ETV Bharat / state

ಕೋಲಾರ ಸಹಕಾರ ಹಾಲು ಒಕ್ಕೂಟದ ನೇಮಕಾತಿಯಲ್ಲಿ ಅಕ್ರಮ: ತನಿಖೆಗೆ ಮಾಜಿ ಸಚಿವ ಸುಧಾಕರ್ ಆಗ್ರಹ

ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟದ ನೇಮಕಾತಿಯಲ್ಲಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಪ್ರತಿಭಾವಂತ ಉದ್ಯೋಗಾಕಾಂಕ್ಷಿಗಳ ಹಿತದೃಷ್ಟಿಯಿಂದ ನಿಷ್ಪಕ್ಷಪಾತ ತನಿಖೆಗೆ ಆದೇಶ ನೀಡಬೇಕು ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್‌ ಒತ್ತಾಯಿಸಿದ್ದಾರೆ.

Former Minister Dr K Sudhakar
ಮಾಜಿ ಸಚಿವ ಡಾ ಕೆ ಸುಧಾಕರ್‌
author img

By ETV Bharat Karnataka Team

Published : Dec 19, 2023, 9:58 PM IST

ಬೆಂಗಳೂರು:ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟದಲ್ಲಿ (ಕೋಚಿಮುಲ್) ನಡೆಯುತ್ತಿರುವ ನೇಮಕಾತಿಯಲ್ಲಿ ಅಕ್ರಮದ ಆರೋಪ ಕೇಳಿ ಬಂದಿದೆ. ಕೂಡಲೇ ಕಾಂಗ್ರೆಸ್‌ ಸರ್ಕಾರ ಇದರ ತನಿಖೆಗೆ ಆದೇಶಿಸದಿದ್ದರೆ ಹೋರಾಟ ನಡೆಸುವುದಾಗಿ ಮಾಜಿ ಸಚಿವ ಡಾ ಕೆ ಸುಧಾಕರ್‌ ಎಚ್ಚರಿಕೆ ನೀಡಿದ್ದಾರೆ.

ನೇಮಕಾತಿಯಲ್ಲಿ ಭಾರಿ ಅಕ್ರಮ: ಈ ಕುರಿತು ಸರಣಿ ಟ್ವೀಟ್ ಮಾಡಿರುವ ಡಾ.ಕೆ.ಸುಧಾಕರ್‌ ಅವರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲಾ ಸಹಕಾರ ಹಾಲು ಒಕ್ಕೂಟದಲ್ಲಿ (ಕೋಚಿಮುಲ್) ನಡೆಯುತ್ತಿರುವ ನೇಮಕಾತಿಯಲ್ಲಿ ಭಾರಿ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಚಿಕ್ಕಬಳ್ಳಾಪುರಕ್ಕೆ ದಕ್ಕಿದ್ದ ಪ್ರತ್ಯೇಕ ಹಾಲು ಒಕ್ಕೂಟವನ್ನು ರದ್ದು ಮಾಡಿದ ಕಾಣದ ಕೈಗಳು ಹಾಗೂ ಪಟ್ಟಭದ್ರ ಹಿತಾಸಕ್ತಿಗಳ ಬಣ್ಣ ಬಯಲಾಗಿದೆ.

ನೇಮಕಾತಿ ಪ್ರಕ್ರಿಯೆ ಮುಗಿಯುವ ಮುನ್ನ ಆಯ್ಕೆಯಾದ ಅಭ್ಯರ್ಥಿಗಳ ಪಟ್ಟಿ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಅಭ್ಯರ್ಥಿಗಳ ಹೆಸರಿನ ಮುಂದೆ ಅವರನ್ನು ಶಿಫಾರಸು ಮಾಡಿದ ವ್ಯಕ್ತಿಗಳ ಹೆಸರನ್ನು ಸಹ ನಮೂದಿಸಿರುವುದನ್ನು ಗಮನಿಸಿದರೆ ನೇಮಕಾತಿ ಎಷ್ಟು ಪಾರದರ್ಶಕವಾಗಿ ನಡೆದಿದೆ ಎನ್ನುವುದು ತಿಳಿಯುತ್ತದೆ ಎಂದು ಆರೋಪಿಸಿದ್ದಾರೆ. ಇಡೀ ನೇಮಕಾತಿ ಪ್ರಕ್ರಿಯೆ ಒಂದು ದೊಡ್ಡ ಹಗರಣ ಎಂದು ಮೇಲ್ನೋಟಕ್ಕೆ ಸ್ಪಷ್ಟವಾಗಿದೆ. ಪ್ರಾಮಾಣಿಕ ಹಾಗೂ ಪ್ರತಿಭಾವಂತ ಉದ್ಯೋಗಾಕಾಂಕ್ಷಿಗಳ ಹಿತದೃಷ್ಟಿಯಿಂದ ಈ ನೇಮಕಾತಿಯನ್ನು ಕೂಡಲೇ ರದ್ದುಪಡಿಸಿ, ನಿಷ್ಪಕ್ಷಪಾತ ತನಿಖೆಗೆ ಆದೇಶ ನೀಡಬೇಕು ಎಂದು ಮುಖ್ಯಮಂತ್ರಿಗಳಲ್ಲಿ ಆಗ್ರಹಿಸುತ್ತೇನೆ.

