀಡಿಯೋವನ್ನು ಕಟ್ ಮಾಡಿ ತಮಗೆ ಬೇಕಾದಂತೆ ಎಡಿಟ್ ಮಾಡಿಕೊಂಡು ಲಿಂಗಾಯತರೆಲ್ಲ ಭ್ರಷ್ಟರೆಂದು ಹೇಳಿದ್ದೇನೆ ಎಂಬಂತೆ ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ.
— Siddaramaiah (@siddaramaiah) April 22, 2023 " class="align-text-top noRightClick twitterSection" data="
ಚುನಾವಣಾ ಲಾಭ ಪಡೆಯುವ ಬಿಜೆಪಿಯ ಇಂಥ ಷಡ್ಯಂತ್ರಗಳಿಗೆ ನಾಡಿನ ಲಿಂಗಾಯತ ಸಮುದಾಯ ಕಿವಿಗೊಡುವುದಿಲ್ಲ ಎಂಬ ನಂಬಿಕೆ ನನಗಿದೆ. 1/5 pic.twitter.com/zBsimHxs4t
">ಬಿಜೆಪಿಯವರು ನನ್ನ ಹೇಳಿಕೆಯ ವೀಡಿಯೋವನ್ನು ಕಟ್ ಮಾಡಿ ತಮಗೆ ಬೇಕಾದಂತೆ ಎಡಿಟ್ ಮಾಡಿಕೊಂಡು ಲಿಂಗಾಯತರೆಲ್ಲ ಭ್ರಷ್ಟರೆಂದು ಹೇಳಿದ್ದೇನೆ ಎಂಬಂತೆ ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ.
— Siddaramaiah (@siddaramaiah) April 22, 2023
ಚುನಾವಣಾ ಲಾಭ ಪಡೆಯುವ ಬಿಜೆಪಿಯ ಇಂಥ ಷಡ್ಯಂತ್ರಗಳಿಗೆ ನಾಡಿನ ಲಿಂಗಾಯತ ಸಮುದಾಯ ಕಿವಿಗೊಡುವುದಿಲ್ಲ ಎಂಬ ನಂಬಿಕೆ ನನಗಿದೆ. 1/5 pic.twitter.com/zBsimHxs4tಬಿಜೆಪಿಯವರು ನನ್ನ ಹೇಳಿಕೆಯ ವೀಡಿಯೋವನ್ನು ಕಟ್ ಮಾಡಿ ತಮಗೆ ಬೇಕಾದಂತೆ ಎಡಿಟ್ ಮಾಡಿಕೊಂಡು ಲಿಂಗಾಯತರೆಲ್ಲ ಭ್ರಷ್ಟರೆಂದು ಹೇಳಿದ್ದೇನೆ ಎಂಬಂತೆ ಬಿಂಬಿಸುವ ಪ್ರಯತ್ನ ಮಾಡುತ್ತಿದ್ದಾರೆ.
— Siddaramaiah (@siddaramaiah) April 22, 2023
ಚುನಾವಣಾ ಲಾಭ ಪಡೆಯುವ ಬಿಜೆಪಿಯ ಇಂಥ ಷಡ್ಯಂತ್ರಗಳಿಗೆ ನಾಡಿನ ಲಿಂಗಾಯತ ಸಮುದಾಯ ಕಿವಿಗೊಡುವುದಿಲ್ಲ ಎಂಬ ನಂಬಿಕೆ ನನಗಿದೆ. 1/5 pic.twitter.com/zBsimHxs4t
ಕರ್ನಾಟಕದಲ್ಲಿ ವಿರೇಂದ್ರ ಪಾಟೀಲ್, ನಿಜಲಿಂಗಪ್ಪ, ಜೆ ಎಚ್ ಪಟೇಲ್, ಬಿ.ಡಿ ಜತ್ತಿ, ಎಸ್ಆರ್ ಕಂಠಿ ಅವರಂತಹ ಅನೇಕ ಪ್ರಾಮಾಣಿಕ ಮುಖ್ಯಮಂತ್ರಿಗಳನ್ನು ಲಿಂಗಾಯತ ಸಮುದಾಯ ನೀಡಿದೆ. ಈ ಎಲ್ಲ ನಾಯಕರ ಬಗೆಗೆ ನನಗೆ ವಿಶೇಷ ಪ್ರೀತಿ, ಅಭಿಮಾನವಿದೆ. ವೀರಶೈವ ಲಿಂಗಾಯತರ ಬಗ್ಗೆ ನಮಗೆ ಗೌರವ ಇರುವುದರಿಂದಲೇ ಅವರಿಗೆ ಹೆಚ್ಚು ಟಿಕೆಟ್ ನೀಡಿದ್ದೇವೆ. ಕಳೆದ ಬಾರಿ 47 ಲಿಂಗಾಯತ ಅಭ್ಯರ್ಥಿಗಳಿಗೆ ಪಕ್ಷದ ಟಿಕೆಟ್ ನೀಡಲಾಗಿತ್ತು. ಈ ಬಾರಿ ಅದಕ್ಕಿಂತ ಹೆಚ್ಚು ಅಂದರೆ ಸುಮಾರು 52 - 53 ಕ್ಷೇತ್ರಗಳಲ್ಲಿ ಟಿಕೆಟ್ ನೀಡಿದ್ದೇವೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.
