ETV Bharat / state

ಎಲ್ಲರಿಗೂ ಮಕ್ಕಳು ಇರ್ತಾರೆ.. ಬೇರೆ ರಾಜಕಾರಣಿ ಮಕ್ಕಳಿಗೆ ಟಿಕೆಟ್ ಇಲ್ಲವೆಂದರೆ ನನಗೂ ಬೇಡ : ವಿ ಸೋಮಣ್ಣ - ಈಟಿವಿ ಭಾರತ್ ಕನ್ನಡ ಸುದ್ದಿ

ಬೇರೆ ರಾಜಕಾರಣಿ ಮಕ್ಕಳಿಗೆ ಟಿಕೆಟ್ ಇಲ್ಲ ಅನ್ನೋದಾದರೆ ನಮಗೂ ಬೇಡ ಎಂದು ಸಚಿವ ವಿ ಸೋಮಣ್ಣ ಅವರು ಹೇಳಿದ್ದಾರೆ.

ಸಚಿವ ವಿ ಸೋಮಣ್ಣ
ಸಚಿವ ವಿ ಸೋಮಣ್ಣ
author img

By

Published : Mar 13, 2023, 4:47 PM IST

ಸಚಿವ ವಿ ಸೋಮಣ್ಣ

ಬೆಂಗಳೂರು : ಎಲ್ಲರಿಗೂ ಮಕ್ಕಳು ಎಂದರೆ ಪ್ರೀತಿ ಇದ್ದೇ ಇರುತ್ತೆ. ಬೇರೆ ರಾಜಕಾರಣಿ ಮಕ್ಕಳಿಗೆ ಟಿಕೆಟ್ ಇಲ್ಲ ಅನ್ನೋದಾದ್ರೆ ನಮಗೂ ಬೇಡ ಎಂದು ಸಚಿವ ವಿ. ಸೋಮಣ್ಣ ಸೂಚ್ಯವಾಗಿ ತಿಳಿಸಿದ್ದಾರೆ. ಬಿಜೆಪಿಯಿಂದ ಮುನಿಸಿಕೊಂಡಿರುವ ಸಚಿವ ವಿ ಸೋಮಣ್ಣ, ಕಾಂಗ್ರೆಸ್​ಗೆ ಹೋಗ್ತಾರೆ ಎಂಬ ಸುದ್ದಿ ಹರಿದಾಡುತ್ತಿದೆ. ಈ ಹಿನ್ನೆಲೆ ಇಂದು ವಿಧಾನಸೌಧದಲ್ಲಿ ಮಾತನಾಡಿದ ಅವರು, ನನಗೆ ಇರುವ ನಿಯಮ ಎಲ್ಲರಿಗೂ ಅನ್ವಯಿಸಬೇಕಲ್ವಾ?. ನಾನು ಯಾವತ್ತೂ ಮಕ್ಕಳನ್ನು ರಾಜಕಾರಣಕ್ಕೆ ತಂದವನಲ್ಲ. ಬೇರೆ ರಾಜಕಾರಣಿ ಮಕ್ಕಳಿಗೆ ಟಿಕೆಟ್ ಇಲ್ಲ ಅನ್ನೋದಾದರೆ ನಮಗೂ ಬೇಡ. ಅವಕಾಶ, ಹಣೆಬರಹ ಇದ್ದರೆ ಮಗನಿಗೆ ಟಿಕೆಟ್ ಸಿಗುತ್ತದೆ. ನನಗೆ ಅಸಮಾಧಾನ ಇದೆ ಅಂತ ಎಲ್ಲಾದ್ರೂ ಹೇಳಿದ್ದೀನಾ? ಎಂದು ಪರೋಕ್ಷವಾಗಿ ಪಕ್ಷಕ್ಕೆ ಒಂದು ಸಂದೇಶ ನೀಡಿದರು.

