ETV Bharat / state

ನಾಯಕತ್ವದ ಬಗ್ಗೆ ಮಾತನಾಡುವ ಅಧಿಕಾರ ನನಗಿಲ್ಲ, ಪಕ್ಷದ ತೀರ್ಮಾನಕ್ಕೆ ಬದ್ಧ: ಶ್ರೀರಾಮುಲು

author img

By

Published : Jul 15, 2021, 6:32 PM IST

ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ನಾಯಕತ್ವ ಬದಲಾವಣೆ ವಿಚಾರವಾಗಿ ಪ್ರತಿಕ್ರಿಯಿಸುತ್ತಾ, ಪಕ್ಷ ಹಾಗೂ ನಮ್ಮ ನಾಯಕ ಯಡಿಯೂರಪ್ಪನವರ ತೀರ್ಮಾನಕ್ಕೆ ನಾವು ಬದ್ಧ ಎಂದರು.

Sriramulu
ಶ್ರೀರಾಮುಲು

ಬೆಂಗಳೂರು: ನಾಯಕತ್ವ ಬದಲಾವಣೆ ವಿಚಾರದಲ್ಲಿ ಪಕ್ಷದ ಅಭಿಪ್ರಾಯವೇ ನನ್ನ ಅಭಿಪ್ರಾಯ. ಪಕ್ಷದ ತೀರ್ಮಾನಕ್ಕೆ ನಾನು ಬದ್ಧ. ನಮ್ಮ ನಾಯಕ ಯಡಿಯೂರಪ್ಪನವರ ತೀರ್ಮಾನಕ್ಕೆ ಬದ್ಧನಿದ್ದೇನೆ ಎಂದು ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ತಿಳಿಸಿದರು.

ಸಮಾಜ ಕಲ್ಯಾಣ ಸಚಿವ ಶ್ರೀರಾಮುಲು ಹೇಳಿಕೆ

ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ಮುಖ್ಯಮಂತ್ರಿ ಸ್ಥಾನದ ಆಕಾಂಕ್ಷಿಯಲ್ಲ. ನಾವು ಶಿಸ್ತಿನಲ್ಲಿ ಕೆಲಸ ಮಾಡುವ ಪಕ್ಷದ ಕಾರ್ಯಕರ್ತರು. ನಾಯಕತ್ವದ ಬಗ್ಗೆ ಹೈಕಮಾಂಡ್ ತೀರ್ಮಾನ ತಗೆದುಕೊಳ್ಳುತ್ತದೆ. ನಾನು ಮಂತ್ರಿಯಾಗಿ ನನ್ನ ಇತಿಮಿತಿಯಲ್ಲಿ ಕೆಲಸ ಮಾಡುತ್ತಿದ್ದೇನೆ. ನಾಯಕತ್ವ ಬದಲಾವಣೆ ಬಗ್ಗೆ ನಾನು ಮಾತಾಡಲ್ಲ. ನಾಯಕತ್ವ ಬದಲಾವಣೆ ಬಗ್ಗೆ ಮಾತನಾಡುವ ಅಧಿಕಾರವನ್ನು ಪಕ್ಷ ನನಗೆ ಕೊಟ್ಟಿಲ್ಲ. ಮುಂದಿನ ಮುಖ್ಯಮಂತ್ರಿ ಯಾರು ಎಂಬ ವಿಚಾರದಲ್ಲೂ ನಾನು ಮಾತನಾಡಲ್ಲ. ದೆಹಲಿಗೆ ಹೋಗುವ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪನವರೇ ಮಾತನಾಡುತ್ತಾರೆ ಎಂದರು.

ಇದನ್ನೂ ಓದಿ: ನಾವು ದೆಹಲಿಗೆ ಕದ್ದುಮುಚ್ಚಿ ಹೋಗುವುದಿಲ್ಲ: ರೇಣುಕಾಚಾರ್ಯ

ಜನಸಂಖ್ಯಾ ನಿಯಂತ್ರಣ ಕಾನೂನು ಬಗ್ಗೆ ಸಿ.ಟಿ ರವಿ ಹೇಳಿಕೆ ಬಗ್ಗೆ ಮಾಹಿತಿ ಇಲ್ಲ ಎಂದ ಸಚಿವ ಶ್ರೀರಾಮುಲು ಈ ವಿಚಾರದಲ್ಲಿ ಹೆಚ್ಚಿನ ಪ್ರತಿಕ್ರಿಯೆಗೆ ನಿರಾಕರಿಸಿದರು.

ಪಕ್ಷದ ಸೂಚನೆ ಮೇರೆಗೆ ಕಚೇರಿ ಭೇಟಿ:

ಕಚೇರಿಗೆ ಭೇಟಿ ನೀಡಬೇಕು ಎಂದು ನಮ್ಮ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಹೇಳಿದ್ದರು. ಕೋರ್ ಕಮಿಟಿ ಸಭೆಯಲ್ಲಿ ಈ ನಿರ್ಣಯವಾಗಿತ್ತು. ಸಚಿವರು ಪ್ರತಿ ಬುಧವಾರ, ಗುರುವಾರ ಕಚೇರಿಗೆ ಭೇಟಿ ‌ನೀಡಬೇಕು. ಪಕ್ಷ ಸಂಘಟನೆಗೆ ಸಹಕಾರ ನೀಡಬೇಕು ಎಂದಿದ್ದರು. ಈ ನಿಟ್ಟಿನಲ್ಲಿ ಇಂದು ಪಕ್ಷದ ಕಚೇರಿಗೆ ಭೇಟಿ‌ ಮಾಡಿದ್ದೇನೆ ಎಂದರು.

ಇದನ್ನೂ ಓದಿ: ಬೆಲೆ ಏರಿಕೆ ವಿರುದ್ಧದ ಮುಂದಿನ ಹೋರಾಟಕ್ಕೆ ರೂಪುರೇಷೆ: ಡಿ.ಕೆ. ಶಿವಕುಮಾರ್​

ಎಲ್ಲಾ ಸಚಿವರು ಹಳ್ಳಿಗೆ ಹೋಗಬೇಕು ಎಂದು ಚರ್ಚೆಯಾಗಿದೆ. ಸರ್ಕಾರದ ಕಾರ್ಯಕ್ರಮ ಜನರಿಗೆ ತಲುಪಬೇಕು. ಆ ನಿಟ್ಟಿನಲ್ಲಿ ನಾವು ಪ್ರಯತ್ನಿಸುತ್ತಿದ್ದೇವೆ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.