ಬೆಂಗಳೂರು: ಅಕ್ರಮ ಆಸ್ತಿ ಸಂಪಾದನೆಯಡಿ ಜೈಲು ಶಿಕ್ಷೆ ಅನುಭವಿಸಿರುವ ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ದಿ.ಜಯಲಲಿತಾ ಅವರ ಆಪ್ತೆ ವಿ.ಶಶಿಕಲಾ ಹಾಗೂ ಜೈಲಾಧಿಕಾರಿಗಳಿಗೆ ಮತ್ತೆ ಸಂಕಷ್ಟ ಎದುರಾಗಿದೆ. ಜೈಲಿನಲ್ಲಿ ರಾಜಾತಿಥ್ಯ ಕಲ್ಪಿಸಲು ಶಶಿಕಲಾರಿಂದ ಲಂಚ ಪಡೆದ ಆರೋಪ ಪ್ರಕರಣದ ತನಿಖೆ ಕೈಗೊಂಡಿದ್ದ ಎಸಿಬಿ ಇದೀಗ ಕೋರ್ಟ್ಗೆ ಚಾರ್ಜ್ ಶೀಟ್ ಸಲ್ಲಿಸಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದ ಶಶಿಕಲಾ, ಇಳವರಸಿಯಿಂದ ಹಣ ಪಡೆದು ರಾಜಾತಿಥ್ಯ ಕಲ್ಪಿಸಿದ ಆರೋಪದಡಿ ಆಗಿನ ಜೈಲಾಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಕೋರ್ಟ್ಗೆ ಸಲ್ಲಿಸಿದ ಚಾರ್ಜ್ ಶೀಟ್ ನಲ್ಲಿ ಹೆಸರು ಉಲ್ಲೇಖಿಸಲಾಗಿದೆ.
ಪ್ರಕರಣದಲ್ಲಿ ಹಿರಿಯ ಪೊಲೀಸ್ ಅಧಿಕಾರಿ ಹಾಗೂ ಸಿಬ್ಬಂದಿ ವಿರುದ್ಧ ಅಪಾದನೆ ಹಿನ್ನೆಲೆ ಅವರ ವಿರುದ್ಧ ಭ್ರಷ್ಟಾಚಾರ ತಡೆ ಕಾಯ್ದೆಯಡಿ ಪ್ರಕರಣ ದಾಖಲಿಸಲು ಹಾಗೂ ಪ್ರಾಸಿಕ್ಯೂಷನ್ಗೆ ರಾಜ್ಯ ಸರ್ಕಾರ ಪೂರ್ವಾನುಮತಿ ನೀಡಿತ್ತು. 2017ರಂದು ಅಕ್ರಮ ಆಸ್ತಿಗಳಿಕೆ ಪ್ರಕರಣದಡಿ ಜೈಲು ಸೇರಿದ್ದ ಶಶಿಕಲಾ ಹಾಗೂ ಇಳವರಸಿ 2021ರಲ್ಲಿ ಪರಪ್ಪನ ಅಗ್ರಹಾರ ಜೈಲಿನಿಂದ ಬಿಡುಗಡೆಯಾಗಿದ್ದರು.
ಜಾಹೀರಾತು: ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