ETV Bharat / state

Guarantee scheme: ಬಿಜೆಪಿ ಸರ್ಕಾರದ ಬೆಲೆ ಏರಿಕೆ ಹೊಡೆತಕ್ಕೆ ತತ್ತರಿಸಿದವರಿಗಾಗಿ ಗ್ಯಾರಂಟಿ ತರಬೇಕಾಯಿತು : ಸಚಿವ ದಿನೇಶ್ ಗುಂಡೂರಾವ್

ಬಿಜೆಪಿ ಮಾಡಿದ್ದ ಟ್ವೀಟ್ ಪ್ರತಿಯಾಗಿ ಸಚಿವ ದಿನೇಶ್ ಗುಂಡೂರಾವ್ ಸರಣಿ ಟ್ವೀಟ್​ ಮಾಡಿದ್ದಾರೆ.

ಸಚಿವ ದಿನೇಶ್ ಗುಂಡೂರಾವ್
ಸಚಿವ ದಿನೇಶ್ ಗುಂಡೂರಾವ್
author img

By

Published : Jun 18, 2023, 7:39 PM IST

ಬೆಂಗಳೂರು : ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿಗಳು ಸರ್ಕಾರದ ಮೇಲೆ ಸಾಕಷ್ಟು ಹೊರ ಆಗುತ್ತಿದೆ. ಹೀಗಿದ್ದರೂ ರಾಜ್ಯದ ಜನಸಾಮಾನ್ಯರ ಹೊರೆ ಇಳಿಸಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಕುರಿತಂತೆ ಸರಣಿ ಟ್ವೀಟ್​ ಮಾಡಿರುವ ದಿನೇಶ್ ಗುಂಡೂರಾವ್ ಅವರು, ಬಿಜೆಪಿಗೆ ತಿರುಗೇಟು ನೀಡಿದ್ದಾರೆ.

ಕೇಂದ್ರ ಬಿಜೆಪಿ ಸರ್ಕಾರದ ತಪ್ಪು ಆರ್ಥಿಕ ನೀತಿಗಳಿಂದ ಬೆಲೆ ಏರಿಕೆ ಬಿಸಿ ಜನಸಾಮಾನ್ಯನಿಗೆ ತಟ್ಟಿದೆ. ಜನರ ಮೇಲಾಗಿರುವ ಬೆಲೆ ಏರಿಕೆಯ ಹೊರೆ ಕಡಿಮೆ ಮಾಡಲೆಂದೇ ಕಾಂಗ್ರೆಸ್ ಐದು ಗ್ಯಾರಂಟಿಗಳನ್ನ ತರಬೇಕಾಯ್ತು ಎಂದು ಹೇಳಿದ್ದಾರೆ. ದಿನೇಶ್ ಗುಂಡೂರಾವ್ ಅವರಿಗೆ ಮಹಿಳೊಯೊಬ್ಬರು ಅಕ್ಕಿ, ಬೇಳೆ, ಕಾಳುಗಳ ಬೆಲೆ ಏರಿಕೆ ಕಡಿಮೆ ಮಾಡಿ ಎಂದು ಮನವಿ ಮಾಡಿದ್ದರು. ಮಹಿಳೆಯ ವಿಡಿಯೋವನ್ನು ಟ್ವೀಟ್ ಮಾಡಿದ್ದ ಬಿಜೆಪಿ ರಾಜ್ಯ ಸರ್ಕಾರದ ವಿರುದ್ಧ ಮಹಿಳೆಯರು ತಿರುಗಿ ಬಿದ್ದಿದ್ದಾರೆ ಎಂದು ಆರೋಪಿಸಿತ್ತು.‌

ಇದನ್ನೂ ಓದಿ : Free Bus : 'ಶಕ್ತಿ ಯೋಜನೆ' ಸರ್ಕಾರಿ ಬಸ್​ಗಳಿಗೆ ಮಾತ್ರ ಸೀಮಿತ, ಖಾಸಗಿ ಬಸ್​ಗಳಿಗೆ ವಿಸ್ತರಣೆಯಿಲ್ಲ‌: ಸಚಿವ ದಿನೇಶ್ ಗುಂಡೂರಾವ್

