ಬೆಂಗಳೂರು: ಅಕ್ರಮವಾಗಿ ಕಾರಿನಲ್ಲಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತರು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ದೇವನಹಳ್ಳಿ ಮಾರ್ಗದಿಂದ ಬೆಂಗಳೂರಿನ ಹೆಣ್ಣೂರು ಮುಖ್ಯ ರಸ್ತೆಯಲ್ಲಿ ಗೋಮಾಂಸವನ್ನು ಮಾರುತಿ ಓಮ್ನಿ KA 03 MH 1341 ವಾಹನದಲ್ಲಿ ಸಾಗಿಸಲಾಗುತ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ಹಿಂದೂ ಜಾಗರಣ ವೇದಿಕೆ ಮತ್ತು ಆರ್‌ಎಸ್‌ಎಸ್ ಕಾರ್ಯಕರ್ತರು ವಾಹನವನ್ನು ತಡೆದು ನಿಲ್ಲಿಸಿದ್ದಾರೆ. ಈ ವೇಳೆ ವಾಹನದಲ್ಲಿ ಗೋಮಾಂಸ ಇರುವುದು ಗೊತ್ತಾಗಿದೆ.
ಈ ಬಗ್ಗೆ ಚಾಲಕನನ್ನು ವಿಚಾರಿಸಿದಾಗ ಯಾವುದೇ ರೀತಿಯಾದ ಮಾಹಿತಿ ಹಾಗೂ ದಾಖಲೆ ಇರಲಿಲ್ಲ. ಗೋವುಗಳನ್ನು ಕಳ್ಳತನ ಮಾಡಿ ಅಕ್ರಮವಾಗಿ ಮಾಂಸ ಮಾಡಿರುವುದಾಗಿ ತಿಳಿದುಬಂದಿದೆ. ಕೂಡಲೇ ಸ್ಥಳೀಯ ಹೆಣ್ಣೂರು ಮತ್ತು ಬಾಣಸವಾಡಿ ಪೊಲೀಸ್ ಠಾಣೆಗೆ ಮಾಹಿತಿಯನ್ನು ನೀಡಿ, ವಾಹನ ಮತ್ತು ಅದರಲ್ಲಿದ್ದ ಚಾಲಕ ಸೈಯದ್ ಸಾದಿರ್ ಮತ್ತು ಮಾಲೀಕರಾದ ಜಾಹಿದ್ ಮೇಲೆ ಕೇಸ್ ದಾಖಲಿಸಿ ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಲಾಗಿದ್ದು ವಿಚಾರಣೆ ನಡೆಯುತ್ತಿದೆ.