ETV Bharat / state

ಕೋವಿಡ್ ಬಗ್ಗೆ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿದ್ರೆ, ಅದು ಅಪರಾಧ: ಆರೋಗ್ಯ ಇಲಾಖೆ - Misinformation about the Corona to the public

ಕೋವಿಡ್-19 ಬಗ್ಗೆ ವಿವಿಧ ಮಾಧ್ಯಮಗಳ ಮೂಲಕ, ಕೆಲವು ವೈದ್ಯಕೀಯ ಪರಿಣಿತರು/ ವೈದ್ಯರು ಸಾರ್ವಜನಿಕರಿಗೆ ಅಪೂರ್ಣವಾದ, ತಪ್ಪು ಮತ್ತು ಆಧಾರರಹಿತ ಮಾಹಿತಿಯನ್ನು ನೀಡುತ್ತಿದ್ದಾರೆ. ಇದು ಅಪರಾಧವಾಗಿದೆ. ಈ ರೀತಿಯ ತಪ್ಪು ಮಾಹಿತಿ ಸಾರ್ವಜನಿಕರಲ್ಲಿ ಗೊಂದಲವನ್ನು ಉಂಟು ಮಾಡಲು ಕಾರಣವಾಗುತ್ತಿದೆ ಎಂದು ಆರೋಗ್ಯ ಇಲಾಖೆ ಪ್ರಕಟಣೆ ಹೊರಡಿಸಿದೆ.

ಕೋವಿಡ್
ಕೋವಿಡ್
author img

By

Published : Jan 18, 2022, 3:33 PM IST

ಬೆಂಗಳೂರು: ಕೋವಿಡ್ ಬಗ್ಗೆ ಸಾರ್ವಜನಿಕರಿಗೆ ತಪ್ಪು ಮಾಹಿತಿ ನೀಡಿದರೇ, ಅದು ಇನ್ಮುಂದೆ ಅಪರಾಧವಾಗುತ್ತದೆ ಎಂದು ಆರೋಗ್ಯ ಇಲಾಖೆ ಎಚ್ಚರಿಕೆ ನೀಡಿದೆ.

ಕೋವಿಡ್-19 ಬಗ್ಗೆ ವಿವಿಧ ಮಾಧ್ಯಮಗಳ ಮೂಲಕ, ಕೆಲವು ವೈದ್ಯಕೀಯ ಪರಿಣಿತರು/ವೈದ್ಯರು ಸಾರ್ವಜನಿಕರಿಗೆ ಅಪೂರ್ಣವಾದ, ತಪ್ಪು ಮತ್ತು ಆಧಾರರಹಿತ ಮಾಹಿತಿಯನ್ನು ನೀಡುತ್ತಿರುವುದು ಸರ್ಕಾರದ ಗಮನಕ್ಕೆ ಬಂದಿರುವುದಾಗಿ ಇಲಾಖೆ ತಿಳಿಸಿದೆ.‌

Department of Health
ಪತ್ರಿಕಾ ಪ್ರಕಟಣೆ

ಅಲ್ಲದೇ ಈ ರೀತಿಯ ತಪ್ಪು ಮಾಹಿತಿ ಸಾರ್ವಜನಿಕರಲ್ಲಿ ಗೊಂದಲವನ್ನು ಉಂಟು ಮಾಡಲು ಕಾರಣವಾಗುತ್ತಿದೆ ಎಂದು ಪ್ರಕಟಣೆ ಹೊರಡಿಸಿದೆ. ಇದರಿಂದ ಕೋವಿಡ್ ಪರಿಸ್ಥಿತಿ ನಿರ್ವಹಣೆಗೆ ರಾಜ್ಯದಲ್ಲಿ ಆರೋಗ್ಯ ಮತ್ತು ಕಂದಾಯ ಇಲಾಖೆಯು ಹೊರಡಿಸಿರುವ ಮಾರ್ಗಸೂಚಿಗಳನ್ನು ಪಾಲಿಸದೆ ಸಾರ್ವಜನಿಕರು ವಿಮುಖರಾಗುವ ಸಾಧ್ಯತೆಗಳಿವೆ ಎಂಬ ಆತಂಕವನ್ನು ಹೊರಹಾಕಿದೆ‌. ಹೀಗಾಗಿ ಚಿಕಿತ್ಸೆ ಮತ್ತು ಸಾರ್ವಜನಿಕ ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಅನುಭವವನ್ನು ಹೊಂದಿರುವ ವೈದ್ಯಕೀಯ ಪರಿಣಿತರು/ವೈದ್ಯರು ಸಾರ್ವಜನಿಕರಿಗೆ ಕೋವಿಡ್-19 ರ ಬಗ್ಗೆ ಮಾಹಿತಿ ನೀಡುವ ಸಂದರ್ಭದಲ್ಲಿ ಗರಿಷ್ಠ ಪ್ರಮಾಣದ ಎಚ್ಚರಿಕೆ ವಹಿಸುವುದು ಅಗತ್ಯ ಎಂದು ಹೇಳಿದೆ.

ಇದನ್ನೂ ಓದಿ: ಮೈಸೂರು: ನನ್ನ ಮಗಳ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿದೆ.. ಪೋಷಕರ ಆರೋಪ, ದೂರು

‌ಈ ಹಿನ್ನೆಲೆ ವೈದ್ಯಕೀಯ ಪರಿಣಿತರು/ವೈದ್ಯರು ಯಾವುದೇ ಮಾಧ್ಯಮಗಳು ಹಾಗೂ ಸಾಮಾಜಿಕ ವೇದಿಕೆಗಳ ಮುಖೇನ ಮಾಹಿತಿ ನೀಡುವ ಮುನ್ನ ಕರ್ನಾಟಕ ಸರ್ಕಾರ ಮತ್ತು ಭಾರತ ಸರ್ಕಾರವು ಹೊರಡಿಸಿರುವ ಮಾರ್ಗಸೂಚಿ ಸುತ್ತೋಲೆ/ಆದೇಶಗಳನ್ನು ಸಮಗ್ರವಾಗಿ ಅಧ್ಯಯನ ಮಾಡುವುದು ಅಪೇಕ್ಷಣೀಯ. ಆದ್ದರಿಂದ, ಯಾವುದೇ ಮಾಧ್ಯಮ, ಸಾಮಾಜಿಕ ಜಾಲತಾಣಗಳಲ್ಲಿ ತಪ್ಪು ಮಾಹಿತಿ ಅಥವಾ ವಾಸ್ತವಕ್ಕೆ ದೂರವಾದ ದತ್ತಾಂಶಗಳನ್ನು ವಿನಿಮಯ ಮಾಡಿದಲ್ಲಿ, ಇದನ್ನು ಅಪರಾಧವೆಂದು ಪರಿಗಣಿಸಿ ವಿಪತ್ತು ನಿರ್ವಹಣಾ ಕಾಯ್ದೆ, 2005ರ ನಿಯಮ (54) ಹಾಗೂ ಕರ್ನಾಟಕ ಸಾಂಕ್ರಾಮಿಕ ರೋಗಗಳ ಕಾಯ್ದೆ 2020ರ ನಿಯಮ 4(6) ಅಡಿಯಲ್ಲಿ ಅಗತ್ಯ ವಸ್ತು ಕ್ರಮವನ್ನು ಕೈಗೊಳ್ಳಲಾಗುವುದು ಅಂತ ಆದೇಶಿಸಲಾಗಿದೆ.

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.