ETV Bharat / state

ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಯಲ್ಲಿ ಮುಂದುವರಿಯುವ ಪ್ರಶ್ನೆಯೇ ಇಲ್ಲ: ಹೆಚ್. ವಿಶ್ವನಾಥ್ - H Visvanath

ದೇಶದ ರಾಜಕೀಯ ಪರಿಸ್ಥಿತಿ ಬದಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಪುಟದಲ್ಲಿ ಮುಸ್ಲಿಂರಿಗೆ ಅವಕಾಶ ನೀಡಿದ್ದಾರೆ. ಹಾಗೆ, ಮುಖ್ಯಮಂತ್ರಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರ ಸಂಪುಟಕ್ಕೆ ಮುಸ್ಲಿಂರಿಗೆ ಸಚಿವ ಸ್ಥಾನ ನೀಡಬೇಕು ಎಂದು ಶಾಸಕ ಹೆಚ್. ವಿಶ್ವನಾಥ್ ಮನವಿ ಮಾಡಿದ್ದಾರೆ.

ಶಾಸಕ ಹೆಚ್. ವಿಶ್ವನಾಥ್
author img

By

Published : Jun 11, 2019, 6:33 PM IST

ಬೆಂಗಳೂರು : ಈಗಾಗಲೇ ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ. ಮತ್ತೆ ಆ ಸ್ಥಾನದಲ್ಲಿ ಮುಂದುವರೆಯುವುದಿಲ್ಲ ಎಂದು ಹಿರಿಯ ಮುಖಂಡ, ಶಾಸಕ ಹೆಚ್. ವಿಶ್ವನಾಥ್ ಹೇಳಿದ್ದಾರೆ.

ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ನೀಡಿರುವ ರಾಜ್ಯಾಧ್ಯಕ್ಷ ಹುದ್ದೆಯಲ್ಲಿ ತಾವು ಮತ್ತೆ ಮುಂದುವರೆಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆಯಲ್ಲಿ ಜೆಡಿಎಸ್​ ವತಿಯಿಂದ ಮುಸ್ಲಿಂರೊಬ್ಬರನ್ನು ಸಚಿವರನ್ನಾಗಿ ಮಾಡಬೇಕು. ಜೆಡಿಎಸ್ ಪಾಲಿನ ಎರಡು ಸಚಿವ ಸ್ಥಾನಗಳು ಖಾಲಿ ಇವೆ. ಒಂದು ಸ್ಥಾನವನ್ನು ಮುಸ್ಲಿಂರಿಗೆ, ಮತ್ತೊಂದು ಸ್ಥಾನವನ್ನು ಈ ಹಿಂದೆಯೇ ಚರ್ಚೆ ಆದಂತೆ ದಲಿತರಿಗೆ ನೀಡಬೇಕು.

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮುಸ್ಲಿಂರು ಜೆಡಿಎಸ್​ಗೆ ನಿರೀಕ್ಷಿತ ಬೆಂಬಲ ನೀಡದಿರಬಹುದು. ಆದರೆ, ಇತ್ತೀಚೆಗೆ ನಡೆದ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅವರು ಬೆಂಬಲ ನೀಡಿದ್ದಾರೆ. ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆದ್ದಿರುವ ಜೆಡಿಎಸ್ ಅಭ್ಯರ್ಥಿಗಳ ಪೈಕಿ ಶೇ.40ರಷ್ಟು ಮುಸ್ಲಿಂರಿದ್ದು, ಅದರ ಬಗ್ಗೆ ಪಕ್ಷದ ವರಿಷ್ಠ ಹೆಚ್​.ಡಿ. ದೇವೇಗೌಡರು ಸಂತಸ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.

ದೇಶದ ರಾಜಕೀಯ ಪರಿಸ್ಥಿತಿ ಬದಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಪುಟದಲ್ಲಿ ಮುಸ್ಲಿಂರಿಗೆ ಅವಕಾಶ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಮುಸ್ಲಿಂರೊಬ್ಬರನ್ನು ಸಚಿವರನ್ನಾಗಿ ಮಾಡಿದ್ದರು.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಿರುವ ಶಾಸಕ ಹೆಚ್ ವಿಶ್ವನಾಥ್

ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ನಮ್ಮ ಪಕ್ಷದಿಂದ ಮುಸ್ಲಿಂರೊಬ್ಬರನ್ನು ಸಚಿವರನ್ನಾಗಿ ಮಾಡಿಲ್ಲ. ಹಾಗಾಗಿ ಮುಂದಿನ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಜೆಡಿಎಸ್​ನಿಂದ ಮುಸ್ಲಿಂರೊಬ್ಬರನ್ನು ಸಚಿವರನ್ನಾಗಿ ಮಾಡಬೇಕೆಂದು ವಿಶ್ವನಾಥ್ ಮನವಿ ಮಾಡಿದ್ರು.

ಜಿಂದಾಲ್ ಭೂಮಿ ಪರಭಾರೆ ಮಾಡಿರುವ ವಿಚಾರದಲ್ಲಿ ಕಾಂಗ್ರೆಸ್ ಶಾಸಕ ಹೆಚ್.ಕೆ. ಪಾಟೀಲ್ ಎತ್ತಿರುವ ಪ್ರಶ್ನೆಗೆ ನನ್ನ ಬೆಂಬಲವಿದೆ. ಹೆಚ್.ಕೆ. ಪಾಟೀಲ್ ಅವರು ಹೇಳಿರುವಂತೆ ಈ ನಿರ್ಧಾರವನ್ನು ಪುನರ್ ಪರಿಶೀಲಿಸಬೇಕು. ಈ ವಿಚಾರದಲ್ಲಿ ಪಾಟೀಲ್ ಅವರಿಗೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದರು.

