ETV Bharat / state

'ಪರ್ಸಂಟೇಜ್ ಪಟಾಲಂ' ಕಸಕ್ಕೂ ಬಾಯಿ ಹಾಕಿದೆ; ಜನರ ಸಮಾಧಿ ಮೇಲೆ ಬ್ರ್ಯಾಂಡ್‌ ಬೆಂಗಳೂರು ಕಟ್ಟಿದರೆ ಸುಮ್ಮನೆ ಬಿಡಲ್ಲ: ಕುಮಾರಸ್ವಾಮಿ - ಈಟಿವಿ ಭಾರತ್ ಕನ್ನಡ ಸುದ್ದಿ

ಜನರ ಸಮಾಧಿ ಮೇಲೆ ಬ್ರ್ಯಾಂಡ್​ ಬೆಂಗಳೂರು ಕಟ್ಟಿದರೆ ಅದಕ್ಕೆ ನಮ್ಮ ತೀವ್ರ ವಿರೋಧವಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್​.ಡಿ.ಕುಮಾರಸ್ವಾಮಿ ಹೇಳಿದರು.

ಹೆಚ್ ಡಿ ಕುಮಾರಸ್ವಾಮಿ
ಹೆಚ್ ಡಿ ಕುಮಾರಸ್ವಾಮಿ
author img

By ETV Bharat Karnataka Team

Published : Oct 15, 2023, 4:17 PM IST

Updated : Oct 15, 2023, 4:57 PM IST

ಬೆಂಗಳೂರು : ರಾಮನಗರ ಜಿಲ್ಲೆ ಸೇರಿ ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ರಾಜಧಾನಿಯ ಕಸ ಸುರಿಯುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿರುವ ಹೆಚ್.ಡಿ.ಕುಮಾರಸ್ವಾಮಿ, ಅಕ್ಕಪಕ್ಕದ ಜಿಲ್ಲೆಗಳ ಜನರ ಸಮಾಧಿ ಮೇಲೆ ಬ್ರ್ಯಾಂಡ್ ಬೆಂಗಳೂರು ಕಟ್ಟಿದರೆ ಅದಕ್ಕೆ ನಮ್ಮ ತೀವ್ರ ವಿರೋಧವಿದೆ. ಸರ್ಕಾರ ಈ ನಿರ್ಧಾರವನ್ನು ಕೈಬಿಡದಿದ್ದರೆ ಜನರು ಬೀದಿಗೆ ಇಳಿದಾರು ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಬಗ್ಗೆ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಸಿಕ್ಕಸಿಕ್ಕ ಕಡೆ ಬಾಯಿ ಹಾಕುತ್ತಿರುವ 'ಪರ್ಸಂಟೇಜ್ ಪಟಾಲಂ' ಈಗ ಕಸಕ್ಕೂ ಬಾಯಿ ಹಾಕಿದೆ. ಬ್ರ್ಯಾಂಡ್ ಬೆಂಗಳೂರು ಅನ್ನುವುದು ಕೆಲವರಿಗೆ ಬಿರಿಯಾನಿ. ಅದರ ಒಳಗುಟ್ಟು ರಟ್ಟಾಗಿದೆ. 'ಬ್ರ್ಯಾಂಡ್' ಹೆಸರಿನಲ್ಲಿ ಕೊಳ್ಳೆ ಹೊಡೆಯಲು, ಕಂಡ ಕಂಡ ಕಡೆ ಬೇಲಿ ಹಾಕಲು ಬೆಂಗಳೂರಿನ ನಾಲ್ಕೂ ದಿಕ್ಕುಗಳಲ್ಲಿಯೂ ಕಸದ ಡಂಪಿಂಗ್ ಯಾರ್ಡ್‌ಗಳನ್ನು ಸೃಷ್ಟಿ ಮಾಡುತ್ತಿರುವುದು ದಿಟ. ದಿನವೊಂದಕ್ಕೆ 1,630 ಟನ್ ಕಸ ಸುರಿದರೆ ಅಲ್ಲಿನ ಜನರ ಪಾಡೇನು?.

