ETV Bharat / state

ಯಾರಿಗೇ ಬೆಂಗಳೂರು ಉಸ್ತುವಾರಿ ಕೊಟ್ರು ಅವರ ಜತೆ ಕೆಲಸ ಮಾಡ್ತೀನಿ.. ಸಚಿವ ಆರ್.ಅಶೋಕ್ - ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಎಂಟಿಬಿ ನಾಗರಾಜ್

ಬಿಜೆಪಿ ನಾಯಕರ ಸಭೆಯಲ್ಲಿ ಭಾಗಿಯಾಗದ ವಿಚಾರವಾಗಿ ಮಾತನಾಡಿದ ಅವರು, ನನಗೆ ಪೂರ್ವ ನಿಯೋಜಿತ ಕಾರ್ಯಕ್ರಮವಿತ್ತು. ಸಚಿವರು, ಶಾಸಕರು ಕರೆದಿದ್ದ ಸಭೆಯಲ್ಲಿ ಭಾಗವಹಿಸಲು ಆಗಲಿಲ್ಲ. ನನಗೆ ಬೇರೆ ಕಾರ್ಯಕ್ರಮಗಳು ಇದ್ದುದ್ದರಿಂದ ಭಾಗವಹಿಸಲಾಗಲಿಲ್ಲ. ಮುಂದಿನ ಎಲ್ಲಾ ಸಭೆ, ಕಾರ್ಯಕ್ರಮಗಳಲ್ಲೂ ಭಾಗಿಯಾಗುತ್ತೇನೆ..

ಆರ್.ಅಶೋಕ್
ಆರ್.ಅಶೋಕ್
author img

By

Published : Oct 9, 2021, 3:15 PM IST

ಬೆಂಗಳೂರು : ಬೆಂಗಳೂರು ಉಸ್ತುವಾರಿ ಜವಾಬ್ದಾರಿ ಯಾರಿಗೇ ಕೊಟ್ಟರೂ ಅವರ ಜತೆ ಕೆಲಸ ಮಾಡ್ತೀನಿ ಎಂದು ಕಂದಾಯ ಸಚಿವ ಆರ್ ಅಶೋಕ್​ ಹೇಳಿದ್ದಾರೆ.

ಬೆಂಗಳೂರು ಉಸ್ತುವಾರಿ ಕುರಿತಂತೆ ಸಚಿವ ಆರ್ ಅಶೋಕ್ ಸ್ಪಷ್ಟನೆ ನೀಡಿರುವುದು..

ಸಚಿವ ವಿ.ಸೋಮಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಆರ್.ಅಶೋಕ್, ಹಿರಿಯ ಸಚಿವರಾದ ವಿ ಸೋಮಣ್ಣ ಮಾತನಾಡಿದ್ದಾರೆ. ಈ ಬಗ್ಗೆ ಮಾಧ್ಯಮಗಳಲ್ಲಿ ನೋಡಿದ್ದೇನೆ. ನಗರ ಉಸ್ತುವಾರಿ ಸೇರಿದಂತೆ, ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಉಸ್ತುವಾರಿ ನೇಮಕ ಮಾಡೋದು ಸಿಎಂ ಬೊಮ್ಮಾಯಿಯವರ ವಿವೇಚನೆಗೆ ಬಿಟ್ಟಿದ್ದು. ಈ ಬಗ್ಗೆ ನಾನು ಯಾವುದೇ ಪ್ರತಿಕ್ರಿಯೆ ನೀಡಲ್ಲ. ಈ ತನಕ ನಾನು ಇದೇ ಜಿಲ್ಲೆಯ ಉಸ್ತುವಾರಿ ಬೇಕು ಎಂದು ಯಾರ ಬಳಿಯೂ ಕೇಳಿಲ್ಲ ಎಂದರು.

ಈ ಹಿಂದೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಉಸ್ತುವಾರಿ ಕೊಟ್ಟಿದ್ರು. ಎಂಟಿಬಿ ನಾಗರಾಜ್​ ಆ ಜಿಲ್ಲೆಯ ಉಸ್ತುವಾರಿ ನನಗೆ ಬೇಕು ಅಂತಾ ಕೇಳಿದ್ರು. ಗ್ರಾಮಾಂತರದ ಉಸ್ತುವಾರಿಯನ್ನು ಅವರಿಗೆ ಬಿಟ್ಟುಕೊಟ್ಟೆ ಎಂದ್ರು.

ಇದನ್ನೂ ಓದಿ: ಬಿಎಸ್​ವೈ ನಿಯಂತ್ರಿಸುವ ಉದ್ದೇಶದಿಂದಲೇ ಅವರ ಆಪ್ತನ ಮೇಲೆ ಐಟಿ ದಾಳಿ ನಡೆದಿದೆ: ಡಿಕೆಶಿ

ಬಿಜೆಪಿ ನಾಯಕರ ಸಭೆಯಲ್ಲಿ ಭಾಗಿಯಾಗದ ವಿಚಾರವಾಗಿ ಮಾತನಾಡಿದ ಅವರು, ನನಗೆ ಪೂರ್ವ ನಿಯೋಜಿತ ಕಾರ್ಯಕ್ರಮವಿತ್ತು. ಸಚಿವರು, ಶಾಸಕರು ಕರೆದಿದ್ದ ಸಭೆಯಲ್ಲಿ ಭಾಗವಹಿಸಲು ಆಗಲಿಲ್ಲ. ನನಗೆ ಬೇರೆ ಕಾರ್ಯಕ್ರಮಗಳು ಇದ್ದುದ್ದರಿಂದ ಭಾಗವಹಿಸಲಾಗಲಿಲ್ಲ. ಮುಂದಿನ ಎಲ್ಲಾ ಸಭೆ, ಕಾರ್ಯಕ್ರಮಗಳಲ್ಲೂ ಭಾಗಿಯಾಗುತ್ತೇನೆ ಎಂದು ಹೇಳಿದ್ರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.