ಇದೆ ಬಿಜೆಪಿ ಟ್ವೀಟ್ ಗೆ ತಿರುಗೇಟು ನೀಡಿರುವ ದಿನೇಶ್ ಗುಂಡೂರಾವ್, ಬೆಲೆ ಏರಿಕೆ ಕೇಂದ್ರ ಬಿಜೆಪಿ ಸರ್ಕಾರದ ಕುರುಡು ಆರ್ಥಿಕ ನೀತಿಗಳಿಂದ ಆಗಿರುವುದು. ಬೆಲೆ ಏರಿಕೆಗೆ ಮೋದಿಯವರಲ್ಲದೇ ಬೇರೆ ಯಾರು ಕಾರಣ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿಗೆ ಆತ್ಮಸಾಕ್ಷಿಯಿದ್ದರೆ ಬೆಲೆ ಏರಿಕೆಗೆ ಯಾರು ಕಾರಣ ಎಂದು ತಮ್ಮನ್ನ ತಾವು ಪ್ರಶ್ನಿಸಿಕೊಳ್ಳಲಿ ಎಂದಿದ್ದಾರೆ. ಜನಸಾಮಾನ್ಯರಿಗೆ ನೇರವಾಗಿ ಬಿಸಿತಟ್ಟುವಂಥಹ ನಾಲ್ಕು ಉತ್ಪನ್ನಗಳ ಬೆಲೆ ಏರಿಕೆಯ ಲಿಸ್ಟ್ ನೀಡಿರುವ ಗುಂಡೂರಾವ್ ಇದಕ್ಕೆ ಯಾರು ಕಾರಣ ಎಂದು ಪ್ರಶ್ನಿಸಿದ್ದಾರೆ. 65 ರೂ. ಇದ್ದ ಪೆಟ್ರೋಲ್ 103 ಆಯ್ತು, 50 ರೂ. ಇದ್ದ ಡಿಸೇಲ್ 90 ರೂಪಾಯಿಗೆ ಏರಿಸಿದರು. 80 ರೂಪಾಯಿ ಇದ್ದ ಅಡುಗೆ ಎಣ್ಣೆ 170ಕ್ಕೆ, 400 ರೂ. ಇದ್ದ ಸಿಲೆಂಡರ್ ಗ್ಯಾಸ್ 1150 ರೂಗೆ ಏರಿಸಿದ್ದು ನಾವಾ ಪ್ರಧಾನಮಂತ್ರಿ ಮೋದಿಯವರಾ ಎಂದು ಬಿಜೆಪಿಯನ್ನು ಪ್ರಶ್ನಿಸಿದ್ದಾರೆ.

  • 3
    BJPಯವರೇ, ರಾಜ್ಯದ ಮಹಿಳೆಯರು ತಿರುಗಿಬಿದ್ದಿರುವುದು, ಸಿಟ್ಟಿಗೆದ್ದಿರುವುದು ನಮ್ಮ ಮೇಲಲ್ಲ.

    ಅವರ ಸಿಟ್ಟು ಸೆಡವು, ಹತಾಶೆಗಳು ನಿಮ್ಮ ಮೋದಿ ಸರ್ಕಾರದ ಕುರುಡು ಆರ್ಥಿಕ ನೀತಿಗಳ ಬಗ್ಗೆ.

    ಅದು ಈಗಾಗಲೇ ರಾಜ್ಯದ ಫಲಿತಾಂಶದಲ್ಲಿ ಸಾಬೀತಾಗಿದೆ‌‌.

    ಹೀಗಿರುವಾಗ ಆಕಾಶಕ್ಕೆ ಉಗುಳುವ ಮೂರ್ಖತನವೇಕೆ BJPಯವರೆ?

    — Dinesh Gundu Rao/ದಿನೇಶ್ ಗುಂಡೂರಾವ್ (@dineshgrao) June 18, 2023 " class="align-text-top noRightClick twitterSection" data=" ">

ಇಷ್ಟೊಂದು ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯ‌ನ ಹೊರ ಇಳಿಸಲೆಂದೇ ಕಾಂಗ್ರೆಸ್ ಸರ್ಕಾರ ಗೃಹ ಲಕ್ಷ್ಮೀ, ಅನ್ನಭಾಗ್ಯ, ಗೃಹ ಜ್ಯೋತಿಯಂಥಹ ಐದು ಗ್ಯಾರಂಟಿ ಕಾರ್ಯಕ್ರಮಗಳನ್ನು ತರಬೇಕಾಯ್ತು. ಈ ಐದು ಗ್ಯಾರಂಟಿಗಳಿಂದ ಸರ್ಕಾರಕ್ಕೆ ಹೊರೆಯಾಗಬಹುದು. ಆದರೆ, ಜನರನ್ನು ಬೆಲೆ ಏರಿಕೆಯಿಂದ ರಕ್ಷಿಸುವುದು ಮುಖ್ಯವಾಗಿದೆ ಎಂದು ಗುಂಡೂರಾವ್ ತಿಳಿಸಿದ್ದಾರೆ. ರಾಜ್ಯದ ಮಹಿಳೆಯರು ಬಿಜೆಪಿ ವಿರುದ್ಧ ತಿರುಗಿಬಿದ್ದು, ಈ ಬಾರಿ ವಿಧಾನಸಭಾ ಚುನಾವಣೆಯಲ್ಲಿ ಫಲಿತಾಂಶವನ್ನು ಕೊಟ್ಟಿದ್ದಾರೆ. ಬಂದಿರುವ ಫಲಿತಾಂಶದಲ್ಲಿ ಬಿಜೆಪಿ ಬೆಲೆ ಏರಿಕೆ ವಿರುದ್ಧ ಮಹಿಳೆಯರ ಸಿಟ್ಟು ಸ್ಪಷ್ಟವಾಗಿ ಕಾಣಿಸುತ್ತದೆ. ಹೀಗಿರುವಾಗ ಬಿಜೆಪಿ ಆಕಾಶಕ್ಕೆ ಉಗುಳುವ ಮೂರ್ಖತನವನ್ನು ಏಕೆ ಮಾಡುತ್ತಿದೆ ಎಂದು ಗುಂಡೂರಾವ್ ಬಿಜೆಪಿಗೆ ಟಾಂಗ್​ ಕೊಟ್ಟಿದ್ದಾರೆ.

ಇದನ್ನೂ ಓದಿ : Organ Donation : ಧಾರ್ಮಿಕ ಕಟ್ಟುಪಾಡು ಮೀರಿ ಅಂಗಾಂಗ ದಾನ ಮಾಡಿದ ಮುಸ್ಲಿಂ ಕುಟುಂಬ ಸನ್ಮಾನಿಸಿದ ಸಚಿವರು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.