ಬೆಂಗಳೂರು: ನಾಳೆಯಿಂದ ಅಧಿವೇಶನ ಆರಂಭವಾಗಲಿದ್ದು, ಆರೋಗ್ಯ ಕ್ಷೇತ್ರಕ್ಕೆ ವಿಶೇಷ ಅನುದಾನಗಳ ಕುರಿತು ಕೇಳಲಿದ್ದೇನೆ ಎಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಶ್ರೀರಾಮುಲು ತಿಳಿಸಿದ್ದಾರೆ.
ಅಧಿವೇಶನದಲ್ಲಿ ಚರ್ಚೆ ಮಾಡಬೇಕಾದದ್ದು ಮಾಡಲಿ. ಸರ್ಕಾರಿ ಆಸ್ಪತ್ರೆ ಸುಧಾರಣೆ ಸೇರಿದಂತೆ ಹಲವು ಯೋಜನೆಗಳನ್ನು ತರುತ್ತಿದ್ದೇನೆ. ಸರ್ಕಾರಿ ಆಸ್ಪತ್ರೆಗಳಿಗೆ 950ಕ್ಕೂ ಹೆಚ್ಚು ಸ್ಟಾಫ್ನರ್ಸ್ ನೇಮಕ ಮಾಡಲಾಗುತ್ತಿದೆ. ನಾಳೆ ಯಾರೇ ಶಾಸಕರು, ವಿರೋಧ ಪಕ್ಷದವರು ಕೇಳುವ ಪ್ರಶ್ನೆಗಳಿಗೆ ತಯಾರಿ ಮಾಡಿಕೊಂಡಿದ್ದು, ಸಮರ್ಪಕ ಉತ್ತರ ಕೊಡುವುದಾಗಿ ತಿಳಿಸಿದ್ರು. ಅಧಿವೇಶನದಲ್ಲಿ ಆರೋಗ್ಯ ಇಲಾಖೆಗೆ ಹೆಚ್ಚು ಒತ್ತು ನೀಡುವಂತೆ ಕೋರಲಾಗುವುದು. ಗುತ್ತಿಗೆ ನೌಕರರಿಗೆ ವೇತನ ನೀಡುವ ವಿಚಾರವಾಗಿಯೂ ನಾನು ಸರ್ಕಾರದ ಗಮನಕ್ಕೆ ತರುತ್ತೇನೆ ಎಂದು ತಿಳಿಸಿದ್ರು.
ಸಮಾನ ಕೆಲಸಕ್ಕೆ ಸಮಾನ ವೇತನ: ಆದಷ್ಟು ಬೇಗ ಆದೇಶ
ಇನ್ನು ಗುತ್ತಿಗೆ ಆಧಾರದ ಮೇಲೆ ಕೆಲಸ ನಿರ್ವಹಿಸುವ ನೌಕರರಿಗೆ ಸಮಾನ ಕೆಲಸಕ್ಕೆ ಸಮಾನ ವೇತನ ನೀಡುವಂತೆ ಒತ್ತಡ ಬರುತ್ತಿದೆ. ಹೀಗಾಗಿ ರಾಜ್ಯದಲ್ಲಿ ಇರುವ ನೌಕರರ ಪಟ್ಟಿ ಪಡೆದುಕೊಂಡು 17,500 ರೂ. ಸಂಬಳ ನೀಡಲಾಗುತ್ತದೆ ಅಂತಾ ತಿಳಿಸಿದರು. ಸಮಾನ ಕೆಲಸಕ್ಕೆ ಸಮಾನ ವೇತನಕ್ಕೆ ಆದೇಶ ನೀಡಲಾಗುವುದು. ಜಿಲ್ಲೆಗಳಿಂದ ವರದಿ ತರಿಸಿಕೊಂಡು ಬೇಗ ಸಮಸ್ಯೆ ಪರಿಹರಿಸಲಾಗುವುದು. ಆದಷ್ಟು ಬೇಗ ನೋಟಿಫಿಕೇಷನ್ ಹೊರಡಿಸಲಾಗುವುದು ಎಂದರು.