ETV Bharat / state

ನಾಳೆ ದೆಹಲಿಗೆ ತೆರಳಿ ಕೇಂದ್ರ ಆಹಾರ ಸಚಿವರ ಬಳಿ ಚರ್ಚಿಸುತ್ತೇನೆ: ಸಚಿವ ಕೆ. ಹೆಚ್. ಮುನಿಯಪ್ಪ - ಕೇಂದ್ರ ಆಹಾರ ಸರಬರಾಜು ಸಚಿವ

ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ತಾವು ಘೋಷಿಸಿರುವ 10 ಕೆಜಿ ಅಕ್ಕಿ ಉಚಿತ ವಿತರಣೆ ಯೋಜನೆಯನ್ನು ಸಕಾರಗೊಳಿಸಲು ಎಲ್ಲಾ ರೀತಿಯ ಸರ್ಕಸ್​ಗಳನ್ನೂ ಮಾಡುತ್ತಿದೆ.

Minister K. H. Muniyappa
ಸಚಿವ ಕೆ. ಹೆಚ್. ಮುನಿಯಪ್ಪ
author img

By

Published : Jun 20, 2023, 4:12 PM IST

Updated : Jun 20, 2023, 5:07 PM IST

ಸಚಿವ ಕೆ. ಹೆಚ್. ಮುನಿಯಪ್ಪ

ಬೆಂಗಳೂರು: ಸಿಎಂ ನಿರ್ದೇಶನದ ಮೇರೆಗೆ ನಾಳೆ ದೆಹಲಿಗೆ ತೆರಳಿ, ಕೇಂದ್ರ ಆಹಾರ ಸರಬರಾಜು ಸಚಿವರನ್ನು ಭೇಟಿಯಾಗುತ್ತೇನೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಕೆ. ಹೆಚ್. ಮುನಿಯಪ್ಪ ತಿಳಿಸಿದ್ದಾರೆ.

ವಿಧಾನಸೌಧದಲ್ಲಿ ಮಾತನಾಡಿದ ಅವರು, ಒಡಿಶಾ, ಚತ್ತೀಸಗಢ, ಆಂಧ್ರ ಪ್ರದೇಶ, ತೆಲಂಗಾಣ ಎಲ್ಲಾ ಕಡೆ ಅಕ್ಕಿ ಖರೀದಿಯ ಪ್ರಯತ್ನ ನಡೆಯುತ್ತಿದೆ. ಗ್ಯಾರಂಟಿ ಪ್ರಕಾರ 10 ಕೆಜಿ ಅಕ್ಕಿ ಕೊಡುತ್ತೇವೆ ಎಂದು ಮಾತು ಕೊಟ್ಟಿದ್ದೇವೆ. ಎಫ್​ಸಿಐ ಅಕ್ಕಿ ಕೊಡುತ್ತೇವೆ ಎಂದು ಜೂ. 12ಕ್ಕೆ ಹೇಳಿದ್ದರು. ಜೂ. 13 ಕ್ಕೆ ಕೊಡಲ್ಲ ಅಂತ ಹೇಳಿದ್ದಾರೆ. ಈ ಮೂಲಕ ಅಕ್ಕಿ ಖರೀದಿಯ ಪ್ರಯತ್ನ ಮಾಡುತ್ತೇವೆ ಎಂದರು.

ಎಫ್​ಸಿಐ ಬಳಿ 7 ಲಕ್ಷ ಟನ್ ಅಕ್ಕಿ ದಾಸ್ತಾನು ಇದೆ. ಅದರಲ್ಲಿ 2. 28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ನಮಗೆ ಬೇಕಾಗಿದೆ. ಕೇಂದ್ರ ಸರ್ಕಾರದ ಜೊತೆ ಅಕ್ಕಿ ಖರೀದಿಯ ಪ್ರಯತ್ನದ ಜೊತೆಗೆ ಬೇರೆ ರಾಜ್ಯಗಳಿಂದ ಅಕ್ಕಿ ಖರೀದಿಗೆ ಪ್ರಯತ್ನ ಮಾಡುತ್ತೇವೆ.‌ ಹೀಗಾಗಿ ಸಿಎಂ ನಿರ್ದೇಶನದ ಮೇರೆಗೆ ನಾಳೆ ದೆಹಲಿಗೆ ತೆರಳಿ, ಕೇಂದ್ರ ಆಹಾರ ಸರಬರಾಜು ಸಚಿವರನ್ನು ಭೇಟಿಯಾಗುತ್ತೇನೆ ಎಂದು ತಿಳಿಸಿದರು.