ಮಂಡೂರು ಜನ ಎದುರಿಸಿದ ಕಷ್ಟ ಅಷ್ಟಿಷ್ಟಲ್ಲ. ಯಶವಂತಪುರ ಕ್ಷೇತ್ರದ ಜನ ಈ ನರಕದಲ್ಲೇ ಬೇಯುತ್ತಿದ್ದಾರೆ. ದೊಡ್ಡಬಳ್ಳಾಪುರದ ಜನರೂ ಕಸದ ಕಷ್ಟಕ್ಕೆ ಸಿಲುಕಿದ್ದಾರೆ. ಈಗ ರಾಮನಗರದ ಸರದಿ. ಬೆಂಗಳೂರು ಸುತ್ತಮುತ್ತಲಿನ ಪ್ರದೇಶಗಳನ್ನು ಕಸದ ತೊಟ್ಟಿಗಳನ್ನಾಗಿ ಮಾಡಿ ಸಾವಿನ ದಿಬ್ಬಗಳನ್ನು ನಿರ್ಮಿಸಲು ಬ್ರ್ಯಾಂಡ್ ಬೆಂಗಳೂರು ಹೆಸರಿನಲ್ಲಿ ಹುನ್ನಾರ ಹೂಡಲಾಗಿದೆ. ಇದು ಘೋರ ಅಕ್ಷಮ್ಯ ಹಾಗೂ ರಾಜಧಾನಿಯ ಆಸುಪಾಸಿನಲ್ಲಿ ಈಗಾಗಲೇ ಕೆಟ್ಟಿರುವ ಪರಿಸರವನ್ನು ಮತ್ತಷ್ಟು ಹಾಳು ಮಾಡುವ ದುಷ್ಟ ತಂತ್ರವಷ್ಟೇ.

ಬೆಂಗಳೂರು ಅಕ್ಕಪಕ್ಕದ ಜಿಲ್ಲೆಗಳು ಕೃಷಿ, ತೋಟಗಾರಿಕೆ, ಹೈನುಗಾರಿಕೆಯಲ್ಲಿ ಸಮೃದ್ಧವಾಗಿವೆ. ಅಲ್ಲಿನ ಪರಿಸರ, ಜೀವ ವೈವಿಧ್ಯಕ್ಕೆ ಹಾನಿ ಮಾಡಿ, ಜನಜೀವನವನ್ನು ಸರ್ವನಾಶ ಮಾಡುವುದು ಒಂದೆಡೆಯಾದರೆ; ಹೊಸ ಡಂಪಿಂಗ್ ಯಾರ್ಡ್ʼಗಳ ಮೂಲಕ ಕೋಟಿಗಟ್ಟಲೇ ಹಣವನ್ನು ಜೇಬಿಗೆ ಡಂಪ್ ಮಾಡಿಕೊಳ್ಳುವ ಖತರ್ನಾಕ್ ಐಡಿಯಾ ಇನ್ನೊಂದೆಡೆ ಅಡಗಿದೆ.

ಜಗತ್ತಿನಲ್ಲಿಯೇ ಉತ್ಕೃಷ್ಟ ಮಾವು, ರೇಷ್ಮೆ, ಹಣ್ಣು, ತರಕಾರಿ ಬೆಳೆಯುತ್ತಿರುವ ರಾಮನಗರ, ಬಿಡದಿ ಬಳಿ ನೂರು ಎಕರೆ ಪ್ರದೇಶದಲ್ಲಿ ಕಸ ಸುರಿಯಲು ಉಪಮುಖ್ಯಮಂತ್ರಿಗಳ ದೊಡ್ಡ ಹುನ್ನಾರದ ಒಳ ಉದ್ದೇಶ ಸ್ಪಷ್ಟ. ಈಗಾಗಲೇ ವೃಷಭಾವತಿ ಸೇರಿ ರಾಮನಗರ ಜಿಲ್ಲೆಯ ಜಲಮೂಲಗಳು ಪೂರ್ಣ ಹಾಳಾಗಿ ಅಂತರ್ಜಲವೂ ಕಲುಷಿತವಾಗಿದೆ.

