ಬೆಂಗಳೂರು: ಐಎಂಎ ಬಹುಕೋಟಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ಐಟಿ ವಿಚಾರಣೆಗೆ ಐಪಿಎಸ್ ಅಧಿಕಾರಿ ಅಜಯ್ ಹಿಲೋರಿ ಹಾಜರಾಗಿದ್ದಾರೆ.
ಅಜಯ್ ಹಿಲೋರಿ ಈ ಹಿಂದೆ ಪೂರ್ವ ವಿಭಾಗದ ಡಿಸಿಪಿಯಾಗಿ ಕಾರ್ಯನಿರ್ವಹಿಸಿದ್ದರು. ಇವರು ಐಎಂಎ ವಂಚನೆ ಕೇಸ್ನಲ್ಲಿ ಲಂಚದ ರೂಪದಲ್ಲಿ ಹಣ ಪಡೆದಿದ್ದಾರೆಂಬ ಆರೋಪ ಕೇಳಿ ಬಂದಿತ್ತು. ಈ ಹಿನ್ನೆಲೆ ಎಸ್ಐಟಿ ಅಧಿಕಾರಿಗಳು ವಿಚಾರಣೆಗೆ ಕರೆದಿದ್ದು, ಇಂದು ಎಸ್ಐಟಿ ಅಧಿಕಾರಿಗಳ ಮುಂದೆ ಹಾಜರಾಗಿದ್ದಾರೆ. ಇವರ ವಿಚಾರಣೆಯನ್ನ ಡಿಸಿಪಿ ಗಿರೀಶ್ ಅವರು ಮಾಡಲಿದ್ದಾರೆ.