ETV Bharat / state

ಡಿನೋಟಿಫಿಕೇಶನ್ ಪ್ರಕರಣ: ಬಿಎಸ್​ವೈ ಅರ್ಜಿ ವಿಚಾರಣೆ ಮಾ.26ಕ್ಕೆ ಮುಂದೂಡಿಕೆ - ಉಪ ಮುಖ್ಯಮಂತ್ರಿ

ಬಿ.ಎಸ್.ಯಡಿಯೂರಪ್ಪ ವಿರುದ್ಧದ ಅಕ್ರಮ ಡಿನೋಟಿಫಿಕೇಶನ್ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆಯನ್ನು ಮಾ.26ಕ್ಕೆ ಮುಂದೂಡಲಾಗಿದೆ.

ಬಿ.ಎಸ್.ಯಡಿಯೂರಪ್ಪ
author img

By

Published : Mar 21, 2019, 5:02 AM IST

Updated : Mar 21, 2019, 9:45 AM IST

ಬೆಂಗಳೂರು: ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಅಕ್ರಮ ಡಿನೋಟಿಫಿಕೇಶನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯನ್ನು ನ್ಯಾಯಮೂರ್ತಿ ಅರವಿಂದಕುಮಾರ್ ಅವರನ್ನೊಳಗೊಂಡ ಏಕ ಸದಸ್ಯ ಪೀಠ ವಿಚಾರಣೆ ನಡೆಸಿತು.

ನ್ಯಾಯಾಲಯವು ಅಕ್ರಮ ಡಿನೋಟಿಫಿಕೇಶನ್ ಆರೋಪಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಪೋಲಿಸರಿಗೆ ಹಾಗೂ ದೂರುದಾರ ವಾಸುದೇವರೆಡ್ಡಿ ಅವರಿಗೂ ಮಾ.12ರಂದು ನೋಟಿಸ್ ಜಾರಿಗೊಳಿಸಿತ್ತು. ಆದರೆ, ಬುಧವಾರ ಲೋಕಾಯಕ್ತ ಪರ ವಕೀಲರು ಕಾಲಾವಕಾಶ ಕೇಳಿದ್ದರಿಂದ ಅರ್ಜಿ ವಿಚಾರಣೆಯನ್ನು ಮಾ.26ಕ್ಕೆ ಮುಂದೂಡಿತು.

ಪ್ರಕಣದ ಹಿನ್ನಲೆ:

ನಗರದ ವೈಟ್‌ಫೀಲ್ಡ್ ಮತ್ತು ಎಲೆಕ್ಟ್ರಾನಿಕ್ ಸಿಟಿಯ ಜಾಗವನ್ನು ರಾಜ್ಯ ಸರಕಾರ 2000-2001ರಲ್ಲಿ ಐಟಿ ಕಾರಿಡಾರ್ ಎಂದು ಘೋಷಿಸಲಾಗಿತ್ತು. ಈ ನಿಟ್ಟಿನಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವದ್ಧಿ ಮಂಡಳಿ(ಕೆಐಎಡಿಬಿ) ಮಾರತ್‌ಹಳ್ಳಿ, ಬೆಳ್ಳಂದೂರು, ಸರ್ಜಾಪುರ, ದೇವರಬೀಸನಹಳ್ಳಿ ಕಾಡುಬೀಸನಹಳ್ಳಿ,ಕರಿಯಮ್ಮನ ಅಗ್ರಹಾರ ಸೇರಿ ಸುತ್ತಮುತ್ತಲಿನ ಗ್ರಾಮಗಳಲ್ಲಿನ 434 ಎಕರೆ ಪ್ರದೇಶದ ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿತು.

ಕೆಐಎಡಿಬಿ ವಶಪಡಿಸಿಕೊಂಡಿದ್ದ ದೇವರಬೀಸನಹಳ್ಳಿಯ ಸರ್ವೇ ನಂ 49ರ 4.30 ಎಕರೆ, ಬೆಳ್ಳಂದೂರು ಗ್ರಾಮದ ಸರ್ವೇ ನಂ 46/1ರ 1.17 ಎಕರೆ, ಸರ್ವೇ ನಂ 18ರ 1.10ಎಕರೆ, ಸರ್ವೇ ನಂ 10ರ 33 ಗುಂಟೆಯನ್ನು ಡಿನೋಟಿಫೈ ಮಾಡಲು ಉಪ ಮುಖ್ಯಮಂತ್ರಿಯಾಗಿದ್ದ ಬಿಎಸ್‌ವೈ ಆದೇಶಿಸಿರುವುದು ಅಕ್ರಮವಾಗಿದೆ ಎಂದು ಆರೋಪಿಸಿ ವಾಸುದೇವರೆಡ್ಡಿ ಎಂಬುವರು 2013ರ ಜುಲೈ 10ರಂದು ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು.

