ETV Bharat / state

ಬೆಂಗಳೂರಿನಲ್ಲಿ 1.59 ಲಕ್ಷ ಗಣೇಶ ಮೂರ್ತಿಗಳ ವಿಸರ್ಜನೆ - ಈಟಿವಿ ಭಾರತ ಕನ್ನಡ

ಬಿಬಿಎಂಪಿ ವ್ಯಾಪ್ತಿಯಲ್ಲಿ ಇದುವರೆಗೆ ಒಟ್ಟು 1,59,980 ಗಣೇಶ ಮೂರ್ತಿಗಳನ್ನು ವಿಸರ್ಜಿಸಲಾಗಿದೆ ಎಂದು ಪಾಲಿಕೆ ತಿಳಿಸಿದೆ.

immersion-of-ganesha-idols-in-the-bengaluru
ಬೆಂಗಳೂರಿನಲ್ಲಿ 1.59 ಲಕ್ಷ ಗಣೇಶ ಮೂರ್ತಿಗಳ ವಿಸರ್ಜನೆ
author img

By

Published : Sep 1, 2022, 4:28 PM IST

ಬೆಂಗಳೂರು : ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ನಿನ್ನೆ ತಡರಾತ್ರಿಯವರೆಗೆ ಮೊಬೈಲ್ ಟ್ಯಾಂಕರ್, ಕಲ್ಯಾಣಿ, ಹೊಂಡಗಳಲ್ಲಿ ಒಟ್ಟು 1,59,980 ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ ಎಂದು ಪಾಲಿಕೆ ತಿಳಿಸಿದೆ.

ನಗರ ವ್ಯಾಪ್ತಿಯಲ್ಲಿ ವಲಯವಾರು ವಿಸರ್ಜನೆ ಮಾಡಿರುವ ಮಣ್ಣಿನ ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್(ಪಿಒಪಿ) ಗಣೇಶ ಮೂರ್ತಿಗಳ ಕುರಿತು ಪಾಲಿಕೆ ಮಾಹಿತಿ ನೀಡಿದ್ದು, ಪಶ್ಚಿಮ ವಲಯ ವ್ಯಾಪ್ತಿಯಲ್ಲಿ 34,471 ಮಣ್ಣಿನ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಿದ್ದರೆ, 306 ಪಿಒಪಿ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಲಾಗಿದೆ ಎಂದು ತಿಳಿಸಿದೆ.

ದಕ್ಷಿಣ ವಲಯದಲ್ಲಿ ಅತಿ ಹೆಚ್ಚು 68,521 ಮಣ್ಣಿನ ಗಣೇಶ ಮೂರ್ತಿ ಮತ್ತು 11,402 ಪಿಒಪಿ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ. ದಾಸರಹಳ್ಳಿ ವಲಯದಲ್ಲಿ 1,382 ಮಣ್ಣಿನ ಗಣೇಶ ಮೂರ್ತಿಗಳನ್ನು, 22 ಪಿಒಪಿ ಗಣೇಶ ಮೂರ್ತಿಗಳನ್ನು ವಿಸರ್ಜಿಸಲಾಗಿದೆ ಎಂದು ತಿಳಿಸಿದೆ.

ಉಳಿದಂತೆ ಪೂರ್ವ ವಲಯದಲ್ಲಿ 12,750 ಮಣ್ಣಿನ ಗಣೇಶ ಮೂರ್ತಿಗಳನ್ನು, ಆರ್​ಆರ್​ ನಗರ ವಲಯದಲ್ಲಿ 14,479 ಮಣ್ಣಿನ ಗಣೇಶ ಮೂರ್ತಿಗಳನ್ನು, 152 ಪಿಒಪಿ ಗಣೇಶ ಮೂರ್ತಿಗಳನ್ನು ಮತ್ತು ಬೊಮ್ಮನಹಳ್ಳಿ ವಲಯ ವ್ಯಾಪ್ತಿಯಲ್ಲಿ 6,136 ಮಣ್ಣಿನ ಗಣೇಶ ಮೂರ್ತಿಗಳನ್ನು ಮತ್ತು 131 ಪಿಒಪಿ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

ಯಲಹಂಕ ವಲಯದಲ್ಲಿ 6000 ಮಣ್ಣಿನ ಗಣೇಶ, 73 ಪಿಒಪಿ ಗಣೇಶ ಮೂರ್ತಿಗಳನ್ನು ಮಹದೇವಪುರ ವಲಯದಲ್ಲಿ 4155 ಮಣ್ಣಿನ ಗಣೇಶ ಮೂರ್ತಿಗಳು, ಪಿಒಪಿ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿದೆ ಎಂದು ತಿಳಿಸಿದೆ.

ಇದನ್ನೂ ಓದಿ : ಕರಾವಳಿಯಲ್ಲಿ ಕಳೆಗಟ್ಟಿದ ಗಣೇಶ ಚತುರ್ಥಿ: ಗಣಪನ ಜೊತೆ ಗಮನ ಸೆಳೆದ ಪುನೀತ್​ ರಾಜ್​ಕುಮಾರ್ ಮೂರ್ತಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.