ಬೆಂಗಳೂರು: ಶಾಂತಿನಗರ ಬಸ್ಟಾಂಡ್ ಬಳಿಯಿರುವ ಇಡಿ ಅಧಿಕಾರಿಗಳ ಕಚೇರಿಯಲ್ಲಿ ಆರೋಪಿ ಮನ್ಸೂರ್ ಖಾನ್ನ್ನು ವಿಚಾರಣೆಗೆ ಒಳಪಡಿಸುತ್ತಿರುವ ಮಾಹಿತಿ ಅರಿತು ಸ್ಥಳಕ್ಕೆ ಜಮಾಯಿಸಿದ ಐಎಂಎ ಕಂಪೆನಿಯಲ್ಲಿ ಹಣ ಹೂಡಿಕೆ ಮಾಡಿದವರು ಮನ್ಸೂರ್ ವಿರುದ್ಧ ಧಿಕ್ಕಾರ ಕೂಗಿ, ನ್ಯಾಯ ಸಿಗುವಂತೆ ಒತ್ತಾಯಿಸಿದ್ದಾರೆ.
ಆರೋಪಿಯನ್ನು ಬಂಧಿಸಿದಂತೆ ತ್ವರಿತಗತಿಯಲ್ಲಿ ವಿಚಾರಣೆಗೆ ಒಳಪಡಿಸಿ ಹಣ ಮರಳಿಸುವಂತೆ ಆಗ್ರಹಿಸಿದ್ದಾರೆ.
ಈ ಸಂಬಂಧ ಮನ್ಸೂರ್ ವಿರುದ್ಧ ಭಿತ್ತಿ ಪತ್ರ ಹಿಡಿದು ಘೋಷಣೆ ಕೂಗಿದರು. ಮುಂಜಾಗ್ರತ ಕ್ರಮವಾಗಿ ಸ್ಥಳದಲ್ಲಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದು, ಅಹಿತಕರ ಘಟನೆ ನಡೆಯದಂತೆ ಎಚ್ಚರ ವಹಿಸಿದ್ದಾರೆ.