ಬೆಂಗಳೂರು: ಲಾಕ್ಡೌನ್ ನಡುವೆ ಅಕ್ರಮ ಮದ್ಯ ಮಾರಾಟ, ಸಾಗಣೆ ಪ್ರಕರಣಗಳು ಹೆಚ್ಚಾಗುತ್ತಿವೆ.
ನಗರದಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಿರುವ ಸಿಸಿಬಿ ಪೊಲೀಸರು, ಆರೋಪಿಯಿಂದ 67 ಸಾವಿರ ಮೌಲ್ಯದ ಮದ್ಯದ ಬಾಟಲ್ ಹಾಗೂ ಕಾರನ್ನು ವಶಪಡಿಸಿಕೊಂಡಿದ್ದಾರೆ.
ಶಂಕರ್ ಬಂಧಿತ ಆರೋಪಿ. ನಗರದ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈತ ಇತರೆ ನಾಲ್ವರ ಜೊತೆ ವಾಸವಾಗಿದ್ದು, ಮನೆಯಲ್ಲಿಯೇ ಅಕ್ರಮವಾಗಿ ಮದ್ಯ ಶೇಖರಣೆ ಮಾಡಿ, ಸಾರ್ವಜನಿಕರಿಗೆ ಹೆಚ್ವಿನ ಬೆಲೆಗೆ ಮಾರಾಟ ಮಾಡಿ ಹೆಚ್ವು ಹಣಗಳಿಸುತ್ತಿದ್ದ. ಘಟನೆಗೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳು ತಲೆಮೆರೆಸಿಕೊಂಡಿದ್ದಾರೆ.