ಬೆಂಗಳೂರು: ಅನೈತಿಕ ಸಂಬಂಧದಿಂದಾಗಿ ಮಹಿಳೆಯೊರ್ವಳನ್ನು ಮಾರಣಾಂತಿಕವಾಗಿ ಹಲ್ಲೆ ಮಾಡಿ ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಸುಂಕದಕಟ್ಟೆಯಲ್ಲಿ ನಡೆದಿದೆ.
35 ವರ್ಷದ ಗೀತಾ ಮೃತಪಟ್ಟ ಮಹಿಳೆ. ಕಾಮಾಕ್ಷಿಪಾಳ್ಯ ಪೊಲೀಸ್ ಠಾಣೆ ವ್ಯಾಪ್ತಿಯ ಸುಂಕದಕಟ್ಟೆಯ ಶ್ರೀನಿವಾಸ ನಗರದಲ್ಲಿ ಗೀತಾ ಎಂಬಾಕೆ ತನ್ನ ಗಂಡ ಹಾಗೂ ಮಕ್ಕಳೊಂದಿಗೆ ವಾಸವಾಗಿದ್ದಳು. ಪಕ್ಕದಲ್ಲೇ ವಾಸ ಮಾಡಿದ್ದ ಆಟೋ ಚಾಲಕ ಶೇಖರ್ ಜತೆ ಆಕೆ ಸಲುಗೆ ಬೆಳೆಸಿದ್ದಳು. ಆದರೆ, ಇಬ್ಬರ ನಡುವೆ ವೈಮನಸ್ಸು ಉಂಟಾಗಿದ್ದು ಪದೇ ಪದೇ ಜಗಳವಾಗುತ್ತಿತ್ತು.
ಗುರುವಾರ ಬೆಳಗ್ಗೆ ಶೇಖರ್, ಗೀತಾಳನ್ನು ಆಟೋದಲ್ಲಿ ಕರೆದುಕೊಂಡು ಹೋಗಿದ್ದು, ಈ ವೇಳೆ ಇಬ್ಬರ ನಡುವೆ ಜಗಳ ನಡೆದಿದೆ. ಶೇಖರ್ ಕೋಪಗೊಂಡು ಆಕೆಯ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿ ಪರಾರಿಯಾಗಿದ್ದಾನೆ. ರಕ್ತದ ಮಡುವಿನಲ್ಲಿ ಬಿದ್ದ ಆಕೆಯನ್ನ ಸ್ಥಳೀಯರು ಆಸ್ಪತ್ರೆಗೆ ದಾಖಲು ಮಾಡಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃತಪಟ್ಟಿದ್ದಾಳೆ.
ಸದ್ಯ ಕಾಮಾಕ್ಷಿ ಪಾಳ್ಯ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಈ ಕುರಿತು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.