ETV Bharat / state

ರಾಜ್ಯದಲ್ಲಿ ಶೀಘ್ರವೇ ಹೊಸ ಡಿಜಿಟಲ್ ನೀತಿ ಅನುಷ್ಠಾನ : ಸಿಎಂ ಬೊಮ್ಮಾಯಿ - bengaluru latest news

ತಜ್ಞರು ಸಲಹೆ ನೀಡಿದ್ರೆ, ಶೀಘ್ರದಲ್ಲೇ ರಾಜ್ಯದಲ್ಲಿ ಹೊಸ ಡಿಜಿಟಲ್​ ನೀತಿ ಜಾರಿಗೆ ತರುತ್ತೇವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ
author img

By

Published : Aug 23, 2021, 4:35 PM IST

Updated : Aug 23, 2021, 7:59 PM IST

ಬೆಂಗಳೂರು: ರಾಜ್ಯದಲ್ಲಿ ಹೊಸ ಡಿಜಿಟಲೀಕರಣ ನೀತಿಯ ಜತೆಗೆ ಸಂಶೋಧನೆ ಮತ್ತು ಅಭಿವೃದ್ಧಿ ಪಾಲಿಸಿಯನ್ನು ಜಾರಿಗೆ ತರಲಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು.

ಹೊಸ ಡಿಜಿಟಲೀಕರಣ ಜಾರಿಗೆ

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್​ನಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ, 2021-22ನೇ ಸಾಲಿನ ಪ್ರವೇಶ ಪ್ರಕ್ರಿಯೆಗೆ ಚಾಲನೆ ನೀಡುವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ಹೊಸ ಡಿಜಿಟಲೀಕರಣ ನೀತಿಯನ್ನು ಜಾರಿಗೆ ತರಲಿದ್ದೇವೆ. ತಜ್ಞರು ಸಲಹೆಗಳನ್ನು ನೀಡಿದರೆ ಆದಷ್ಟು ಶೀಘ್ರವಾಗಿ ಡಿಜಿಟಲ್ ನೀತಿ ಜಾರಿಗೆ ತರಲು ಅನುಕೂಲವಾಗುತ್ತದೆ. ಅದೇ ರೀತಿ ಮೊದಲ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಐಪ್ಯಾಡ್ ನೀಡಲು ಉದ್ದೇಶಿಸಲಾಗಿದೆ ಎಂದು ಹೇಳಿದರು.

‘ಜಡ್ಡುಕಟ್ಟಿದ ವ್ಯವಸ್ಥೆಗೆ ಮುಕ್ತಿ’

ಪ್ರಸ್ತುತ ಶಿಕ್ಷಣದಲ್ಲಿರುವ ಜಡ್ಡುಕಟ್ಟಿದ ವ್ಯವಸ್ಥೆ ಮತ್ತು ನೀತಿಗೆ ರಾಷ್ಟ್ರೀಯ ಶಿಕ್ಷಣ ನೀತಿಯಿಂದ ವಿಮೋಚನೆ ಸಿಕ್ಕಿದಂತಾಗುತ್ತದೆ. ಶಿಕ್ಷಣಕ್ಕೆ ಇಂದು ನಿಜವಾದ ಸ್ವಾತಂತ್ರ್ಯ ಸಿಕ್ಕಿದ್ದು, ಇಂದು ಮಾತ್ರವಲ್ಲ ಮುಂದಿನ ಜನಾಂಗಕ್ಕೂ ಇದು ಸ್ವಾತಂತ್ರ್ಯವೇ ಆಗಲಿದೆ ಎಂದರು. ರಾಷ್ಟ್ರೀಯ ಶಿಕ್ಷಣ ನೀತಿ ಯಶಸ್ವಿಯಾದರೆ, ಸೆಪ್ಟೆಂಬರ್ 5 ರಂದು ಶಿಕ್ಷಕರ ದಿನಾಚರಣೆ ಆಚರಿಸುವ ರೀತಿಯಲ್ಲೇ ಪ್ರತಿ ವರ್ಷ ಆಗಸ್ಟ್ 23 ರಂದು ಶಿಕ್ಷಣ ದಿನಾಚರಣೆ ಆಚರಿಸುವ ದಿನ ಬರುತ್ತದೆ ಎಂದರು.

ಅನುಷ್ಠಾನವೇ ದೊಡ್ಡ ಸವಾಲು

ಶಿಕ್ಷಣ ವ್ಯವಸ್ಥೆಯ ಮೂಲಭೂತ ಬದಲಾವಣೆಗೆ ರಾಷ್ಟ್ರೀಯ ಶಿಕ್ಷಣ ನೀತಿ ಸಾಕ್ಷ್ಯಿಯಾಗಲಿದೆ. ಅನುಷ್ಠಾನವೇ ದೊಡ್ಡ ಸವಾಲಾಗಿದೆ. ಅದನ್ನು ಬುದ್ದಿವಂತಿಕೆಯಿಂದ ಅನುಷ್ಠಾನ ಮಾಡಬೇಕು. ಇಲಾಖೆ ಆಧಾರಿತ ಶಿಕ್ಷಣದ ಬದಲಿಗೆ ವಿದ್ಯಾರ್ಥಿ ಆಧಾರಿತ ಶಿಕ್ಷಣ ವ್ಯವಸ್ಥೆಯಾಗಿ ಜಾರಿಯಾಗಬೇಕು. ಈ ನಿಟ್ಟಿನಲ್ಲಿ ಎನ್ಇಪಿ ಸಾಕಷ್ಟು ಬದಲಾವಣೆ ತರಲಿದೆ. ವಿದ್ಯಾರ್ಥಿಗಳ ಕ್ರಿಯಾತ್ಮಕತೆ, ಜ್ಞಾನವನ್ನು ಪೂರ್ಣಪ್ರಮಾಣದ ಅಭಿವ್ಯಕ್ತಿಗೆ ಸಹಕಾರಿಯಾಗಲಿದೆ. ವಿದ್ಯಾರ್ಥಿಯ ಕ್ರಿಯಾಶೀಲತೆಗೆ ಆದ್ಯತೆ ನೀಡಲಾಗಿದೆ ಎಂದು ಹೇಳಿದರು.

