ಬೆಂಗಳೂರು: ಸ್ಪೀಕರ್ ಮಾತಿನ ಮೇರೆಗೆ ಅವರನ್ನು ಭೇಟಿ ಮಾಡಿ ರಾಜೀನಾಮೆ ನೀಡಿದ್ದೇನೆ. ಅದನ್ನು ಅವರು ಸ್ವೀಕರಿಸಬೇಕೆಂದು ವಿನಂತಿ ಮಾಡಿಕೊಂಡಿದ್ದೇನೆ ಎಂದು ಅತೃಪ್ತ ಶಾಸಕ ಬಿ.ಸಿ.ಪಾಟೀಲ್ ಹೇಳಿದ್ದಾರೆ.
ಮುಂಬೈನಿಂದ ಆಗಮಿಸಿದ ಅತೃಪ್ತ ಶಾಸಕರು ಸ್ಪೀಕರ್ ಅವರನ್ನು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಶಾಸಕ ಬಿ.ಸಿ.ಪಾಟೀಲ್, ಸ್ಪೀಕರ್ ಮಾತಿನ ಮೇರೆಗೆ ಅವರನ್ನು ಭೇಟಿ ಮಾಡಿ ರಾಜೀನಾಮೆ ನೀಡಿದ್ದೇನೆ. ಅದನ್ನು ಅವರು ಸ್ವೀಕರಿಸಬೇಕೆಂದು ವಿನಂತಿ ಮಾಡಿಕೊಂಡಿದ್ದೇನೆ ಎಂದು ಹೇಳಿದರು.