ನೂರು ಎಕರೆ ಸರ್ಕಾರಿ ಭೂಮಿಯನ್ನು ಅನಾಮತ್ತಾಗಿ ಎಗರಿಬಿಡುವ ರಿಯಲ್ ಎಸ್ಟೇಟ್ ಬ್ರ್ಯಾಂಡೆಡ್ ಪರಿಕಲ್ಪನೆ ಇದಲ್ಲದೆ ಮತ್ತೇನು? ಅಕ್ಕಪಕ್ಕದ ಜಿಲ್ಲೆಗಳ ಜನರ ಸಮಾಧಿಯ ಮೇಲೆ ಬ್ರ್ಯಾಂಡ್ ಬೆಂಗಳೂರು ಕಟ್ಟಿದರೆ ಅದಕ್ಕೆ ನಮ್ಮ ತೀವ್ರ ವಿರೋಧವಿದೆ. ಕಾಂಗ್ರೆಸ್ ಸರ್ಕಾರವು ಈ ನಿರ್ಧಾರವನ್ನು ಕೈಬಿಡದಿದ್ದರೆ ಜನರು ಬೀದಿಗೆ ಇಳಿದಾರು ಎಂದು ಹೆಚ್‌ಡಿಕೆ ಎಚ್ಚರಿಕೆ ನೀಡಿದ್ದಾರೆ.

ಸಿಎಂ, ಡಿಸಿಎಂ ವಿರುದ್ಧ ಹೆಚ್​​ಡಿಕೆ ವಾಗ್ದಾಳಿ: 40% ಕಮಿಷನ್ ಎಂದು ಹೇಳಿಕೊಂಡು ಅಧಿಕಾರಕ್ಕೆ ಬಂದವರು ಇವರಲ್ಲವೇ? ಆದರೆ, ಇವರ ಪರ್ಸಂಟೇಜ್‌ ಬಗ್ಗೆಯೇ ಹೇಳಿದರೆ ಕೋಪ ಬರುತ್ತದೆ. ಗುತ್ತಿಗೆದಾರನ ಮನೆಯಲ್ಲಿ ಸಿಕ್ಕಿದ ಆ ಕಪ್ಪು ಹಣ ಯಾರದ್ದು? ಆ ಗುತ್ತಿಗೆದಾರ ಯಾರ ಪರಮಾಪ್ತ ಎನ್ನುವುದು ಜಗಜ್ಜಾಹೀರು. ಹೀಗಿದ್ದ ಮೇಲೆ ಸತ್ಯ ಮುಚ್ಚಿಟ್ಟರೆ ಶಿವ ಮೆಚ್ಟುತ್ತಾನೆಯೇ? ಎಂದು ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ ಡಿಸಿಎಂ ಡಿಕೆ ಶಿವಕುಮಾರ್ ಅವರ ಕಾಲೆಳೆದಿದ್ದಾರೆ.

ಮಾತೆತ್ತಿದರೆ ತನಿಖೆ, ಆಯೋಗ ಎಂದು ಜಪಿಸುವ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿಗಳು ಈಗ ಗುತ್ತಿಗೆದಾರರ ಮನೆಗಳಲ್ಲಿ ಕಂತೆಕಂತೆಯಾಗಿ ಸಿಕ್ಕಿಬಿದ್ದಿರುವ ಕನಕ ಮಹಾಲಕ್ಷ್ಮೀ ಬಗ್ಗೆ ಸತ್ಯ ಹೇಳಬೇಕಲ್ಲವೇ? ಎಷ್ಟೇ ಆಗಲಿ, ಒಬ್ಬರು ಸಿದ್ದಪುರುಷರು! ಇನ್ನೊಬ್ಬರು ಸತ್ಯಪುರುಷರು!! ಸತ್ಯಕ್ಕೆ ಸಮಾಧಿ ಕಟ್ಟುವ ಬದಲು ತನಿಖೆ ಮಾಡಿಸಲಿ. ಅದು ಯಾವ ತನಿಖೆ ಎಂದು ಅವರೇ ಬಾಯಿ ಬಿಟ್ಟು ಹೇಳಲಿ ಎಂದು ಕುಮಾರಸ್ವಾಮಿ ಒತ್ತಾಯ ಮಾಡಿದ್ದಾರೆ.