KN_BNG_12_19_yadiyurapa_bhavya_7204498
Bhavya

ಬಿಎಸ್‌ವೈ ವಿರುದ್ಧದ  ಅಕ್ರಮ ಡಿನೋಟಿಫಿಕೇಶನ್ ಪ್ರಕರಣ 
ಮಾ.26ಕ್ಕೆ ವಿಚಾರಣೆ ಮುಂದೂಡಿದ ಹೈಕೋರ್ಟ್ 

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ವಿರುದ್ಧದ ಅಕ್ರಮ ಡಿನೋಟಿಫಿಕೇಶನ್ ಆರೋಪದ  ಪ್ರಕರಣಕ್ಕೆ ಸಂಬಂಧಿಸಿದಂತೆ ಯಡಿಯೂರಪ್ಪ ಸಲ್ಲಿಸಿರುವ ಅರ್ಜಿ ವಿಚಾರಣೆ ನ್ಯಾಯಮೂರ್ತಿ ಅರವಿಂದಕುಮಾರ್ ಅವರಿದ್ದ ಏಕಸದಸ್ಯ ನ್ಯಾಯಪೀಠ ದಲ್ಲಿ ನಡೆಯಿತು.ನ್ಯಾಯಾಲಯವು  ಅಕ್ರಮ ಡಿನೋಟಿಫಿಕೇಶನ್ ಆರೋಪಕ್ಕೆ  ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರಿಗೆ ಹಾಗೂ ದೂರುದಾರ ವಾಸುದೇವರೆಡ್ಡಿಗೂ ಮಾ.12ರಂದು  ನೋಟಿಸ್ ಜಾರಿಗೊಳಿಸಿತ್ತು. ಆದರೆ, ಬುಧವಾರ ಲೋಕಾಯಕ್ತ ಪರ ವಕೀಲರು ಕಾಲಾವಕಾಶ ಕೇಳಿದ್ದರಿಂದ ಅರ್ಜಿ ವಿಚಾರಣೆಯನ್ನು ಮಾ.26ಕ್ಕೆ ಮುಂದೂಡಿತು.

ಪ್ರಕಣವೇನು: ನಗರದ ವೈಟ್‌ಫೀಲ್ಡ್ ಮತ್ತು ಎಲೆಕ್ಟ್ರಾನಿಕ್ ಸಿಟಿಯ ಜಾಗವನ್ನು ರಾಜ್ಯ ಸರಕಾರ 2000-2001ರಲ್ಲಿ ಐಟಿ ಕಾರಿಡಾರ್ ಎಂದು ಘೋಷಿಸಿತ್ತು. ಈ ನಿಟ್ಟಿನಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶಾಭಿವದ್ಧಿ ಮಂಡಳಿ(ಕೆ ಐಎಡಿಬಿ) ಮಾರತ್‌ಹಳ್ಳಿ, ಬೆಳ್ಳಂದೂರು, ಸರ್ಜಾಪುರ, ದೇವರಬೀಸನಹಳ್ಳಿ, ಕಾಡುಬೀಸನಹಳ್ಳಿ, ಕರಿಯಮ್ಮನ ಅಗ್ರಹಾರ ಸೇರಿ ಸುತ್ತಮುತ್ತಲಿನ ಗ್ರಾಮಗಳಲ್ಲಿನ 434 ಎಕರೆ ಪ್ರದೇಶದ ಸ್ವಾಧೀನಕ್ಕೆ ಅಧಿಸೂಚನೆ ಹೊರಡಿಸಿತು.ಕೆಐಎಡಿಬಿ ವಶಪಡಿಸಿಕೊಂಡಿದ್ದ ದೇವರಬೀಸನಹಳ್ಳಿಯ ಸರ್ವೇ ನಂ 49ರ 4.30 ಎಕರೆ, ಬೆಳ್ಳಂದೂರು ಗ್ರಾಮದ ಸರ್ವೇ ನಂ 46/1ರ 1.17 ಎಕರೆ, ಸರ್ವೇ ನಂ 18ರ 1.10ಎಕರೆ, ಸರ್ವೇ ನಂ 10ರ 33 ಗುಂಟೆಯನ್ನು ಡಿನೋಟಿಫೈ ಮಾಡಲು ಉಪ ಮುಖ್ಯಮಂತ್ರಿಯಾಗಿದ್ದ ಬಿಎಸ್‌ವೈ  ಅದೇಶಿಸಿರುವುದು ಅಕ್ರಮವಾಗಿದೆ ಎಂದು ಆರೋಪಿಸಿ ವಾಸುದೇವರೆಡ್ಡಿ ಎಂಬುವರು 2013ರ ಜುಲೈ 10ರಂದು ಲೋಕಾಯುಕ್ತ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ  ದೂರು ದಾಖಲಿಸಿದ್ದರು.  

Last Updated : Mar 21, 2019, 9:45 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.