ಬೆಂಗಳೂರು: ಐ ಮಾನಿಟರಿ ಅಡ್ವೈಸರಿ (ಐಎಂಎ) ಸಂಸ್ಥೆಯ ಬಹುಕೋಟಿ ವಂಚನೆ ಪ್ರಕರಣದಲ್ಲಿ ಸಿಬಿಐ ಅಧಿಕಾರಿಗಳು ಬಂಧಿಸಿದ್ದ ಪಿಡಿ ಕುಮಾರ್ ಅಲಿಯಾಸ್ ಬಿಡಿಎ ಕುಮಾರನಿಗೆ ನಗರದ ವಿಶೇಷ ನ್ಯಾಯಾಲಯ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ.
ಪ್ರಕರಣದಲ್ಲಿ ಜಾಮೀನು ನೀಡುವಂತೆ ಕೋರಿ ಕುಮಾರ ಸಲ್ಲಿಸಿದ್ದ ಅರ್ಜಿಯನ್ನು ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ ಸಿಬಿಐ ವಿಶೇಷ ವಿಚಾರಣೆ ನಡೆಸಿತು. ಬಳಿಕ ಆರೋಪಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿದೆ.
ಐಎಂಎ ಮಾಲೀಕ ಮನ್ಸೂರ್ ಖಾನ್ ನಿಂದ 5 ಕೋಟಿ ರೂಪಾಯಿ ಹಣ ಪಡೆದ ಆರೋಪದಡಿ ಬಿಡಿಎ ಕುಮಾರ್ನನ್ನು ಮೂರು ದಿನಗಳ ಹಿಂದೆ ಸಿಬಿಐ ಅಧಿಕಾಕಾರಿಗಳು ಬಂಧಿಸಿದ್ದರು. ಆ ಬಳಿಕ ಆರೋಪಿ ಜಾಮೀನು ಕೋರಿ ನ್ಯಾಯಾಲಯಕ್ಕೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.