ಬೆಂಗಳೂರು: ಕೆ.ಎಸ್. ಈಶ್ವರಪ್ಪ ಅವರಂತಹ ಹಿರಿಯ ಸಚಿವರೇ ಸಿಎಂ ವಿರುದ್ಧ ರಾಜ್ಯಪಾಲರಿಗೆ ಪತ್ರ ಬರೆಯುತ್ತಾರೆ ಎಂದರೆ ಹೇಗೆ?. ನಾಲ್ಕು ಗೋಡೆಗಳ ಮಧ್ಯೆ ಚರ್ಚಿಸಿ ಹರಿಸಿಕೊಳ್ಳಬೇಕಿತ್ತು ಎಂದು ಶಾಸಕ ಎಂ.ಪಿ. ರೇಣುಕಾಚಾರ್ಯ ಹೇಳಿದರು.
ತಮ್ಮ ನಿವಾಸದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ಈಗ ಉಪಚುನಾವಣೆ ನಡೆಯುತ್ತಿರುವ ಸಂದರ್ಭದಲ್ಲಿ ಅವರು ಹೀಗೆ ಮಾಡಿರುವುದರಿಂದ ಉಪ ಚುನಾವಣೆ ಮೇಲೆ ಪರಿಣಾಮ ಬೀರುವುದಿಲ್ಲವೇ? ಪಕ್ಷದ ಇಮೇಜ್ ಹಾಳಾಗುವುದಿಲ್ಲವೇ ಎಂದು ಪ್ರಶ್ನಿಸಿದರು.
ನಾವು 60 ಶಾಸಕರು ಸಿಎಂ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಅನುದಾನಕ್ಕೆ ಮನವಿ ಮಾಡಿದ್ದರಿಂದ ಅವರು ಬಿಡುಗಡೆ ಮಾಡಿದ್ದಾರೆ. ಅದರಲ್ಲಿ ತಪ್ಪೇನಿದೆ? ಈ ಮೊದಲು ಈಶ್ವರಪ್ಪ ಅವರಿಗೂ ಭೇಟಿ ಮಾಡಿ ಮನವಿ ಮಾಡಿದ್ದೆವು ಆದರೆ, ಅವರು ಸ್ಪಂದಿಸಿರಲಿಲ್ಲ. ಹೀಗಾಗಿ ವಿಧಿಯಿಲ್ಲದೆ ಸಿಎಂ ಅವರನ್ನು ಭೇಟಿ ಮಾಡಬೇಕಾಯಿತು ಎಂದು ಹೇಳಿದರು.
ಓದಿ: ರಾಜ್ಯಪಾಲರಿಗೆ ಪತ್ರ ಬರೆದಿದ್ದು ಸರಿಯಲ್ಲ: ಈಶ್ವರಪ್ಪ ನಡೆಗೆ ಅರುಣ್ ಸಿಂಗ್ ಅಸಮಾಧಾನ