ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಪ್ರಕರಣದ ವಿಚಾರವನ್ನು ವಿಧಾನಸಭೆಯಲ್ಲಿ ಮಾತನಾಡುತ್ತೇನೆ. ಮಾಧ್ಯಮಗಳ ಮುಂದೆ ಮಾತಾಡಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ತಿಳಿಸಿದ್ದಾರೆ.
ಬೆಂಗಳೂರಿನಿಂದ ಮೈಸೂರಿನತ್ತ ಪ್ರಯಾಣ ಬೆಳೆಸಿದ ವೇಳೆ ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ಸಿಡಿ ಹಾಗೂ ಯುವತಿ ವಿಡಿಯೋ ಬಿಡುಗಡೆ ಮಾಡಿರುವ ವಿಚಾರದ ಬಗ್ಗೆಯೂ ಇಲ್ಲಿ ಮಾತನಾಡಲ್ಲ. ಅದರ ಬಗ್ಗೆ ವಿಧಾನಸಭೆಯಲ್ಲಿ ಮಾತಾಡುತ್ತೇನೆ ಎಂದು ಹೇಳಿದರು.
ಸಿಡಿ ಪ್ರಕರಣದ ಹಿಂದೆ ಕಾಂಗ್ರೆಸ್ನವರಿದ್ದಾರೆ ಎಂಬ ಆರೋಪದ ಕುರಿತಂತೆ ಪ್ರತಿಕ್ರಿಯಿಸಿ, ಯಾರು ತಪ್ಪು ಮಾಡಿದ್ದಾರೋ ಅವರಿಗೆ ಶಿಕ್ಷೆ ಆಗುತ್ತದೆ ಎಂದಷ್ಟೇ ಹೇಳಿದರು.
ಇದನ್ನೂ ಓದಿ: ವಿಡಿಯೋ ನೋಡಿಲ್ಲ, ಮಾಹಿತಿ ಪಡೆದು ಮಾತನಾಡುವೆ: ಡಿ.ಕೆ.ಶಿವಕುಮಾರ್