ETV Bharat / state

ಕಾಳಸಂತೆಯಲ್ಲಿ ರೆಮ್​ಡೆಸಿವಿರ್ ಮಾರಾಟ: ಬೆಂಗಳೂರಿನಲ್ಲಿ 6 ಮಂದಿ ಬಂಧನ

author img

By

Published : May 6, 2021, 1:34 PM IST

ಕಾಳಸಂತೆಯಲ್ಲಿ ರೆಮ್​ಡೆಸಿವಿರ್ ಚುಚ್ಚುಮದ್ದು ಮಾರಾಟ ಮಾಡುತ್ತಿದ್ದ 6 ಜನರನ್ನು ಬೆಂಗಳೂರು ಉತ್ತರ ವಿಭಾಗದ ಪೊಲೀಸರು ಬಂಧಿಸಿದ್ದಾರೆ.

Bangalore
ಬಂಧಿತರು

ಬೆಂಗಳೂರು: ಕೊರೊನಾ ಬಿಕ್ಕಟ್ಟು ನಡುವೆಯೂ ಕಾಳಸಂತೆಯಲ್ಲಿ ರೆಮ್​ಡೆಸಿವಿರ್ ಚುಚ್ಚುಮದ್ದು ಮಾರಾಟ ಮಾಡುತ್ತಿದ್ದ ಪ್ರತ್ಯೇಕ ಮೂರು ಕಡೆಗಳಲ್ಲಿ ಉತ್ತರ ವಿಭಾಗದ ಪೊಲೀಸರು ದಾಳಿ ನಡೆಸಿ 6 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.

ಜನಾರ್ಧನ್, ದೀಪಕ್, ಲೋಕೇಶ್, ಜಾನಿ, ದಿನೇಶ್ ಹಾಗೂ ಶಂಕರ್ ಬಂಧಿತ ಆರೋಪಿಗಳು. ಬಂಧಿತ ಆರೋಪಿಗಳೆಲ್ಲ ಖಾಸಗಿ ಆಸ್ಪತ್ರೆಯಲ್ಲಿ ಮೆಡಿಕಲ್ ರೀಪ್ರಸೆಂಟೆಟಿವ್ ಆಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ.

ಬಂಧಿತರಿಂದ 10ಕ್ಕಿಂತ ಅಧಿಕ ರೆಮ್​​ಡೆಸಿವಿರ್ ವಶಕ್ಕೆ‌ ಪಡೆದುಕೊಳ್ಳಲಾಗಿದೆ ಎಂದು ನಗರ ಉತ್ತರ ವಿಭಾಗದ ಡಿಸಿಪಿ ಧರ್ಮೇಂದ್ರ ಕುಮಾರ್ ಮೀನಾ ತಿಳಿಸಿದ್ದಾರೆ. ಆಸ್ಪತ್ರೆಯಲ್ಲಿ ಲಭ್ಯವಾಗುವ ಕೊರೊನಾ ಜೀವ ರಕ್ಷಕ ರೆಮ್​ಡೆಸಿವಿರ್ ಚುಚ್ಚುಮದ್ದು ಒಂದಕ್ಕೆ ಸಾವಿರಾರು ರೂ.ನಂತೆ ಮಾರಾಟ ಮಾಡಿ ಅಕ್ರಮವಾಗಿ ಹಣ ಸಂಪಾದನೆ ಮಾಡುತ್ತಿದ್ದರು ಎನ್ನಲಾಗಿದೆ.

ಸದ್ಯ ಆರೋಪಿಗಳ ವಿರುದ್ಧ ಜೆ.ಸಿ. ನಗರ ಪೊಲೀಸ್ ಠಾಣೆಯಲ್ಲಿ ಮೂರು ಪ್ರಕರಣ ಹಾಗೂ ಸುಬ್ರಹ್ಮಣ್ಯನಗರ ಒಂದು ಪ್ರಕರಣ ಸೇರಿದಂತೆ ಒಟ್ಟು ನಾಲ್ಕು ಪ್ರಕರಣ ದಾಖಲಾಗಿವೆ. ಇನ್ನು 6 ಮಂದಿ ಆರೋಪಿಗಳನ್ನು ಬಂಧಿಸಿ ಹೆಚ್ಚಿನ ವಿಚಾರಣೆಗೆ ಒಳಪಡಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸಿಸಿಬಿ ಪೊಲೀಸರು ಇಂದು ಬೆಳಗ್ಗೆಯಷ್ಟೇ ರೆಮ್​​ಡೆಸಿವಿರ್ ಮಾರಾಟ ಮಾಡುತ್ತಿದ್ದ ನಾಲ್ವರು ಆರೋಪಿಗಳನ್ನು ಬಂಧಿಸಿದ್ದರು.

ಓದಿ: ಕಾಳಸಂತೆಯಲ್ಲಿ ರೆಮ್​ಡಿಸಿವಿರ್ ಮಾರಾಟ: ಬೆಂಗಳೂರಿನಲ್ಲಿ ನಾಲ್ವರ ಬಂಧನ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.