ಈ ಪ್ರಕ್ರಿಯೆ ಸ್ವಲ್ಪ ವಿಳಂಬ ಆಗಬಹುದು. ಕೇಂದ್ರೀಯ ಭಂಡಾರ, ನಾಫೆಡ್, ಎನ್​ಸಿಸಿಎಫ್ ನಿಂದ ಅಕ್ಕಿ ಖರೀದಿ ಮಾಡಬೇಕಾಗಿದೆ. ಇದು ಸ್ವಲ್ಪ ವಿಳಂಬವಾಗಲಿದೆ. ಕಾನೂನು ಮತ್ತು ಟೆಂಡರ್ ಪ್ರಕ್ರಿಯೆಗಳಿಂದ ಸ್ವಲ್ಪ ವಿಳಂಬವಾಗಲಿದೆ. ಹಿಂದೆ ಇದೇ ಸಂಸ್ಥೆಗಳು ರಾಜ್ಯಕ್ಕೆ ಅಕ್ಕಿ ಪೂರೈಕೆ ಮಾಡುತ್ತಿದ್ದವು. ಈ ಸಂಸ್ಥೆಗಳಿಗೆ ಆದಷ್ಟು ಬೇಗ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲು ಹೇಳಲಾಗಿದೆ. ಸ್ವಲ್ಪ ವಿಳಂಬವಾದರು ಅಕ್ಕಿಯನ್ನು ‌ನಾವು ಕೊಡುತ್ತೇವೆ. ಎಲ್ಲಾ ರಾಜ್ಯಗಳಿಂದ ಅಕ್ಕಿ ಖರೀದಿಗೆ ಯತ್ನ ಮಾಡುತ್ತೇವೆ. ಬಹಳ ದೂರದಿಂದ ಅಕ್ಕಿ ಖರೀದಿಸಿದರೆ, ಅಲ್ಲಿಂದ ಇಲ್ಲಿಗೆ ಸಾಗಣೆ ವೆಚ್ಚ ಹೆಚ್ಚಾಗಲಿದೆ. ಹಾಗಾಗಿ ಕೇಂದ್ರೀಯ ಸಂಸ್ಥೆಗಳಿಂದ ಖರೀದಿ ಮಾಡುತ್ತೇವೆ. ಇದರಿಂದ ಆರ್ಥಿಕ ಹೊರೆ ಕಡಿಮೆ ಆಗುತ್ತದೆ ಎಂದರು.

ರಾಜ್ಯದಲ್ಲಿ ಕಾಂಗ್ರೆಸ್​ ಸರ್ಕಾರ ಚುನಾವಣೆ ಸಂದರ್ಭದಲ್ಲಿ ಘೋಷಿಸಿರುವ ಪಂಚ ಗ್ಯಾರಂಟಿಗಳಲ್ಲಿ ಒಂದಾದ 10 ಕೆ ಜಿ ಅಕ್ಕಿ ಕೊಡುವ ಯೋಜನೆಯನ್ನು ಪೂರೈಸಲು ಎಲ್ಲಾ ರೀತಿಯಲ್ಲು ಪ್ರಯತ್ನಿಸುತ್ತಿದೆ. ಸದ್ಯಕ್ಕೆ ರಾಜ್ಯದಲ್ಲಿ ಅಕ್ಕಿಯ ಕೊರತೆ ಇದ್ದು, ಕೇಂದ್ರ ಅಕ್ಕಿ ನೀಡಲು ನಿರಾಕರಿಸಿರುವ ಹಿನ್ನೆಲೆ, ಅದನ್ನು ಪೂರೈಸಲು ಎಲ್ಲಾ ರಾಜ್ಯಗಳ ಜೊತೆಗೂ ಮಾತುಕತೆ ನಡೆಸುತ್ತಿದೆ. ಕೇಂದ್ರ ಹಾಗೂ ರಾಜ್ಯದ ನಡುವೆ ನಡೆಯುತ್ತಿರುವ ಅಕ್ಕಿ ಜಟಾಪಟಿಗೆ ನಿನ್ನೆಯಷ್ಟೆ ಆಪ್​ ಸಣ್ನ ಪರಿಹಾರವನ್ನೂ ಸೂಚಿಸಿದೆ. ಆಪ್​ ಅಧಿಕಾರವಿರುವ ಪಂಜಾಬ್​ ಸರ್ಕಾರ ರಾಜ್ಯದಲ್ಲಿ ಕೊಪರತೆ ಇರುವ ಅಕ್ಕಿಯನ್ನು ನೀಡಲು ಸಿದ್ಧರಿರುವುದಾಗಿ ಹೇಳಿತ್ತು. ಅದಕ್ಕಾಗಿ ರಾಜ್ಯದ ಮುಖ್ಯಮಂತ್ರಿ ಪಂಜಾಬ್​ ರಾಜ್ಯ ಮುಖ್ಯಮಂತ್ರಿ ಜೊತೆ ಮಾತುಕತೆಗೆ ಅಗತ್ಯವಿರುವ ವ್ಯವಸ್ಥೆಯನ್ನೂ ಮಾಡುವುದಾಗಿ ಹೇಳಿತ್ತು.

ಇದನ್ನೂ ಓದಿ: Congress Protest: ಅನ್ನಭಾಗ್ಯಕ್ಕೆ ಅಕ್ಕಿ ನೀಡಲು ನಕಾರ ಆರೋಪ.. ಕೇಂದ್ರ ಸರ್ಕಾರದ ವಿರುದ್ಧ ಮಳೆಯ ನಡುವೆಯೂ ಕಾಂಗ್ರೆಸ್ ಪ್ರತಿಭಟನೆ

Last Updated : Jun 20, 2023, 5:07 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.