ದೇವನಹಳ್ಳಿ: ಒಳ ಉಡುಪಿನಲ್ಲಿಟ್ಟು ಚಿನ್ನವನ್ನು ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ ಪ್ರಯಾಣಿಕ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ. ಬಂಧಿತನಿಂದ ಒಂದು ಕೆ.ಜಿ ಚಿನ್ನ ಜಪ್ತಿ ಮಾಡಲಾಗಿದೆ. ಡಿಸೆಂಬರ್ 5 ರಂದು ವಿಮಾನದಲ್ಲಿ ಮಸ್ಕತ್‌ನಿಂದ ದೇವನಹಳ್ಳಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಯಾಣಿಕನನ್ನು ಕಸ್ಟಮ್ಸ್ ಅಧಿಕಾರಿಗಳು ತಪಾಸಣೆಗೆ ಒಳಪಡಿಸಿದ್ದರು. ಈ ವೇಳೆ ಆರೋಪಿಯು ಒಳ ಉಡುಪಿನಲ್ಲಿ ಪ್ಲಾಸ್ಟಿಕ್ ಕವರ್‌ನಲ್ಲಿ ಚಿನ್ನ ಬಚ್ಚಿಟ್ಟಿದ್ದ ವಿಚಾರ ಬಯಲಾಗಿದೆ.
ಇದನ್ನೂ ಓದಿ:ಭೂ ಹಗರಣ ಸಂಬಂಧ ಸಿದ್ದರಾಮಯ್ಯ ನೇರ ಉತ್ತರ ನೀಡಲಿ: ಎನ್ ಆರ್ ರಮೇಶ್