ನವದೆಹಲಿ/ಬೆಂಗಳೂರು: ಮಹಾರಾಷ್ಟ್ರದಲ್ಲಿ ಇಂದು ನಡೆದ ರಾಜಕೀಯ ಬೆಳವಣಿಗೆ ತುಂಬಾ ಒಳ್ಳೆಯದು. ಈ ಬೆಳವಣಿಗೆಯನ್ನು ನಾನು ಸ್ವಾಗತಿಸುತ್ತೇನೆ ಎಂದು ಕರ್ನಾಟಕ ಬಿಜೆಪಿ ಹಿರಿಯ ನಾಯಕ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಎನ್‌ಸಿಪಿ ನಾಯಕ ಅಜಿತ್ ಪವಾರ್ ಇಂದು ವಿಪಕ್ಷನಾಯಕ ಸ್ಥಾನಕ್ಕೆ ರಾಜೀನಾಮೆ ನೀಡಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆ ಮತ್ತು ಬಿಜೆಪಿ ಸರ್ಕಾರಕ್ಕೆ ಸೇರ್ಪಡೆಗೊಂಡಿದ್ದಾರೆ. ಅಲ್ಲದೆ ಅವರು ಉಪಮುಖ್ಯಮಂತ್ರಿಯಾಗಿ ಹಾಗೂ ಇತರ 8 ಎನ್‌ಸಿಪಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ.
ಈ ಬಗ್ಗೆ ದೆಹಲಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಬಿಎಸ್ವೈ, ಇದು ತುಂಬಾ ಒಳ್ಳೆಯ ಬೆಳವಣಿಗೆ. ಮಹಾರಾಷ್ಟ್ರದಲ್ಲಿ ನಡೆದ ರಾಜಕೀಯ ಬೆಳವಣಿಗೆಯನ್ನು ನಾನು ಸ್ವಾಗತಿಸುತ್ತೇನೆ. ಎನ್‌ಸಿಪಿ ನಾಯಕರ ಈ ನಿರ್ಧಾರದಿಂದ ನಾನು ಮತ್ತು ಮಹಾರಾಷ್ಟ್ರದ ಜನತೆ ಕೂಡ ಖುಷಿಯಾಗಿದ್ದೇವೆ ಎಂದು ಅಭಿಪ್ರಾಯಪಟ್ಟಿದ್ದಾರೆ.
-
#WATCH | Delhi: Former Karnataka CM & BJP leader BS Yediyurappa on NCP leader Ajit Pawar to take oath as deputy CM, says, "This is a very good development, I welcome that development in Maharashtra...I am happy about the decision and the people of Maharashtra are also happy..." pic.twitter.com/fnot5hDvHl
— ANI (@ANI) July 2, 2023 " class="align-text-top noRightClick twitterSection" data="
">#WATCH | Delhi: Former Karnataka CM & BJP leader BS Yediyurappa on NCP leader Ajit Pawar to take oath as deputy CM, says, "This is a very good development, I welcome that development in Maharashtra...I am happy about the decision and the people of Maharashtra are also happy..." pic.twitter.com/fnot5hDvHl
— ANI (@ANI) July 2, 2023#WATCH | Delhi: Former Karnataka CM & BJP leader BS Yediyurappa on NCP leader Ajit Pawar to take oath as deputy CM, says, "This is a very good development, I welcome that development in Maharashtra...I am happy about the decision and the people of Maharashtra are also happy..." pic.twitter.com/fnot5hDvHl
— ANI (@ANI) July 2, 2023
ಮಹಾರಾಷ್ಟ್ರದಲ್ಲಿ ನಡೆದಿರುವ ರಾಜಕೀಯ ಬೆಳವಣಿಗೆ ಕುರಿತು ಕಿಡಿಕಾರಿರುವ ಸಚಿವ ದಿನೇಶ್ ಗುಂಡೂರಾವ್, ಮಹಾರಾಷ್ಟ್ರದಲ್ಲಿ ಬಿಜೆಪಿ ತನ್ನಿಂದ ಸಾಧ್ಯವಿರುವ ಪ್ರತಿಯೊಂದು ನಿರ್ಲಜ್ಜ ನಡೆಯನ್ನೂ ಇಡುತ್ತಿದೆ. ಕರ್ನಾಟಕದಲ್ಲಿ ಇದೇ ರೀತಿಯ ಕುತಂತ್ರಗಳನ್ನು ನಡೆಸಿದ ನಂತರ ಬಿಜೆಪಿ ಇತ್ತೀಚಿನ ವಿಧಾನಸಭೆ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿತು. ಮಹಾರಾಷ್ಟ್ರದಲ್ಲೂ ಬಿಜೆಪಿಯವರಿಗೆ ಇದೇ ಗತಿ ಆಗಲಿದೆ ಎಂದು ವಾಗ್ದಾಳಿ ನಡೆಸಿದ್ದಾರೆ.