ನಮ್ಮಲ್ಲಿ ಜಾತಿ ಆಧಾರದ ಮೇಲೆ ಮುಖ್ಯಮಂತ್ರಿ ಯಾರಾಗಬೇಕೆಂದು ತೀರ್ಮಾನ ಮಾಡುವುದಿಲ್ಲ, ಶಾಸಕರ ಅಭಿಪ್ರಾಯ ಪಡೆದು ಹೈಕಮಾಂಡ್ ತೀರ್ಮಾನ ಮಾಡುತ್ತದೆ. ಇದು ನಮ್ಮಲ್ಲಿ ನಡೆದುಕೊಂಡುಬಂದ ಪದ್ಧತಿ. ಬಿಜೆಪಿಯವರು ಜಾತಿ ಮೇಲೆ ಮಾಡಿದರೆ ಅದು ಅವರ ಪಕ್ಷದ ವಿಚಾರ. ಅದಕ್ಕೆ ನಮ್ಮ ತಕರಾರಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸಿಎಂ ಪ್ರತಿಕ್ರಿಯೆ: ತಮ್ಮ ಬಗ್ಗೆ ಸಿದ್ದರಾಮಯ್ಯ ಹೇಳಿಕೆ ಕುರಿತಂತೆ ಭಾನುವಾರ ಬೆಂಗಳೂರಿನಲ್ಲಿ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ''ಮೋದಿ ಸಮಯದಾಯದ ಬಗ್ಗೆ ರಾಹುಲ್ ಗಾಂಧಿ ಮಾತನಾಡಿದಂತೆ ಈಗ ಸಿದ್ದರಾಮಯ್ಯ ಅವರು ಲಿಂಗಾಯತ ಸಮುದಾಯದ ಬಗ್ಗೆ ಮಾತಾಡಿದ್ದಾರೆ. ಮುಂದಿನ ದಿನಗಳಲ್ಲಿ ಜನತೆ ಇದಕ್ಕೆ ಉತ್ತರ ನೀಡಲಿದ್ದಾರೆ'' ಎಂದು ವಾಗ್ದಾಳಿ ನಡೆಸಿದ್ದಾರೆ.
"ಸಿದ್ದರಾಮಯ್ಯ ಅವರು ಹಿರಿಯರು. ಅವರಿಂದ ಇಂತಹ ಹೇಳಿಕೆ ನಿರೀಕ್ಷೆ ಮಾಡಿರಲಿಲ್ಲ. ಸಿದ್ದರಾಮಯ್ಯ ಲಿಂಗಾಯತ ಸಮುದಾಯದ ಆತ್ಮ ಕಲುಕುವ ಹೇಳಿಕೆ ನೀಡಿದ್ದಾರೆ. ಲಿಂಗಾಯತ ಸಮುದಾಯವನ್ನೇ ಭ್ರಷ್ಟ ಎನ್ನುವುದು ತಪ್ಪು. ಇದರಿಂದ ಎಲ್ಲರಿಗೂ ನೋವಾಗಿದೆ. ಇದುವೇ ಕಾಂಗ್ರೆಸ್ ಸಂಸ್ಕೃತಿ, ಇದು ಸಿದ್ದರಾಮಯ್ಯ ಘನತೆಗೆ ತಕ್ಕದಲ್ಲ. ಯಾವುದೇ ಸಮಾಜದ ಸಿಎಂ, ಸಚಿವರು ಅವರ ಯೋಗ್ಯತೆ, ಕ್ಷಮತೆಯಲ್ಲಿ ಕೆಲಸ ಮಾಡುತ್ತಾರೆ. ಲೋಪದೋಷವಿದ್ದರೆ ವೈಯಕ್ತಿಕ ಮಟ್ಟದಲ್ಲಿ ಆಗಿರುತ್ತದೆ. ಸಿದ್ದರಾಮಯ್ಯ ಘನತೆಗೆ ತಕ್ಕ ಹೇಳಿಕೆ ಅಲ್ಲ" ಎಂದು ಸಿಎಂ ಟೀಕಿಸಿದರು.
ಇದನ್ನೂ ಓದಿ: ಲಿಂಗಾಯತ ಸಮುದಾಯದ ಬಗ್ಗೆ ಸಿದ್ದರಾಮಯ್ಯ ಆತ್ಮ ಕಲುಕುವ ಹೇಳಿಕೆ ಕೊಟ್ಟಿದ್ದಾರೆ: ಸಿಎಂ ಬೊಮ್ಮಾಯಿ