ETV Bharat / state

ಬದ್ಧತೆ ಇದ್ದರೆ ಸದಾಶಿವ ಆಯೋಗದ ವರದಿ ಜಾರಿ ಮಾಡಿ: ಸರ್ಕಾರಕ್ಕೆ ಬೊಮ್ಮಾಯಿ ಆಗ್ರಹ - ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಉತ್ತರಾದಿ ಮಠದಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಶ್ರೀರಾಮನ ಕುರಿತ ಗೀತೆಗಳ ಧ್ವನಿ ಸುರಳಿಯನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಡುಗಡೆಗೊಳಿಸಿದರು.

Felicitation to Basavaraja Bommai
ಬಸವರಾಜ ಬೊಮ್ಮಾಯಿ ಅವರಿಗೆ ಸನ್ಮಾನ
author img

By ETV Bharat Karnataka Team

Published : Jan 19, 2024, 12:14 PM IST

ಬೆಂಗಳೂರು: "ರಾಜ್ಯ ಕಾಂಗ್ರೆಸ್ ನಾಯಕರಿಗೆ ಬದ್ಧತೆ ಇದ್ದರೆ ಮೊದಲು ಸದಾಶಿವ ಆಯೋಗದ ವರದಿಯನ್ನು ಜಾರಿ ಮಾಡಲಿ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು. ಇದೇ ವೇಳೆ, "ಕೇಂದ್ರದ ಮೇಲೆ ಬೆರಳು ತೋರುವ ಮೊದಲು ಮ್ಯಾಚಿಂಗ್ ಗ್ರ್ಯಾಂಟ್ ಬಿಡುಗಡೆ ಮಾಡಿ" ಎಂದರು.

ಬಸವನಗುಡಿಯ ಉತ್ತರಾದಿ ಮಠದಲ್ಲಿಂದು ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ಡಾ.ಜಯಶ್ರೀ ಅರವಿಂದ ಅವರು ಸಂಗೀತ ಸಂಯೋಜನೆ ಮಾಡಿರುವ ಶ್ರೀರಾಮನ ಕುರಿತ ಗೀತೆಗಳ ಧ್ವನಿ ಸುರುಳಿಯನ್ನು ಬೊಮ್ಮಾಯಿ ಬಿಡುಗಡೆ ಮಾಡಿದರು. ನಂತರ ಮಾತನಾಡಿದ ಅವರು, "ರಾಮನ ಪ್ರಾಣ ಪ್ರತಿಷ್ಠಾಪನೆ ಆಗುತ್ತಿರುವ ಸಂದರ್ಭದಲ್ಲಿ ರಾಮನ ಕುರಿತ ಹಾಡು ಬಿಡುಗಡೆ ಆಗುತ್ತಿರುವುದು ಸಂತಸ ತಂದಿದೆ" ಎಂದು ಅಭಿಪ್ರಾಯಪಟ್ಟರು.

"ರಾಜ್ಯದ ವಿಚಾರಗಳಿಗೆ ಸಂಬಂಧಿಸಿದಂತೆ ಎಲ್ಲವನ್ನೂ ಕಾಂಗ್ರೆಸ್ ತಿರುಚುವ ಕೆಲಸ ಮಾಡುತ್ತಿದೆ. ಅನುದಾನದ ವಿಚಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಬಹಳ ದೊಡ್ಡ ಕೆಲಸ ಮಾಡಿದ್ದಾರೆ. 14ನೇ ಹಣಕಾಸಿಗಿಂತ 15ನೇ ಹಣಕಾಸು ಯೋಜನೆಯಲ್ಲಿ 1 ಲಕ್ಷ ಕೋಟಿ ರೂ. ಹೆಚ್ಚಿಗೆ ಬಂದಿದೆ. ಕೇವಲ ಆಯುಷ್ಮಾನ್ ಭಾರತ ಯೊಜನೆ ಅಡಿಯಲ್ಲಿ 62 ಲಕ್ಷ ಜನರಿಗೆ ಹಣ ಬಂದಿದೆ. ಇವರ ಅವಧಿಯಲ್ಲಿ ಆ ಯೋಜನೆಯನ್ನು ಅಳವಡಿಸಿಕೊಳ್ಳಲು ಹಿಂದೇಟು ಹಾಕಿದ್ದರು. ನಂತರ ಯೋಜನೆ ಒಳ್ಳೆಯದಿದೆ ಎಂದು ಒಪ್ಪಿಕೊಂಡರು" ಎಂದು ವಾಗ್ದಾಳಿ ನಡೆಸಿದರು.

"ಇವರು ಮೊದಲು ಮ್ಯಾಚಿಂಗ್ ಗ್ರ್ಯಾಂಟ್ ಬಿಡುಗಡೆ ಮಾಡಬೇಕು. ಅದರಿಂದಾಗಿ ಕೆಲವು ಯೋಜನೆಗಳು ನೇರವಾಗಿ ಫಲಾನುಭವಿಗಳಿಗೆ ತಲುಪುತ್ತದೆ. ಸದಾಶಿವ ಆಯೋಗವನ್ನು ಜಾರಿ ಮಾಡುತ್ತೇವೆ ಅಂತ ಹೇಳುತ್ತಾ ಬಂದಿದ್ದಾರೆ. ಸರ್ಕಾರಕ್ಕೆ ಬದ್ಧತೆ ಇದ್ದರೆ ಸದಾಶಿವ ಆಯೋಗದ ವರದಿ ಜಾರಿ ಮಾಡಲಿ" ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಬಸವನಗುಡಿ ಶಾಸಕ ರವಿ ಸುಬ್ರಮಣ್ಯ, ಉತ್ತರಾದಿ ಮಠದ ಸಂಚಾಲಕ ಸತ್ಯಧ್ಯಾನ ಆಚಾರ್ಯ ಕಟ್ಟಿ, ಡಾ.ಜಯಶ್ರೀ ಅರವಿಂದ ಹಾಜರಿದ್ದರು.

ಇದನ್ನೂ ಓದಿ: 12 ಗಂಟೆ ಕೆಲಸ ಮಾಡುವ ಕಾಯ್ದೆ ವಾಪಸ್​ ಪಡೆದು ಮೊದಲಿನಂತೆ 8 ತಾಸಿಗೆ ಇಳಿಸಲು ಕ್ರಮ: ಸಿಎಂ ಭರವಸೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.