ETV Bharat / state

ಮುಂಗಾರು ಮಳೆ ಕೊರತೆ ಮುಂದುವರಿದರೆ, ಬರಪೀಡಿತ ಪ್ರದೇಶಗಳ ಘೋಷಣೆಗೆ ಪರಿಶೀಲನೆ: ಸಚಿವ ಕೃಷ್ಣಬೈರೇಗೌಡ

ವಿಧಾನಸಭೆ ಅಧಿವೇಶನದ ಶೂನ್ಯವೇಳೆಯಲ್ಲಿ ಶಾಸಕ ಅಲ್ಲಮಪ್ರಭು ಪಾಟೀಲ್, ಬಿ ಆರ್ ಪಾಟೀಲ್ ಸೇರಿದಂತೆ ಅನೇಕ ಶಾಸಕರು ಮಳೆ ಕೊರತೆ ಬಗ್ಗೆ ಸರ್ಕಾರದ ಗಮನ ಸೆಳೆದಾಗ, ಕಂದಾಯ ಸಚಿವ ಕೃಷ್ಣಬೈರೇಗೌಡ ಉತ್ತರ ನೀಡಿದರು.

Minister Krishnabhaire Gowda spoke in the assembly. ​
ವಿಧಾನಸಭೆಯಲ್ಲಿ ಸಚಿವ ಕೃಷ್ಣಭೈರೇಗೌಡ ಮಾತನಾಡಿದರು.
author img

By

Published : Jul 6, 2023, 6:04 PM IST

Updated : Jul 6, 2023, 8:21 PM IST

ಕಂದಾಯ ಸಚಿವ ಕೃಷ್ಣಬೈರೇಗೌಡ ಶಾಸಕರ ಪ್ರಶ್ನೆಗೆ ಉತ್ತರಿಸಿದರು.

ಬೆಂಗಳೂರು:ಮುಂದಿನ ದಿನಗಳಲ್ಲಿ ಮಳೆ ಕೊರತೆ ಮುಂದುವರಿದರೆ, ಇದೇ ತಿಂಗಳ 15ರ ಬಳಿಕ ಸಚಿವ ಸಂಪುಟ ಉಪಸಮಿತಿ ಸಭೆ ನಡೆಸಿ ಬರಪೀಡಿತ ಪ್ರದೇಶಗಳ ಘೋಷಣೆ ಬಗ್ಗೆ ಪರಿಶೀಲಿಸಲಾಗುವುದು ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ವಿಧಾನಸಭೆಯಲ್ಲಿ ತಿಳಿಸಿದ್ದಾರೆ.

ಇಂದು ಶೂನ್ಯವೇಳೆ ಶಾಸಕರಾದ ಅಲ್ಲಮಪ್ರಭು ಪಾಟೀಲ್, ಬಿ ಆರ್ ಪಾಟೀಲ್ ಸೇರಿದಂತೆ ಅನೇಕ ಶಾಸಕರು ಮಳೆ ಕೊರತೆ ಬಗ್ಗೆ ಸರ್ಕಾರದ ಗಮನ ಸೆಳೆದಾಗ ಉತ್ತರ ನೀಡಿದ ಕಂದಾಯ ಸಚಿವರು, ಜೂನ್ ತಿಂಗಳಿನಲ್ಲಿ ಮಳೆಯ ಕೊರತೆ ಇತ್ತು. ಕಳೆದ 10 ದಿನಗಳಿಂದ ಮಳೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ಉತ್ತರ ಕರ್ನಾಟಕದ ಒಳನಾಡಿನಲ್ಲಿ ಉತ್ತಮ ಮಳೆಯಾಗುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ ಎಂದು ವಿವರಿಸಿದರು.

ಪ್ರಕೃತಿ ವಿಕೋಪ ಪರಿಸ್ಥಿತಿ ಬಗ್ಗೆ ಚರ್ಚಿಸಲು ಕಳೆದ ಮಂಗಳವಾರ ಸಚಿವ ಸಂಪುಟ ಉಪಸಮಿತಿ ಸಭೆ ನಡೆಸಿದ್ದು, ಎಲ್ಲೆಲ್ಲಿ ಮಳೆ ಕೊರತೆ ಇದೆ ಎಂಬ ಮಾಹಿತಿಯನ್ನು ಪಡೆದುಕೊಂಡಿದ್ದೇವೆ. ಹೋಬಳಿ ಮಟ್ಟದಲ್ಲೂ ಮಳೆಯ ವ್ಯತ್ಯಾಸವಾಗುತ್ತಿದೆ. ಆದರೆ ಸರಾಸರಿ ಮಳೆಯ ಪ್ರಮಾಣ ಸುಧಾರಣೆಯಾಗುತ್ತಿದೆ. ಈ ತಿಂಗಳ 15ರ ವರೆಗೂ ಪರಿಸ್ಥಿತಿಯನ್ನು ಅವಲೋಕಿಸಿ ನಂತರ ಬರಪೀಡಿತ ಪ್ರದೇಶಗಳ ಘೋಷಣೆ ಬಗ್ಗೆ ನಿರ್ಧರಿಸಲಾಗುವುದು ಎಂದರು.