ಜಿಲ್ಲೆಗೆ ಸಿಕ್ಕಿದ್ದ ಪ್ರತ್ಯೇಕ ಹಾಲು ಒಕ್ಕೂಟ ರದ್ದು: ಬಿಜೆಪಿ ಸರ್ಕಾರದ ಅವಧಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಗೆ ದಕ್ಕಿದ್ದ ಪ್ರತ್ಯೇಕ ಹಾಲು ಒಕ್ಕೂಟವನ್ನು ಕಾಂಗ್ರೆಸ್ ಸರ್ಕಾರ ಬಂದ ಕೂಡಲೇ ರದ್ದು ಮಾಡಿತು. ಜಿಲ್ಲೆ ರಚನೆಯಾದ 16 ವರ್ಷಗಳ ನಂತರ ಚಿಕ್ಕಬಳ್ಳಾಪುರಕ್ಕೆ ಒಂದು ಪ್ರತ್ಯೇಕ ಹಾಲು ಒಕ್ಕೂಟ ದಕ್ಕಿತೆಂದು ಸಂಭ್ರಮಿಸುವ ಮೊದಲೇ ಕಾಂಗ್ರೆಸ್ ಸರ್ಕಾರ ರೈತರ ಕನಸನ್ನು ನುಚ್ಚು ನೂರು ಮಾಡಿತು ಎಂದು ಕಿಡಿಕಾರಿದ್ದಾರೆ.

ಪ್ರತಿನಿತ್ಯ 3.5 ಲಕ್ಷ ಲೀಟರ್ ಹಾಲು ಉತ್ಪಾದನೆ: ರಾಜ್ಯದಲ್ಲಿ ಹಾಲು ಉತ್ಪಾದನೆ ಮಾಡುವ ಪ್ರಮುಖ ಜಿಲ್ಲೆಗಳಲ್ಲಿ ಚಿಕ್ಕಬಳ್ಳಾಪುರ ಮುಂಚೂಣಿಯಲ್ಲಿದೆ. ಹೈನುಗಾರಿಕೆಯಿಂದಲೇ ಲಕ್ಷಾಂತರ ಕುಟುಂಬಗಳು ಬದುಕು ಕಟ್ಟಿಕೊಂಡಿವೆ. ಜಿಲ್ಲೆಯಲ್ಲಿ ಒಟ್ಟು ಸುಮಾರು 1.75 ಲಕ್ಷ ರಾಸುಗಳಿದ್ದು, ಜಿಲ್ಲೆಯ ಐದು ತಾಲೂಕುಗಳಿಂದ ನಿತ್ಯ ಸುಮಾರು 3.5 ಲಕ್ಷ ಲೀಟರ್ ಹಾಲು ಉತ್ಪಾದನೆಯಾಗುತ್ತದೆ.

