ETV Bharat / state

ಲಂಚ ಪ್ರಕರಣ: ಬಂಧಿತ ಐಎಎಸ್ ಅಧಿಕಾರಿಯ ಜಾಮೀನು ಅರ್ಜಿ ತಿರಸ್ಕೃತ - ಲಂಚ ಪ್ರಕರಣ

ಜಮೀನು ವಿವಾದದ ಭ್ರಷ್ಟಾಚಾರ ಪ್ರಕರಣದಲ್ಲಿ ಹೈಕೋರ್ಟ್ ನಿರ್ದೇಶನದಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಜೆ ಮಂಜುನಾಥ್ ಅವರನ್ನು ಎಸಿಬಿ ಆರೋಪಿಯನ್ನಾಗಿ ಉಲ್ಲೇಖಿಸಿ, ಬಂಧಿಸಿದೆ.

IAS Manjunath bail Application rejected
IAS Manjunath bail Application rejected
author img

By

Published : Jul 11, 2022, 8:01 PM IST

ಬೆಂಗಳೂರು: ಲಂಚ ಪ್ರಕರಣದಲ್ಲಿ ಎಸಿಬಿಯಿಂದ ಬಂಧನಕ್ಕೊಳಗಾಗಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಐಎಎಸ್ ಅಧಿಕಾರಿ ಜೆ. ಮಂಜುನಾಥ್ ಅವರಿಗೆ ಜಾಮೀನು ಮಂಜೂರು ಮಾಡಲು ಬೆಂಗಳೂರಿನ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯ ನಿರಾಕರಿಸಿದೆ.

23ನೇ ಹೆಚ್ಚುವರಿ ಸಿಟಿ ಸಿವಿಲ್‌ ಮತ್ತು ಸತ್ರ ಹಾಗೂ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿ ಸ್ಥಾಪಿಸಲಾಗಿರುವ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಕೆ ಲಕ್ಷ್ಮಿನಾರಾಯಣ್‌ ಭಟ್‌ ಅವರು ಜುಲೈ 6 ರಂದು ಐಎಎಸ್ ಅಧಿಕಾರಿ ಜೆ. ಮಂಜುನಾಥ್ ಸಲ್ಲಿಸಿದ್ದ ಜಾಮೀನು ಅರ್ಜಿಯ ವಿಚಾರಣೆ ನಡೆಸಿ ತೀರ್ಪು ಕಾಯ್ದಿಟ್ಟಿದ್ದರು. ಸೋಮವಾರ ತೀರ್ಪು ಪ್ರಕಟಿಸಿ ಜಾಮೀನು ಅರ್ಜಿಯನ್ನು ತಿರಸ್ಕರಿಸಿದ್ದಾರೆ.

ಆನೇಕಲ್ ತಾಲೂಕಿನ ಜಮೀನು ವಿವಾದದ ಭ್ರಷ್ಟಾಚಾರ ಪ್ರಕರಣದಲ್ಲಿ ಹೈಕೋರ್ಟ್ ನಿರ್ದೇಶನದಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಯಾಗಿದ್ದ ಜೆ ಮಂಜುನಾಥ್ ಅವರನ್ನು ಎಸಿಬಿ ಆರೋಪಿಯನ್ನಾಗಿ ಉಲ್ಲೇಖಿಸಿತ್ತು. ಇದೇ ಪ್ರಕರಣದಲ್ಲಿ ಆರೋಪಿಯಾಗಿದ್ದ ಜಿಲ್ಲಾಧಿಕಾರಿ ಕಚೇರಿಯ ಉಪ ತಹಶೀಲ್ದಾರ್ ಪಿ ಎಸ್ ಮಹೇಶ್ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ಸಂದರ್ಭದಲ್ಲಿ ಹೈಕೋರ್ಟ್ ಏಕ ಸದಸ್ಯ ಪೀಠದ ನ್ಯಾಯಮೂರ್ತಿ ಹೆಚ್ ಪಿ ಸಂದೇಶ್ ಅವರು ಎಸಿಬಿ ಕಾರ್ಯವೈಖರಿ ಬಗ್ಗೆ ಅತೃಪ್ತಿ ವ್ಯಕ್ತಪಡಿಸಿದ್ದರು. ಎಸಿಬಿಯೇ ದೊಡ್ಡ ಭ್ರಷ್ಟರ ಕೂಪವಾಗಿದೆ. ಅದರ ಕಚೇರಿಗಳು ಕಲೆಕ್ಷನ್ ದಂಧೆಯ ಕೇಂದ್ರಗಳಾಗಿವೆ ಎಂದು ಕಿಡಿಕಾರಿದ್ದರು.

ಹೈಕೋರ್ಟ್​ನ ತೀವ್ರ ತರದ ಟೀಕೆ ನಂತರ ಎಸಿಬಿಯು ಐಎಎಸ್ ಅಧಿಕಾರಿ ಮಂಜುನಾಥ್ ಅವರ ಮೇಲೆ ದಾಳಿ ನಡೆಸಿ ಬಂಧಿಸಿತ್ತು. ಈ ಬಂಧನವನ್ನು ಪ್ರಶ್ನಿಸಿ ಮಂಜುನಾಥ್ ಅವರು ಸಿಟಿ ಸಿವಿಲ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿ ತಮಗೆ ಜಾಮೀನು ನೀಡುವಂತೆ ನ್ಯಾಯಾಲಯವನ್ನು ಕೋರಿದ್ದರು. ಜಾಮೀನು ಅರ್ಜಿ ತಿರಸ್ಕರಿಸಿರುವ ಕೆಳ ನ್ಯಾಯಾಲಯದ ಆದೇಶ ಪ್ರಶ್ನಿಸಿ ಐಎಎಸ್ ಅಧಿಕಾರಿ ಜೆ ಮಂಜುನಾಥ್ ಅವರು ಹೈಕೋರ್ಟ್​ಗೆ ಮೊರೆ ಹೋಗುವ ಸಾಧ್ಯತೆಗಳಿವೆ.

(ಇದನ್ನೂ ಓದಿ: ಜೀವದ ಉಳಿವಿಗೆ ಜೀರೋ ಟ್ರಾಫಿಕ್​.. ಮುಸ್ಲಿಂ ಯುವಕನ ಹೃದಯ ಬಡಿತಕ್ಕೆ ಚಾಲನೆ ನೀಡಿದ ಹಿಂದೂ ಬಾಲಕಿ)

ETV Bharat Logo

Copyright © 2024 Ushodaya Enterprises Pvt. Ltd., All Rights Reserved.