ಬೆಂಗಳೂರು: ರೈತರಿಂದ ಗಾಂಜಾ ಖರೀದಿ ಮಾಡಿ ರೈಲಿನ ಮೂಲಕ ನಗರಕ್ಕೆ ತಂದು ವಿವಿಧೆಡೆ ಅಕ್ರಮವಾಗಿ ಮಾರಾಟ ಮಾಡುತ್ತಿದ್ದವರನ್ನು ಪೊಲೀಸರು ಬಂಧಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ಬೇಗೂರು ಪೊಲೀಸರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮೊಹಮ್ಮದ್ ಅಲಂಗೀರ್, ಮೊಹಮ್ಮದ್ ರಿಪುನ್, ಮೋಹರ್ ಆಲಿ ಬಂಧಿತ ಆರೋಪಿಗಳು.
ಈ ಆರೋಪಿಗಳು ಬೇಗೂರು ಪೊಲೀಸ್ ಠಾಣೆ ವ್ಯಾಪ್ತಿಯ ವಿಶ್ವಪ್ರಿಯ ಲೇಔಟ್ನಲ್ಲಿರುವ ಮುನೇಶ್ವರ ದೇವಸ್ಥಾನದ ಹಿಂಭಾಗದ ಕಂಪೌಂಡ್ ಒಳಗಡೆ ಗಾಂಜಾ ಮಾರಾಟ ಮಾಡುತ್ತಿದ್ದರು.
ಆರೋಪಿಗಳ ತನಿಖೆ ನಡೆಸಿದಾಗ ಆರೋಪಿಗಳು ಮೂಲತಃ ಪಶ್ಚಿಮ ಬಂಗಾಳ ರಾಜ್ಯಕ್ಕೆ ಸೇರಿದವರಾಗಿದ್ದು, ಪಶ್ಚಿಮ ಬಂಗಾಳ ರೈತರಿಂದ ಗಾಂಜಾ ತಂದು ಅಕ್ರಮವಾಗಿ ಮಾರಾಟ ಮಾಡುತ್ತಿದ್ದರು. ಸದ್ಯ ಆರೋಪಿಗಳ ಬಳಿಯಿಂದ ನಾಲ್ಕು ಲಕ್ಷ ರೂ. ಮೌಲ್ಯದ 11 ಕೆಜಿ ಗಾಂಜಾ ವಶಪಡಿಸಿಕೊಂಡಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.