ಬೆಂಗಳೂರು : ಮಾಗಡಿ ರೋಡ್ ಪೊಲೀಸರು ಕಾರ್ಯಾಚರಣೆ ನಡೆಸಿ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಸುಖದೇವ್ ಬಂಧಿತ ಆರೋಪಿ ಎಂದು ಗುರುತಿಸಲಾಗಿದೆ.
ಬಂಧಿತನಿಂದ 1 ಕೆಜಿ 84 ಗ್ರಾಂ ಅಫೀಮು, 1 ಮೊಬೈಲ್ ಫೋನ್, 9 ಸಾವಿರ ನಗದನ್ನು ವಶಕ್ಕೆ ಪಡೆಯಲಾಗಿದೆ. ಎನ್ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿಯು ರಾಜಾಜಿನಗರ ಬಳಿಯ ಇರುವ ಮಾಗಡಿ ರಸ್ತೆಯಲ್ಲಿ ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.
ಡಿಸಿಪಿ ಸಂಜೀವ್ ಪಾಟೀಲ್ ಮಾಹಿತಿ : ಬೆಂಗಳೂರು ನಗರ ಪಶ್ಚಿಮ ವಿಭಾಗದ ಉಪ ಪೊಲೀಸ್ ಆಯುಕ್ತರು ಮಾಗಡಿ ರಸ್ತೆಯಲ್ಲಿರುವ ಪೊಲೀಸ್ ಠಾಣೆಯಲ್ಲಿ ದಾಖಲಾದ ಪ್ರಕರಣದ ಬಗೆಗೆ ಮಾಹಿತಿ ನೀಡಿದ್ದರು. ಈ ಸಂಬಂಧ ವಿಜಯನಗರ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಕೆ.ನಂಜುಂಡೇಗೌಡ ಅವರ ನೇತೃತ್ವದಲ್ಲಿ ವಿಶೇಷ ಅಪರಾಧ ಪತ್ತೆ ದಳ ರಚಿಸಿ ಆರೋಪಿಗಳ ಪತ್ತೆಗೆ ಮುಂದಾಗಿದ್ದರು.
ಓದಿ: ಉಪ್ಪಿನಂಗಡಿಯಲ್ಲಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನ!
ಪೊಲೀಸ್ ತಂಡಕ್ಕೆ ಮಾಗಡಿ ರಸ್ತೆಯಲ್ಲಿ ವ್ಯಕ್ತಿಯೋರ್ವ ಮಾದಕ ವಸ್ತುಗಳನ್ನು ಮಾರಾಟ ಮಾಡುತ್ತಿದ್ದಾನೆ ಎಂಬುದರ ಕುರಿತಂತೆ ಮಾಹಿತಿ ದೊರೆಯಿತು. ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಯನ್ನು ಮಾಲು ಸಮೇತ ಬಂಧಿಸಿದ್ದಾರೆ.