ಅಸಮಾಧಾನ ವ್ಯಕ್ತಪಡಿಸದ ಸೋಮಣ್ಣ: ವಿ. ಸೋಮಣ್ಣ ತಮ್ಮ ಮಗನಿಗೂ ಬಿಜೆಪಿಯಿಂದ ಈ ಬಾರಿ ಟಿಕೆಟ್ ಕೇಳುತ್ತಿದ್ದಾರೆ ಎನ್ನಲಾಗಿದೆ. ಬಿಜೆಪಿಯಲ್ಲಿ ಟಿಕೆಟ್ ಸಿಗುವುದು ಅನುಮಾನವಾಗಿರುವುದರಿಂದ ಮುನಿಸಿಕೊಂಡಿರುವ ವಿ. ಸೋಮಣ್ಣ ಕಾಂಗ್ರೆಸ್ ಸೇರಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ. ಈ ಹಿನ್ನೆಲೆಯಲ್ಲಿ ವಿ. ಸೋಮಣ್ಣ ಬಿಜೆಪಿಯ ವಿಜಯ ಸಂಕಲ್ಪಯಾತ್ರೆಗೂ ಗೈರಾಗುತ್ತಿದ್ದಾರೆ. ತಮ್ಮ ಅಸಮಾಧಾನದ ಬಗ್ಗೆ ಬಹಿರಂಗವಾಗಿ ಎಲ್ಲೂ ವಿ. ಸೋಮಣ್ಣ ತಿಳಿಸಿಲ್ಲ. ಇದೀಗ ಅವರ ಹೇಳಿಕೆ ಮಹತ್ವ ಪಡೆದುಕೊಂಡಿದೆ.

ನನಗೆ ಅಸಮಾಧಾನ ಇದೆ ಅಂತಾ ನಾನು ಹೇಳಿಲ್ಲ : ರಾಜಕಾರಣದಲ್ಲಿ ಇವೆಲ್ಲ ಇರುತ್ತವೆ. ಏನು ಹೇಳಬೇಕು‌. ಎಲ್ಲಿ ಹೇಳಬೇಕು ಹೇಳಿದ್ದೀನಿ. ಕವಲುದಾರಿಗಳು ಇರುತ್ತವೆ. ನಾನೇನೂ ಸನ್ಯಾಸಿ ಅಲ್ಲ. ಬಿಜೆಪಿಯಲ್ಲಿ ಟಿಕೆಟ್ ಕೊಟ್ಟರೆ ನಿಂತುಕೊಳ್ಳುತ್ತೇನೆ, ಇಲ್ಲ ಎಂದರೆ ಇಲ್ಲ ಅಷ್ಟೇ. ನಾನು ಯಾವತ್ತಾದ್ರೂ ನನ್ನ ಮಗನಿಗೆ ಟಿಕೆಟ್ ಕೇಳಿದ್ದೀನಾ?. ಡಿಕೆಶಿ, ಸಿದ್ದರಾಮಯ್ಯ ನಾವೆಲ್ಲ ಸ್ನೇಹಿತರು. ನಾವು ಒಟ್ಟಿಗೆ ಕೆಲಸ ಮಾಡಿದ್ದೇವೆ. ಅವರ ಕೆಲಸ ಅವರು ಮಾಡ್ತಾರೆ, ನನ್ನ ಕೆಲಸ ನಾನು ಮಾಡ್ತೇ‌ನೆ. ನನಗೆ ಅಸಮಾಧಾನ ಇದೆ ಅಂತಾ ನಾನು ಹೇಳಿಲ್ಲ ಎಂದು ಇದೇ ವೇಳೆ ತಿಳಿಸಿದರು.

