ಬೆಂಗಳೂರು: ಡಿಜೆ ಹಳ್ಳಿ ಕೆಜಿ ಹಳ್ಳಿ ಗಲಭೆ ಪ್ರಕರಣದ ಹಿನ್ನೆಲೆಯಲ್ಲಿ ಇಂದು ಕಾವೇರಿ ನಿವಾಸದಲ್ಲಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರನ್ನು ಭೋವಿ ಸಮುದಾಯದ ಇಮ್ಮಡಿ ಸಿದ್ದರಾಮೇಶ್ವರ ಶ್ರೀಗಳು ಭೇಟಿ ಮಾಡಿದರು.
ಭೋವಿ ಸಮುದಾಯದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿಗೆ ನ್ಯಾಯ ಕೊಡಿಸಿ. ಮೂರು ತಿಂಗಳು ಆದರೂ ಆರೋಪಿಗಳನ್ನು ಇನ್ನೂ ಬಂಧಿಸಿಲ್ಲ. ಅಖಂಡ ಶ್ರೀನಿವಾಸ್ ಮೂರ್ತಿಯನ್ನು ಜೀವಂತವಾಗಿ ಸುಡಲು ಸಂಪತ್ ರಾಜ್ ಪ್ರಯತ್ನ ಮಾಡಿದ್ದಾರೆ. ಅಖಂಡ ಶ್ರೀನಿವಾಸ್ ಮೂರ್ತಿ ಮೇಲೆ ಸಂಪತ್ ರಾಜ್ ದೌರ್ಜನ್ಯ ಎಸಗಿದ್ದಾರೆ. ಆರೋಪಿ ಸಂಪತ್ ರಾಜ್ನನ್ನು ಇದುವರೆಗೂ ಬಂಧಿಸಿಲ್ಲ ಎಂದು ಸಿಎಂಗೆ ಶ್ರೀಗಳು ಹೇಳಿದರು.
ಡಿಜಿ ಹಳ್ಳಿ ಪ್ರಕರಣಕ್ಕೆ ತಾರ್ಕಿಕ ಅಂತ್ಯ ಕಾಣಿಸುವಂತೆ ಶ್ರೀಗಳ ಮನವಿಗೆ ಆದಷ್ಟು ಬೇಗ ಸಂಪತ್ ರಾಜ್ ಅವರನ್ನು ಬಂಧಿಸುವುದಾಗಿ ಸಿಎಂ ಭರವಸೆ ನೀಡಿದರು.