ಕುಂಬಳಕಾಯಿ ಕಳ್ಳ ಎಂದರೆ ಹೆಗಲು ಮುಟ್ಟಿ ನೋಡಿಕೊಂಡನಂತೆ..., ಕಳ್ಳನ ಮನಸ್ಸು ಹುಳ್ಳುಳ್ಳಗೆ... ಎನ್ನುವ ಈ ಗಾದೆಮಾತುಗಳು ಯಾರಿಗೆ ಅನ್ವಯ ಆಗುತ್ತವೋ ಇಲ್ಲವೋ ಗೊತ್ತಿಲ್ಲ. ಡಿಕೆ ಸಹೋದರರಿಗಂತೂ ಕರಾರುವಕ್ಕಾಗಿ ಅನ್ವಯಿಸುತ್ತವೆ ಎಂದು ಟಾಂಗ್‌ ನೀಡಿದ್ದಾರೆ.

ಕುಮಾರಸ್ವಾಮಿ ಅವರು ಆದಾಯ ತೆರಿಗೆ ಇಲಾಖೆಯ ಪ್ರತಿನಿಧಿಯೇನೂ ಅಲ್ಲ ಎಂದಿರುವ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಹತಾಶೆಯ ಹಳಹಳಿಕೆಯಷ್ಟೇ. ಗುತ್ತಿಗೆದಾರನ ಮನೆಯಲ್ಲಿ ಸಿಕ್ಕಿದ ಇಡುಗಂಟು ಡಿಕೆಶಿ ಅವರದ್ದು ಎಂದು ನಾನು ಹೇಳಿದ್ದೇನೆಯೇ? ನಗದು ಅಭಿವೃದ್ಧಿ ಇಲಾಖೆ ಎಂದರೆ ಅವರದ್ದೇನಾ? ಅವರು ತಿಹಾರ್‌ ಜೈಲಿನ ವಿಷಯವನ್ನೂ ಪ್ರಸ್ತಾಪ ಮಾಡಿದ್ದಾರೆ, ಸರಿ. ಆದರೆ, ತಿಹಾರಿಗೆ ಹೋಗುವ ಭಯ ಅಥವಾ ಗ್ಯಾರಂಟಿ ಸ್ವತಃ ಅವರಿಗೇ ಇದೆ ಎನ್ನುವುದು ನನ್ನ ಸ್ಪಷ್ಟ ಅನುಮಾನ. ಇಲ್ಲದಿದ್ದರೆ ಅವರು ಇಷ್ಟು ತೀವ್ರವಾಗಿ ನನ್ನ ಹೇಳಿಕೆಯ ಬಗ್ಗೆ ಪ್ರತಿಕ್ರಿಯೆ ನೀಡುವ ಅಗತ್ಯವಿರಲಿಲ್ಲ. ಅಂದಹಾಗೆ, ನಾನು ಐಟಿ ಪ್ರತಿನಿಧಿಯೂ ಅಲ್ಲ, ಇ.ಡಿ ಉದ್ಯೋಗಿಯೂ ಅಲ್ಲ. ಒಬ್ಬ ಹುಲು ಮಾನವನಷ್ಟೇ.. ಕೆಲವರ ಭ್ರಮೆಗಳಿಗೆ ನಾನೇನು ಮಾಡಲಿ?‌ ಎಂದು ಕುಮಾರಸ್ವಾಮಿ ಕೇಳಿದ್ದಾರೆ.

ಇದನ್ನೂ ಓದಿ: ಕಾಂಗ್ರೆಸ್​ ಅಧಿಕಾರಕ್ಕೆ ಬಂದ ಮೇಲೆ ದೌರ್ಜನ್ಯ ಮೇರೆ ಮೀರಿದೆ: ಹೆಚ್​ ಡಿ ಕುಮಾರಸ್ವಾಮಿ

Last Updated : Oct 15, 2023, 4:57 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.