ETV Bharat / state

ಹೊರ ರಾಜ್ಯಗಳಿಂದ ಆಕ್ಸಿಜನ್ ತರಿಸಿಕೊಳ್ಳಲು ಅಡಚಣೆ ಇದ್ದರೆ ಕೇಂದ್ರಕ್ಕೆ ತಿಳಿಸಿ : ಹೈಕೋರ್ಟ್

ಹೊರ ರಾಜ್ಯಗಳಿಂದ ಆಮ್ಲಜನಕ ತರಿಸಿಕೊಳ್ಳಲು ರಾಜ್ಯ ಸರ್ಕಾರಕ್ಕೆ ಏನಾದರೂ ಸಮಸ್ಯೆ ಅಥವಾ ಅಡಚಣೆಗಳಿದ್ದರೆ, ಅದನ್ನು ತಕ್ಷಣ ಕೇಂದ್ರ ಸರ್ಕಾರದ ಗಮನಕ್ಕೆ ತರಬೇಕು. ಈ ಕುರಿತು ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿದ ಹೈಕೋರ್ಟ್,​ ವಿಚಾರಣೆಯನ್ನು ಜೂನ್ 3ಕ್ಕೆ ಮುಂದೂಡಿದೆ.

ಹೈಕೋರ್ಟ್
ಹೈಕೋರ್ಟ್
author img

By

Published : May 27, 2021, 9:13 PM IST

ಬೆಂಗಳೂರು : ಹೊರ ರಾಜ್ಯಗಳಿಂದ ಆಮ್ಲಜನಕ ತರಿಸಿಕೊಳ್ಳಲು ಅಡಚಣೆಗಳೇನಾದರೂ ಇದ್ದರೆ ತಕ್ಷಣ ಕೇಂದ್ರ ಸರ್ಕಾರದ ಗಮನಕ್ಕೆ ತರುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ರಾಜ್ಯದಲ್ಲಿ ಕೋವಿಡ್ ನಿರ್ವಹಣೆ ಮತ್ತು ಚಿಕಿತ್ಸೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಎ.ಎಸ್ ಓಕಾ ನೇತೃತ್ವದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ. ವಿಚಾರಣೆ ವೇಳೆ ಕೇಂದ್ರದ ಪರ ಹಾಜರಿದ್ದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಂ.ಬಿ. ನರಗುಂದ ಮಾಹಿತಿ ನೀಡಿ, ಕೇಂದ್ರ ಸರ್ಕಾರ ರಾಜ್ಯದ ಆಕ್ಸಿಜನ್ ಕೋಟಾವನ್ನು 1,200 ಮೆಟ್ರಿಕೆ ಟನ್ ಗೆ ಹೆಚ್ಚಿಸಿದೆ. ಇದರಲ್ಲಿ 370 ಮೆಟ್ರಿಕ್ ಟನ್ ಅಕ್ಸಿಜನ್ ಹೊರ ರಾಜ್ಯಗಳಿಂದ ತರಿಸಿಕೊಳ್ಳಬೇಕಿದೆ ಎಂದರು.

ಇದನ್ನೂ ಓದಿ:ಗೋಹತ್ಯೆ ನಿಷೇಧ ಕಾಯ್ದೆ: ಆಕ್ಷೇಪಣೆ ಸಲ್ಲಿಸದಿದ್ದರೆ ಕಾಯ್ದೆಗೆ ತಡೆ ನೀಡ ಬೇಕಾಗುತ್ತದೆ..ಹೈಕೋರ್ಟ್ ಎಚ್ಚರಿಕೆ

ಹೊರ ರಾಜ್ಯಗಳಿಂದ ಆಕ್ಸಿಜನ್ ತರಿಸಿಕೊಂಡ ರಾಜ್ಯ ಸರ್ಕಾರದ ಅಂಕಿ-ಅಂಶಗಳನ್ನು ಪರಿಶೀಲಿಸಿದ ಪೀಠ, ಮೇ 10 ರಿಂದ 24 ರವರೆಗೆ ಹೊರ ರಾಜ್ಯಗಳಿಂದ ಹಂಚಿಕೆಯಾಗಿರುವ ಆಕ್ಸಿಜನ್​ ಅನ್ನು ರಾಜ್ಯ ಸರ್ಕಾರ ಪೂರ್ಣ ಪ್ರಮಾಣದಲ್ಲಿ ತರಿಸಿಕೊಂಡಿಲ್ಲ. ಈವರೆಗೆ ಕೇವಲ 297 ಮೆಟ್ರಿಕ್ ಟನ್ ಆಮ್ಲಜನಕವನ್ನು ಮಾತ್ರ ತರಿಸಿಕೊಳ್ಳಲಾಗಿದೆ. ಹೀಗಾಗಿ, ಹೊರ ರಾಜ್ಯಗಳಿಂದ ಆಮ್ಲಜನಕ ತರಿಸಿಕೊಳ್ಳಲು ರಾಜ್ಯ ಸರ್ಕಾರಕ್ಕೆ ಏನಾದರೂ ಸಮಸ್ಯೆ ಅಥವಾ ಅಡಚಣೆಗಳಿದ್ದರೆ, ಅದನ್ನು ತಕ್ಷಣ ಕೇಂದ್ರ ಸರ್ಕಾರದ ಗಮನಕ್ಕೆ ತರಬೇಕು. ಈ ಕುರಿತು ನ್ಯಾಯಾಲಯಕ್ಕೆ ಪ್ರಮಾಣಪತ್ರ ಸಲ್ಲಿಸಬೇಕು ಎಂದು ರಾಜ್ಯ ಸರ್ಕಾರಕ್ಕೆ ನಿರ್ದೇಶಿಸಿ, ವಿಚಾರಣೆಯನ್ನು ಜೂನ್ 3ಕ್ಕೆ ಮುಂದೂಡಿದರು.

For All Latest Updates

ETV Bharat Logo

Copyright © 2024 Ushodaya Enterprises Pvt. Ltd., All Rights Reserved.