ಬೆಂಗಳೂರು : ಪೊಲೀಸ್ ಅಧಿಕಾರಿಗಳು ಅಕ್ರಮ ಆಸ್ತಿ ಮಾಡುವುದು ಅಪರಾಧ. ಅದರಲ್ಲೂ ಐಪಿಎಸ್ ಅಧಿಕಾರಿಗಳ ಭ್ರಷ್ಟಾಚಾರ ಬೇಲಿಯೇ ಎದ್ದು ಹೊಲ ಮೇಯ್ದಂತೆ. ಈ ನಿಟ್ಟಿನಲ್ಲಿ ಭ್ರಷ್ಟರನ್ನು ಯಾವುದೇ ಕಾರಣಕ್ಕೂ ಬಿಡಬಾರದು ಎಂದು ಐಜಿಪಿ ಕರಕುಶಲ ನಿಗಮದ ನಿರ್ದೇಶಕಿ ಡಿ.ರೂಪಾ ಸಿಡಿದೆದ್ದಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಪೋಸ್ಟ್ ಹಾಕಿರುವ ಅವರು, ಐಪಿಎಸ್ ಆಗಲಿ, ಯಾರೇ ಆಗಲಿ ಭ್ರಷ್ಟರ ಮೇಲೆ ಕ್ರಮ ಆಗಬೇಕು. ಉನ್ನತ ಮಟ್ಟದ ತನಿಖೆ ನಡೆಯಬೇಕು. ಯಾರ ಹೆಸರನ್ನು ಹೇಳದೆ ಭ್ರಷ್ಟರ ವಿರುದ್ಧ ಮಹಿಳಾ ಅಧಿಕಾರಿ ವಾಗ್ದಾಳಿ ನಡೆಸಿದ್ದಾರೆ.
ಇತ್ತೀಚೆಗೆ ಹಲವು ಪೊಲೀಸ್ ಅಧಿಕಾರಿಗಳ ವಿರುದ್ಧ ಅಕ್ರಮ ಆಸ್ತಿ ಆರೋಪ ಕೇಳಿ ಬಂದಿತ್ತು. ಈ ಹಿಂದೆಯೂ ಪೊಲೀಸ್ ಇಲಾಖೆಯಲ್ಲಿನ ಭ್ರಷ್ಟಾಚಾರದ ಬಗ್ಗೆಯೂ ಡಿ.ರೂಪಾ ಮಾತಾಡಿದ್ದರು. ಇದೀಗ ಐಪಿಎಸ್ ಭ್ರಷ್ಟಾಚಾರದ ವಿರುದ್ಧ ಆಕ್ರೋಶ ವ್ಯಕ್ತಡಿಸಿದ್ದಾರೆ.