2 ಲಕ್ಷ ಲೀಟರ್ ಹಾಲು ಉತ್ಪಾದಿಸುವ ಚಾಮರಾಜನಗರ ಹಾಗೂ 50,000 ಲೀಟರ್ ಹಾಲು ಉತ್ಪಾದಿಸುವ ಬೀದರ್, ಕಲಬುರಗಿ ಜಿಲ್ಲೆಗಳಿಗೆ ಕೂಡ ಪ್ರತ್ಯೇಕ ಹಾಲು ಒಕ್ಕೂಟಗಳಿದ್ದರೂ ಚಿಕ್ಕಬಳ್ಳಾಪುರಕ್ಕೆ ಮಾತ್ರ ಪ್ರತ್ಯೇಕ ಒಕ್ಕೂಟ ನೀಡದೆ ಕಾಂಗ್ರೆಸ್ ಪಕ್ಷ ದಶಕಗಳಿಂದ ಜಿಲ್ಲೆಯ ರೈತರಿಗೆ, ಹೈನುಗಾರಿಕೆ ಉದ್ಯಮಕ್ಕೆ ಅನ್ಯಾಯ ಮಾಡುತ್ತಾ ಬಂದಿದೆ ಎಂದು ಆರೋಪಿಸಿದರು.

ಆಡಳಿತಾತ್ಮಕ ದೃಷ್ಟಿಯಿಂದ, ಜಿಲ್ಲೆಯ ರೈತರ ಹಿತಾಸಕ್ತಿ ಕಾಪಾಡಲು ಪ್ರತ್ಯೇಕ ಹಾಲು ಒಕ್ಕೂಟ ಅಗತ್ಯವಿದೆ ಎಂದು ಹೋರಾಟ ಮಾಡಿ, ಅಂದಿನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಂಪುಟದ ಸದಸ್ಯರನ್ನು ಮನವೊಲಿಸಿ ಚಿಕ್ಕಬಳ್ಳಾಪುರ ಜಿಲ್ಲೆಗೆ ಪ್ರತ್ಯೇಕ ಹಾಲು ಒಕ್ಕೂಟ ತರುವಲ್ಲಿ ಯಶಸ್ವಿಯಾಗಿದ್ದೆವು. ಆದರೆ, ಕಾಂಗ್ರೆಸ್ ಸರ್ಕಾರ ಬಂದ ತಕ್ಷಣ ಒಂದು ವರ್ಷದಿಂದ ನಡೆಯುತ್ತಿದ್ದ ಪ್ರತ್ಯೇಕ ಒಕ್ಕೂಟವನ್ನು ಧಿಡೀರ್​ ನಿಲ್ಲಿಸಿ, ಬಿಜೆಪಿ ಸರ್ಕಾರದ ಆದೇಶವನ್ನು ಏಕಾಏಕಿ ರದ್ದು ಮಾಡಿ, ಜಿಲ್ಲೆಯ ರೈತರ ಹಕ್ಕು ಕಸಿದುಕೊಳ್ಳುವ ಪಾಪದ ಕೆಲಸಕ್ಕೆ ಕೈ ಹಾಕಿತು ಎಂದು ಆಕ್ಷೇಪ ವ್ಯಕ್ತಪಡಿಸಿದರು.

ಈ ನೇಮಕಾತಿ ಹಗರಣ ಗಮನಿಸಿದರೆ, ಪ್ರತ್ಯೇಕ ಒಕ್ಕೂಟವನ್ನು ವಿರೋಧಿಸುವ ಕಾಣದ ಕೈಗಳು ಹಾಗೂ ಪಟ್ಟಭದ್ರ ಹಿತಾಸಕ್ತಿಗಳ ದುರುದ್ದೇಶ ಏನೆಂದು ಅರ್ಥವಾಗುತ್ತಿದೆ. ಈ ನೇಮಕಾತಿ ಪ್ರಕ್ರಿಯೆ ಸಂಪೂರ್ಣ ಪಾರದರ್ಶಕವಾಗಿಲ್ಲ. ಅಕ್ರಮ ನಡೆದಿರುವುದು ಸ್ಪಷ್ಟವಾಗಿ ಗೋಚರಿಸುತ್ತಿದೆ. ಆದ್ದರಿಂದ ಈ ನೇಮಕಾತಿಯನ್ನು ಈ ಕೂಡಲೇ ರದ್ದು ಮಾಡಿ ನಿಷ್ಪಕ್ಷಪಾತ ತನಿಖೆಗೆ ಆದೇಶ ಮಾಡಬೇಕು. ಇಲ್ಲವಾದಲ್ಲಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ನಡೆಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಇದನ್ನೂಓದಿ:ಶರಾವತಿ ಸಂತ್ರಸ್ತರ ಬಾಕಿ ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ನಿರ್ಧಾರ: ಸಚಿವ ಈಶ್ವರ್ ಖಂಡ್ರೆ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.