ETV Bharat / state

'ಹೆಸರು ಕೆಡಿಸಿಕೊಳ್ಳುವ ಕೆಲಸ ಮಾಡಿಲ್ಲ'

author img

By

Published : Jan 21, 2021, 5:25 PM IST

ಖಾತೆ ಬದಲಾವಣೆ ಕುರಿತು ಸಿಎಂ ಜೊತೆ ಚರ್ಚೆ ಮಾಡುತ್ತೇವೆ ಎಂದು ಸಚಿವ ನಾರಾಯಣಗೌಡ ಸ್ಪಷ್ಟಪಡಿಸಿದ್ದಾರೆ.

Minister Narayana Gowda
ಸಚಿವ ನಾರಾಯಣಗೌಡ

ಬೆಂಗಳೂರು: 11 ತಿಂಗಳ ಕಾಲ ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯನ್ನು ಸಮರ್ಥವಾಗಿ ನಿರ್ವಹಿಸಿದ್ದು, ಹೆಸರು ಕೆಡಿಸಿಕೊಳ್ಳುವ ಕೆಲಸ ಮಾಡಿಲ್ಲ. ಖಾತೆ ಬದಲಾವಣೆ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬಳಿ ಚರ್ಚೆ ನಡೆಸುತ್ತೇನೆ ಎಂದು ಸಚಿವ ನಾರಾಯಣಗೌಡ ಸ್ಪಷ್ಟಪಡಿಸಿದ್ದಾರೆ.

ಸುಧಾಕರ್ ನಿವಾಸದ ಬಳಿ ಮಾತನಾಡಿದ ಅವರು, ನಮ್ಮ ಅಧಿಕಾರಿಗಳು ಹಗಲು ರಾತ್ರಿ ಎನ್ನದೆ ಕೆಲಸ ಮಾಡಿದ್ದಾರೆ. ಕೊರೊನಾ ಲಾಕ್ ಡೌನ್ ವೇಳೆ ರೇಷ್ಮೆ ಬೆಳೆಗಾರರ ಸಂಕಷ್ಟದ ಸಮಯದಲ್ಲಿ ಅಧಿಕಾರಿಗಳು ಹಗಲು-ರಾತ್ರಿ ಕೆಲಸ ಮಾಡಿ ಕೃಷಿಕರ ನೆರವಿಗೆ ಬಂದಿದ್ದರು. ತರಕಾರಿ ಬೀದಿ ಪಾಲಾಗುತ್ತಿತ್ತು, ಅದನ್ನು ಉಳಿಸಲು ಕಾಶ್ಮೀರದಿಂದ‌ ಕನ್ಯಾಕುಮಾರಿವರೆಗೂ ಸರಬರಾಜು ಮಾಡಿಸಲು ನೆರವು ನೀಡಿದ್ದರು. ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಸಚಿವ ನಾರಾಯಣಗೌಡ

ಓದಿ: ನನಗೆ ಕೊಟ್ಟಿರುವ ಖಾತೆ ತೃಪ್ತಿ ನೀಡಿದೆ : ಸಚಿವ ನಿರಾಣಿ

ಹೆಸರು ಹಾಳು ಮಾಡಿಕೊಳ್ಳುವ ಕೆಲಸವನ್ನು ನಾವು ಮಾಡಿಲ್ಲ. ಹಗಲು ರಾತ್ರಿ ನಿದ್ದೆಗೆಟ್ಟು ಕೆಲಸ ಮಾಡಿದ್ದೇವೆ. ಖಾತೆ ಬದಲಾವಣೆ ಕುರಿತು ಸಿಎಂ ಜೊತೆ ಚರ್ಚೆ ಮಾಡುತ್ತೇವೆ ಎಂದು ತಿಳಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.