Intro:ಬೆಂಗಳೂರು : ಈಗಾಗಲೇ ಜೆಡಿಎಸ್ ರಾಜ್ಯಾಧ್ಯಕ್ಷ ಹುದ್ದೆಗೆ ರಾಜೀನಾಮೆ ನೀಡಿದ್ದೇನೆ. ಮತ್ತೆ ಆ ಸ್ಥಾನದಲ್ಲಿ ಮುಂದುವರೆಯುವುದಿಲ್ಲ ಎಂದು ಹಿರಿಯ ಮುಖಂಡ, ಶಾಸಕ ಹೆಚ್. ವಿಶ್ವನಾಥ್ ಹೇಳಿದ್ದಾರೆ. Body:ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜೀನಾಮೆ ನೀಡಿರುವ ರಾಜ್ಯಾಧ್ಯಕ್ಷ ಹುದ್ದೆಯಲ್ಲಿ ತಾವು ಮತ್ತೆ ಮುಂದುವರೆಯುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಜೆಡಿಎಸ್-ಕಾಂಗ್ರೆಸ್ ಮೈತ್ರಿ ಸರ್ಕಾರದ ಸಂಪುಟ ವಿಸ್ತರಣೆಯಲ್ಲಿ ಜೆಡಿಎಸ್‍ವತಿಯಿಂದ ಮುಸ್ಲಿಂರೊಬ್ಬರನ್ನು ಸಚಿವರನ್ನಾಗಿ ಮಾಡಬೇಕು. ಜೆಡಿಎಸ್ ಪಾಲಿನ ಎರಡು ಸಚಿವ ಸ್ಥಾನಗಳು ಖಾಲಿ ಇವೆ. ಒಂದು ಸ್ಥಾನವನ್ನು ಮುಸ್ಲಿಂರಿಗೆ, ಮತ್ತೊಂದು ಸ್ಥಾನವನ್ನು ಈ ಹಿಂದೆಯೇ ದಲಿತರಿಗೆ ನೀಡಬೇಕಾಗಿತ್ತು. ಆ ಬಗ್ಗೆ ಚರ್ಚೆಯೂ ಆಗಬೇಕಿತ್ತು ಎಂದರು.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಮುಸ್ಲಿಂರು ಜೆಡಿಎಸ್‍ಗೆ ನಿರೀಕ್ಷಿತ ಬೆಂಬಲ ನೀಡದಿರಬಹುದು. ಆದರೆ, ಇತ್ತೀಚೆಗೆ ನಡೆದ ನಗರ ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅವರು ಬೆಂಬಲ ನೀಡಿದ್ದಾರೆ.
ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಗೆದ್ದಿರುವ ಜೆಡಿಎಸ್ ಅಭ್ಯರ್ಥಿಗಳ ಪೈಕಿ ಶೇ.40ರಷ್ಟು ಮುಸ್ಲಿಂರಿದ್ದು, ಅದರ ಬಗ್ಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸಂತಸ ವ್ಯಕ್ತಪಡಿಸಿದ್ದಾರೆ ಎಂದು ಹೇಳಿದರು.
ದೇಶದ ರಾಜಕೀಯ ಪರಿಸ್ಥಿತಿ ಬದಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸಂಪುಟದಲ್ಲಿ ಮುಸ್ಲಿಂರಿಗೆ ಅವಕಾಶ ನೀಡಿದ್ದಾರೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಮುಸ್ಲಿಂರೊಬ್ಬರನ್ನು ಮಂತ್ರಿ ಮಾಡಿದ್ದರು.
ಮೈತ್ರಿ ಸರ್ಕಾರ ಅಧಿಕಾರಕ್ಕೆ ಬಂದು ಒಂದು ವರ್ಷವಾದರೂ ನಮ್ಮ ಪಕ್ಷದ ವತಿಯಿಂದ ಮುಸ್ಲಿಂರೊಬ್ಬರನ್ನು ಮಂತ್ರಿ ಮಾಡಿಲ್ಲ ಎಂದು ಹೇಳಿದರು. ಮುಂದಿನ ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಜೆಡಿಎಸ್ ಮುಸ್ಲಿಂರೊಬ್ಬರನ್ನು ಮಂತ್ರಿಯನ್ನಾಗಿ ಮಾಡಬೇಕೆಂದು ವಿಶ್ವನಾಥ್ ಮನವಿ ಮಾಡಿದರು.
ಜಿಂದಾಲ್ ಭೂಮಿ ಪರಭಾರೆ ಮಾಡಿರುವ ವಿಚಾರದಲ್ಲಿ ಕಾಂಗ್ರೆಸ್ ಶಾಸಕ ಹೆಚ್.ಕೆ.ಪಾಟೀಲ್ ಎತ್ತಿರುವ ಪ್ರಶ್ನೆಗೆ ನನ್ನ ಬೆಂಬಲವಿದೆ. ಹೆಚ್.ಕೆ.ಪಾಟೀಲ್ ಅವರು ಕೇಳಿರುವಂತೆ ಈ ನಿರ್ಧಾರವನ್ನು ಪುನರ್ ಪರಿಶೀಲನೆ ಮಾಡಬೇಕು. ಈ ವಿಚಾರದಲ್ಲಿ ಪಾಟೀಲ್ ಅವರಿಗೆ ನನ್ನ ಸಂಪೂರ್ಣ ಬೆಂಬಲವಿದೆ ಎಂದು ಹೇಳಿದರು.
Conclusion:
ETV Bharat Logo

Copyright © 2025 Ushodaya Enterprises Pvt. Ltd., All Rights Reserved.