ಬೆಂಗಳೂರು: ಐಎಂಎ ಸಂಸ್ಥೆಯ ಬಹುಕೋಟಿ ಹಗರಣದಲ್ಲಿ ಮಾಜಿ ಸಚಿವ ರೋಷನ್ ಬೇಗ್ ಪಾತ್ರದ ಬಗ್ಗೆ ಸಿಬಿಐ ತನಿಖೆಯಲ್ಲಿ ಸಾಕ್ಷ ಅಥವಾ ದಾಖಲೆಗಳು ಸಿಕ್ಕಿದರೆ ಅವರ ಆಸ್ತಿ ಮುಟ್ಟುಗೋಲಿಗೆ ಕ್ರಮಕೈಗೊಳ್ಳಲಾಗುವುದು ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ತಿಳಿಸಿದೆ.
ಐಎಂಎ ಹಗರಣದ ಕುರಿತು ಸಲ್ಲಿಕೆ ಆಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕ ನೇತೃತ್ವದ ವಿಭಾಗೀಯ ಪೀಠಕ್ಕೆ ಸರ್ಕಾರ ಈ ಲಿಖಿತ ಹೇಳಿಕೆ ನೀಡಿದೆ. ವಿಚಾರಣೆ ಸಂದರ್ಭದಲ್ಲಿ ಪೀಠಕ್ಕೆ ಲಿಖಿತ ಹೇಳಿಕೆ ಸಲ್ಲಿಸಿದ ಸರ್ಕಾರದ ಪರ ವಕೀಲರು 'ಹಗರಣದಲ್ಲಿ ಮಾಜಿ ಸಚಿವ ರೋಷನ್ ಬೇಗ್ ಐಎಂಎ ಪ್ರವರ್ತಕರಾಗಿ ಸಂಸ್ಥೆಯಿಂದ ಲಾಭ ಪಡೆದುಕೊಂಡಿರುವ ಬಗ್ಗೆ ಯಾವುದಾದರೂ ಸಾಕ್ಷಿಗಳು ಇವೆಯೇ ಎಂಬುದನ್ನು ತಿಳಿಸುವಂತೆ ಕೋರಿ ಸಕ್ಷಮ ಪ್ರಾಧಿಕಾರ ಕೇಂದ್ರಕ್ಕೆ ಪತ್ರ ಬರೆದಿದೆ. ಒಂದು ವೇಳೆ ಸಾಕ್ಷ್ಯ ಲಭ್ಯವಾದರೆ ಅವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳಲು ಕ್ರಮಕೈಗೊಳ್ಳಲಾಗುವುದು' ಎಂದು ತಿಳಿಸಿದರು.
ಕಾಂಗ್ರೆಸ್ ಸದಸ್ಯರ ಸಭಾತ್ಯಾಗದ ಮಧ್ಯೆಯೂ ಪರಿಷತ್ನಲ್ಲಿ ಎಪಿಎಂಸಿ ಮಸೂದೆ ಅಂಗೀಕಾರ
ವಿಚಾರಣೆ ಸಂದರ್ಭದಲ್ಲಿ ಸಿಬಿಐ ಪರ ವಕೀಲ ಪಿ ಪ್ರಸನ್ನ ಕುಮಾರ್ ಮಾಹಿತಿ ನೀಡಿ, ಏಪ್ರಿಲ್ ಅಂತ್ಯಕ್ಕೆ ತನಿಖೆ ಪೂರ್ಣಗೊಳಿಸಲಾಗುವುದು ಎಂದು ತಿಳಿಸಿದರು. ಹೇಳಿಕೆ ದಾಖಲಿಸಿಕೊಂಡ ಪೀಠ ಪ್ರಕರಣದ ತನಿಖೆ ನಡೆಸುತ್ತಿರುವ ವೈ ವಿ ಕೃಷ್ಣ ಅವರನ್ನು ತನಿಖಾಧಿಕಾರಿಯಾಗಿ ಮುಂದುವರಿಸುವಂತೆ ಕೇಂದ್ರ ಸರ್ಕಾರಕ್ಕೆ ನಿರ್ದೇಶಿಸಿತು.