ETV Bharat / state

IMA scam case: ವಿದೇಶಕ್ಕೆ ತೆರಳಲು ರೋಷನ್ ಬೇಗ್​​ಗೆ ಅನುಮತಿ - ಈಟಿವಿ ಭಾರತ ಕನ್ನಡ

ಐಎಂಎ ಬಹುಕೋಟಿ ವಂಚನೆ ಪ್ರಕರಣದಲ್ಲಿ ಸಿಲುಕಿರುವ ಮಾಜಿ ಸಚಿವ ರೋಷನ್ ಬೇಗ್ ಅವರ ವಿದೇಶಿ ಪ್ರವಾಸಕ್ಕೆ ನ್ಯಾಯಾಲಯ ಷರತ್ತುಬದ್ಧ ಅನುಮತಿ ನೀಡಿದ.

ima-scam-court-permission-for-roshan-baig-to-travel-abroad
ಐಎಂಎ ಬಹುಕೋಟಿ ವಂಚನೆ ಪ್ರಕರಣ: ವಿದೇಶಕ್ಕೆ ತೆರಳಲು ರೋಷನ್ ಬೇಗ್​​ಗೆ ಅನುಮತಿ
author img

By

Published : Aug 6, 2022, 2:51 PM IST

ಬೆಂಗಳೂರು: ಐಎಂಎ ಸಂಸ್ಥೆಯ ಬಹುಕೋಟಿ ವಂಚನೆ ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ರೋಷನ್ ಬೇಗ್ ಅವರಿಗೆ ವಿದೇಶಕ್ಕೆ ತೆರಳಲು ಷರತ್ತುಬದ್ಧ ಅನುಮತಿ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

ದುಬೈನಲ್ಲಿ ತಮ್ಮ ಸೊಸೆಯ ಸಹೋದರನ ವಿವಾಹವಿರುವ ಹಿನ್ನೆಲೆಯಲ್ಲಿ ತೆರಳಲು ಅನುಮತಿ ಕೋರಿ ರೋಷನ್ ಬೇಗ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ಪುರಸ್ಕರಿಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ, ವಿಮಾನ ಬೋರ್ಡಿಂಗ್ ಪಾಸ್ ಹಾಜರುಪಡಿಸಬೇಕು ಹಾಗೂ ಮೊಬೈಲ್ ಸಂಖ್ಯೆ, ಪ್ರಯಾಣದ ವಿವರ ಸಲ್ಲಿಸಬೇಕೆಂದು ಸೂಚಿಸಿತು.

ಅಲ್ಲದೇ, ನ್ಯಾಯಾಲಯ ಆದೇಶಿಸಿದರೆ ಪ್ರಯಾಣ ಮೊಟಕುಗೊಳಿಸಿ ಹಾಜರಾಗಬೇಕು ಎಂಬ ಷರತ್ತುಗಳೊಂದಿಗೆ 15 ದಿನಗಳ ಅವಧಿಗೆ ವಿದೇಶಕ್ಕೆ ತೆರಳಲು ಅನುಮತಿ ನೀಡಿ ಆದೇಶಿಸಿದೆ. ಷರತ್ತು ಉಲ್ಲಂಘಿಸಿದರೆ ಜಾಮೀನು ರದ್ದುಪಡಿಸುವುದಾಗಿಯೂ ನ್ಯಾಯಾಧೀಶ ಬಿ.ಜಯಂತ ಕುಮಾರ್ ತಮ್ಮ ಆದೇಶದಲ್ಲಿ ತಿಳಿಸಿದ್ಧಾರೆ.

ಇದನ್ನೂ ಓದಿ: ಎಸಿಬಿ ವಿಚಾರಣೆಗೆ ಹಾಜರಾದ ಶಾಸಕ ಜಮೀರ್ ಅಹಮದ್ ಖಾನ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.