ರಾಜಕಾರಣದಲ್ಲಿ ಹೀಗೆಲ್ಲ ಆಗುತ್ತಿರುತ್ತವೆ : ನನ್ನನ್ನು ಬೆಂಗಳೂರಿಗೆ ಮಾತ್ರ ಏಕೆ ಸೀಮಿತ ಮಾಡ್ತೀರಾ?. ನನಗೆ ಕೊಟ್ಟ ಜವಾಬ್ದಾರಿಗಳೆಲ್ಲವನ್ನೂ ನಿರ್ವಹಿಸಿದ್ದೇನೆ. ಉಪಚುನಾವಣೆಗಳ ಜವಾಬ್ದಾರಿ, ತುಮಕೂರು ಲೋಕಸಭೆಯಲ್ಲಿ ಗೆಲ್ಲಿಸಿಕೊಂಡು ಬಂದಿದ್ದೇನೆ. ನಾನು ಮೊದಲು ಕಾಂಗ್ರೆಸ್ ನಲ್ಲೇ ಇದ್ದೆ. ಜನತಾಪಾರ್ಟಿ, ಜನತಾದಳದಲ್ಲೂ ಕೆಲಸ ಮಾಡಿದ್ದೇನೆ. ರಾಜಕಾರಣದಲ್ಲಿ ಹೀಗೆಲ್ಲ ಆಗುತ್ತಿರುತ್ತವೆ ಎಂದರು.

ಪಕ್ಷ ಏನ್​ ಹೇಳುತ್ತೋ ಅದನ್ನು ಮಾಡ್ತೀನಿ : ನಾಲ್ಕು ಗೋಡೆ ಮಧ್ಯೆ ಯಾರಿಗೆ ಏನ್ ಹೇಳಬೇಕು ಹೇಳಿದ್ದೇನೆ. ಅಭಿಮಾನಿಗಳು ಸಭೆ ಮಾಡಿದ್ರೆ ನಾನು ಮಾಡಬೇಡ್ರಿ ಅಂತ ಹೇಳೋಕೆ ಆಗುತ್ತಾ?. ಚುನಾವಣೆ ಬಂದಾಗ ಇಡೀ ರಾಜ್ಯಕ್ಕೆ ಕರೆಸುತ್ತಾರೆ ನನ್ನನ್ನು. ಎಲ್ಲಾ ಕ್ಷೇತ್ರ ಗೆಲ್ಲಿಸಿಕೊಂಡೇ ಬಂದಿದ್ದೇನೆ. ಪಕ್ಷ ಏನ್​ ಹೇಳುತ್ತೋ ಅದನ್ನು ಮಾಡ್ತೀನಿ ನಾನು. ರಾಜಕಾರಣ ಇದು ಖುಷಿ ಇದ್ಯೋ ಇಲ್ವೋ ಗೊತ್ತಿಲ್ಲ. ಅರ್ಹತೆ ಇರುವವರಿಗೆ ಕೆಲವು ಸಲ ಕವಲು ದಾರಿ ಆಗ್ತವೆ. ನಾನು ಬೆಂಗಳೂರಿಗೆ ಬಂದು 56 ವರ್ಷ ಆಯಿತು. ಅನೇಕ ತೊಡರುಗಳನ್ನೂ ನೋಡಿದ್ದೇವೆ. ಕೆಲಸ ಮಾಡುವವರನ್ನು ಜನ ಗೌರವಿಸ್ತಾರೆ. ಅಂದರೆ ಅದಕ್ಕೆ ಉದಾಹರಣೆ ಅಂದರೆ ಸೋಮಣ್ಣ ಎಂದರು.

ರಾಜಕಾರಣಿಗಳಿಗೆ ಬದ್ಧತೆ ಇರಬೇಕು. ಕಾಂಗ್ರೆಸ್​​ಗೆ ಬರ್ತಾರೆ ಅಂತ ಅವರ ಭಾವನೆಗಳಿವೆ. ಅದಕ್ಕೆ ನಾನು ಬೇಡ ಅನ್ನಲಾ?. ಅವರಿಗೆಲ್ಲ ಒಳ್ಳೆಯದಾಗಲಿ ಎಂದು ತಿಳಿಸಿದರು.

ಇದನ್ನೂ ಓದಿ : ಯಡಿಯೂರಪ್ಪನವರ ಮಾರ್ಗದರ್ಶನದಲ್ಲಿ ಚುನಾವಣೆ ಎದುರಿಸುತ್ತೇವೆ: ಸಿ ಟಿ ರವಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.