ವಿಧಾನಸಭೆಯ ಪ್ರತಿಪಕ್ಷ ನಾಯಕರಾಗಿದ್ದ ಎನ್ಸಿಪಿಯ ಹಿರಿಯ ನಾಯಕ ಅಜಿತ್ ಪವಾರ್ ಭಾನುವಾರ ಏಕನಾಥ್ ಶಿಂಧೆ ನೇತೃತ್ವದ ಮಹಾರಾಷ್ಟ್ರ ಸರ್ಕಾರಕ್ಕೆ ಉಪ ಮುಖ್ಯಮಂತ್ರಿಯಾಗಿ ಸೇರ್ಪಡೆಗೊಂಡರು. ಇವರ ಜೊತೆಗೆ ಇತರ ಎಂಟು ಮಂದಿ ಎನ್‌ಸಿಪಿ ಶಾಸಕರು ಸಚಿವರಾಗಿ ಪ್ರಮಾಣವಚನ ಸ್ವೀಕರಿಸಿದರು.
ಇಂದು ಮುಂಬೈನ ತಮ್ಮ ಅಧಿಕೃತ ನಿವಾಸ ದೇವಗಿರಿಯಲ್ಲಿ ಅಜಿತ್ ಪವಾರ್ ಪಕ್ಷದ ಕೆಲ ಮುಖಂಡರು ಮತ್ತು ಶಾಸಕರೊಂದಿಗೆ ಸಭೆ ನಡೆಸಿದರು. ಬಳಿಕ ಏಕನಾಥ್ ಶಿಂಧೆ ಬಣದ ಶಿವಸೇನೆ ಹಾಗೂ ಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರಕ್ಕೆ ಬೆಂಬಲ ಸೂಚಿಸಿದರು. ಬಳಿಕ ಮುಖ್ಯಮಂತ್ರಿ ಏಕನಾಥ್ ಶಿಂಧೆ ಮತ್ತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಸಮ್ಮುಖದಲ್ಲಿ ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು.
ರಾಜಭವನದಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ರಮೇಶ್ ಬೈಸ್ ಅವರು ಪ್ರತಿಜ್ಞಾವಿಧಿ ಬೋಧಿಸಿದರು. ಸಚಿವರಾಗಿ ಪ್ರಮಾಣವಚನ ಸ್ವೀಕರಿದ ನಾಯಕರಲ್ಲಿ ಛಗನ್ ಭುಜಬಲ್, ದಿಲೀಪ್ ವಾಲ್ಸೆ ಪಾಟೀಲ್, ಹಸನ್ ಮುಶ್ರೀಫ್, ಧನಂಜಯ್ ಮುಂಡೆ, ಅದಿತಿ ತತ್ಕರೆ, ಧರ್ಮರಾವ್ ಅತ್ರಮ್, ಅನಿಲ್ ಪಾಟೀಲ್ ಮತ್ತು ಸಂಜಯ್ ಬನ್ಸೋಡೆ ಸೇರಿದ್ದಾರೆ.
ಇತ್ತೀಚೆಗೆ ಪಾಟ್ನಾದಲ್ಲಿ 15 ಪಕ್ಷಗಳು ಸಭೆ ನಡೆಸಿದ್ದವು. ಈ ಸಭೆಯಲ್ಲಿ ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಮತ್ತು ಪಕ್ಷದ ಕಾರ್ಯಾಧ್ಯಕ್ಷೆ ಸುಪ್ರಿಯಾ ಸುಳೆ ಭಾಗವಹಿಸಿದ್ದು, ವಿಧಾನಸಭೆಯ ನಾಯಕರಾದ ಅಜಿತ್ ಪವಾರ್ ಮತ್ತು ಅವರ ಬೆಂಬಲಿಗರನ್ನು ಕೆರಳಿಸಿತ್ತು ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ : Maharashtra politics: ಮಹಾರಾಷ್ಟ್ರ ರಾಜಕೀಯದಲ್ಲಿ ಸಂಚಲನ: ಡಿಸಿಎಂ ಆಗಿ ಅಜಿತ್ ಪವಾರ್ ಅಧಿಕಾರ ಸ್ವೀಕಾರ