ತಂತ್ರಜ್ಞಾನವನ್ನೂ ಮೀರಿಸುವ ತಂತ್ರಾಂಶ

ಈ ಹಿಂದೆ ಮೌಲ್ಯಾಧಾರಿತ ಜ್ಞಾನ ಇತ್ತು. ಆ ಜ್ಞಾನಕ್ಕೆ ವಿಜ್ಞಾನ ಸೇರಿತು. ಇದರಿಂದ ಸಂಶೋಧನೆ, ಅನ್ವೇಷಣೆ ಆರಂಭವಾಯಿತು. ವಿಜ್ಞಾನದ ನಂತರ ತಂತ್ರಜ್ಞಾನ ಬಂತು. ತಂತ್ರಜ್ಞಾನವನ್ನೂ ಮೀರಿಸುವ ತಂತ್ರಾಂಶ ವಿಜ್ಞಾನ ಬಂದಿದೆ. ಇದನ್ನು ಪರಿಣಾಮಕಾರಿಯಾಗಿ ಬಳಸಿಕೊಂಡಾಗ ಮಾತ್ರ ಪರಿವರ್ತನೆ ಸಾಧ್ಯ. ಮಕ್ಕಳಿಗೆ ತಂತ್ರಾಂಶ ಜ್ಞಾನವನ್ನು ನೀಡಬೇಕು ಎಂದು ಸಲಹೆ ನೀಡಿದರು.

ಅನುಷ್ಠಾನದಲ್ಲಿ ಸವಾಲುಗಳು : ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನ, 2021-22ನೇ ಸಾಲಿನ ಪ್ರವೇಶ ಪ್ರಕ್ರಿಯೆಗೆ ವರ್ಚುವಲ್ ಮೂಲಕ ಚಾಲನೆ ನೀಡಿ ಮಾತನಾಡಿದ ಕೇಂದ್ರ ಶಿಕ್ಷಣ ಸಚಿವ ಕೇಂದ್ರದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್, ರಾಷ್ಟ್ರೀಯ ಶಿಕ್ಷಣ ನೀತಿಯು ಹೊಸ ಜ್ಞಾನಾಧಾರಿತ ವ್ಯವಸ್ಥೆಯನ್ನು ರಚನೆ ಮಾಡಲಿದೆ. ಜತೆಗೆ ಅನುಷ್ಠಾನದಲ್ಲಿರುವ ಹಲವು ಸವಾಲುಗಳಿಗೆ ಸೂಕ್ಷ್ಮ ರೀತಿಯಲ್ಲಿ ಪರಿಹಾರ ಕಂಡುಕೊಳ್ಳಬೇಕು ಎಂದು ಹೇಳಿದರು.ರಾಷ್ಟ್ರೀಯ ಶಿಕ್ಷಣ ನೀತಿ ಅನುಷ್ಠಾನದಲ್ಲಿ ಕರ್ನಾಟಕ ಸಾಕಷ್ಟು ಮುಂದಿದೆ. ನೀತಿ ಅನುಷ್ಠಾನದಲ್ಲಿ ಎದುರಾಗಬಹುದಾದ ಸವಾಲುಗಳನ್ನು ಸಮರ್ಪಕವಾಗಿ ಎದುರಿಸಬೇಕು ಎಂದು‌ ಸಲಹೆ ನೀಡಿದರು.

ಎಲ್ಲಾ ಸಮಸ್ಯೆಗಳಿಗೆ ಶಿಕ್ಷಣವೇ ಮದ್ದು

ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಮಾತನಾಡಿ, ಐದು ವರ್ಷದ ಸುದೀರ್ಘ ಸಮಾಲೋಚನೆ, ಎಲ್ಲರಿಂದ ಮಾಹಿತಿ ಪಡೆದು ನೀತಿ ರಚಿಸಲಾಗಿದೆ. ಸಾಮಾಜಿಕ ಆರ್ಥಿಕ ಸೇರಿದಂತೆ ಎಲ್ಲ ರೀತಿಯ ಸಮಸ್ಯೆಗೆ ಶಿಕ್ಷಣ ಹಾಗೂ ಕೌಶಲ್ಯತೆಯೇ ಪರಿಹಾರವಾಗಿದೆ. ಗುಣಮಟ್ಟದ ಶಿಕ್ಷಣ ನೀಡಲು ಅಡ್ಡಿಯಾಗುತ್ತಿರುವ ಲೋಪದೋಷಗಳು ರಾಷ್ಟ್ರೀಯ ಶಿಕ್ಷಣ ನೀತಿಯಿಂದ ಪರಿಹಾರ ಸಿಗಲಿದೆ ಎಂದು ಹೇಳಿದರು.

ದೇಶದಲ್ಲಿ ಕರ್ನಾಟಕ ಉನ್ನತ ಮಟ್ಟದ ಸ್ಥಾನ ಪಡೆಯಲು ಶಿಕ್ಷಣದಿಂದಲೇ ಸಾಧ್ಯ. ಮುