ಬೆಂಗಳೂರು: ಪಿಎಸ್ಐ ನೇಮಕಾತಿ ಅವ್ಯವಹಾರದಲ್ಲಿ ಉನ್ನತ ಶಿಕ್ಷಣ ಸಚಿವ ಸಿ.ಎನ್.ಅಶ್ವತ್ಥನಾರಾಯಣ ಮತ್ತು ಅವರ ಸಂಬಂಧಿ ಭಾಗಿಯಾಗಿರುವ ಕುರಿತು ಸಾಕ್ಷಿಗಳನ್ನು ಒದಗಿಸಲಿ. ಅಶ್ವತ್ಥನಾರಾಯಣ ಅವರ ರಾಜಕೀಯ ಬೆಳವಣಿಗೆಯನ್ನು ಸಹಿಸದ ಕೆಲವರು ಮಾಡಿರುವ ಪಿತೂರಿ ಇದು. ಪುರಾವೆಗಳು ಇದ್ದರೆ ಅವರು ನ್ಯಾಯಾಲಯಕ್ಕೆ ಹೋಗಲಿ ಎಂದು ಅಬಕಾರಿ ಸಚಿವ ಕೆ. ಗೋಪಾಲಯ್ಯ ಅವರು ಪ್ರತಿಪಕ್ಷಗಳ ನಾಯಕರಿಗೆ ಸವಾಲು ಹಾಕಿದರು.
ಈ ಹಿಂದಿನ ಸರ್ಕಾರದಲ್ಲಿ ಇದೇ ರೀತಿ ನಡೆದಿರುವ ನೇಮಕಾತಿ ಅಕ್ರಮಗಳ ಬಗ್ಗೆಯೂ ತನಿಖೆಯಾಗಬೇಕು. ಈಗಾಗಲೇ ಬಂಧಿತನಾಗಿರುವ ತುಮಕೂರು ಯುವಕ ಮತ್ತು ಆತನ ಸಹೋದರ ನಾವು ಅಶ್ವತ್ಥನಾರಾಯಣ ಅವರನ್ನು ನೋಡಿಯೇ ಇಲ್ಲ ಎನ್ನುತ್ತಿದ್ದಾರೆ. ಆದರೆ ಪ್ರತಿಪಕ್ಷಗಳ ನಾಯಕರು ವಿನಾಕಾರಣ ಆರೋಪ ಮಾಡುತ್ತಿದ್ದಾರೆ. ಅಶ್ವತ್ಥನಾರಾಯಣ ಅವರು ಭಾಗಿಯಾಗಿರುವ ಕುರಿತು ಸಾಕ್ಷಿ ಇದ್ದರೆ ನೀಡಲಿ ಎಂದು ಒತ್ತಾಯಿಸಿದರು.
ಇದನ್ನೂ ಓದಿ: ತಪ್ಪಿತಸ್ಥರು ಮುಟ್ಟಿ ನೋಡ್ಕೋಬೇಕು, ಹಾಗೆ ಮಾಡ್ತೀವಿ: ಸಚಿವ ಆರಗ ಜ್ಞಾನೇಂದ್ರ