ರಾಜ್ಯದಲ್ಲಿ 193 ಗ್ರಾಮಗಳಲ್ಲಿ ಕುಡಿಯುವ ನೀರಿನ ಕೊರತೆ ಇದೆ. 339 ಬೋರ್ವೆಲ್​ಗಳನ್ನು ಬಾಡಿಗೆ ಪಡೆದು ಟ್ಯಾಂಕರ್ ಮೂಲಕ ಕುಡಿವ ನೀರು ಸರಬರಾಜು ಮಾಡಲಾಗುತ್ತಿದೆ. ಗ್ರಾಮ ಪಂಚಾಯಿತಿಗಳು ಟ್ಯಾಂಕರ್ ನೀರು ಸರಬರಾಜಿಗೆ ಹಣ ನೀಡುವುದಿಲ್ಲ ಎಂಬ ಕಾರಣಕ್ಕೆ ರಾಜ್ಯ ಸರ್ಕಾರ ಪ್ರತಿ ಜಿಲ್ಲೆಗೆ 1 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಎಲ್ಲಿಯಾದರೂ ಸಮಸ್ಯೆಗಳು ಕಂಡುಬಂದರೆ ಅದನ್ನು 24 ಗಂಟೆಯೊಳಗೆ ಬಗೆಹರಿಸಲು ತಾವು ಹಾಗೂ ಗ್ರಾಮೀಣ ಅಭಿವೃದ್ಧಿ ಸಚಿವರು ಸಿದ್ಧರಾಗಿರುವುದಾಗಿ ಹೇಳಿದರು.

ಮಳೆ ಕೊರತೆಯಿಂದಾಗಿ ಮುಂಗಾರು ಚುರುಕಾಗಿಲ್ಲ. ಬೆಳೆ ವಿಮೆ ನೋಂದಣಿ ಅವಧಿಯನ್ನು ವಿಸ್ತರಣೆ ಮಾಡುವಂತೆ ಮನವಿ ಸಲ್ಲಿಸಲಾಗಿತ್ತು. ಆದರೆ ಅದಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡಿಲ್ಲ ಎಂದು ಹೇಳಿದರು. ಇದಕ್ಕೂ ಮುನ್ನ ಮಾಜಿ ಮುಖ್ಯಮಂತ್ರಿ ಬಸವರಾಜು ಬೊಮ್ಮಾಯಿ ಮಾತನಾಡಿ, ಹವಾಮಾನ ಇಲಾಖೆ ವರದಿ ನಂಬಿ ಪ್ರಕೃತಿ ವಿಕೋಪ ಕುರಿತಂತೆ ನಿರ್ಧಾರ ತೆಗೆದುಕೊಳ್ಳಬೇಡಿ. ಬರಗಾಲ ಘೋಷಣೆ ಬಳಿಕ ಕಾರ್ಯಪಡೆ ರಚಿಸಿ ಕ್ರಿಯಾಯೋಜನೆಗೆ ಅನುಮೋದನೆ ನೀಡಿ, ಕೆಲಸ ಪ್ರಾರಂಭಿಸಲು ವಿಳಂಬವಾಗುತ್ತಿದೆ. ಹೀಗಾಗಿ ಬರ, ನೆರೆ ಪರಿಸ್ಥಿತಿ ನಿಭಾಯಿಸಲು ಶಾಶ್ವತ ಕಾರ್ಯಪಡೆಯನ್ನು ರಚಿಸಬೇಕು ಎಂದು ಸಲಹೆ ನೀಡಿದರು.

ಈಗಾಗಲೇ ಮುಂಗಾರು ಹಿನ್ನೆಡೆಯಾಗಿದೆ. ಪೂರ್ವ ಮುಂಗಾರು ಕೂಡ ಚುರುಕಾಗಿಲ್ಲದ ಕಾರಣ ಬಿತ್ತನೆ ಕಾರ್ಯಗಳು ಸರಿಯಾಗಿಲ್ಲ. ಕಳೆದ 2 ವರ್ಷಗಳಲ್ಲಿ ಮಳೆ ಬಂದಿದ್ದರೂ ಅಂತರ್ಜಲ ಅಭಿವೃದ್ಧಿಯಾಗಿಲ್ಲ. ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದೆ. ಇದನ್ನು ಬಗೆಹರಿಸಲು ಪ್ರತಿ ತಾಲೂಕಿಗೆ 50 ಲಕ್ಷ ರೂ. ಬಿಡುಗಡೆ ಮಾಡಿ. ಬಿತ್ತಿದ ಬೀಜ ಮೊಳಕೆ ಒಡೆಯದೇ ಇದ್ದರೆ ಬೆಳೆವಿಮೆ ಅನ್ವಯವಾಗುವುದಿಲ್ಲ. ಇದರ ಬಗ್ಗೆ ಗಮನಿಸಿ ಎಂದು ಸೂಚಿಸಿದರು.

ಅಲ್ಲಮಪ್ರಭು ಪಾಟೀಲ್, ಬಿ.ಆರ್. ಪಾಟೀಲ್ ಅವರು ಕುಡಿಯುವ ನೀರಿನ ತುರ್ತು ಸಮಸ್ಯೆ ಪರಿಹಾರಕ್ಕೆ ನೆರವು ನೀಡುವಂತೆ ಒತ್ತಾಯಿಸಿದರು.

ಇದನ್ನೂಓದಿ:16ನೇ ಹಣಕಾಸು ಆಯೋಗದ ಜಿಎಸ್​ಟಿ ಕೌನ್ಸಿಲ್​ನಲ್ಲಿ ರಾಜ್ಯಕ್ಕೆ ಅನ್ಯಾಯವಾಗದಂತೆ ಮುನ್ನೆಚ್ಚರಿಕೆ: ಸಿಎಂ ಸಿದ್ದರಾಮಯ್ಯ ಭರವಸೆ

Last Updated : Jul 6, 2023, 8:21 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.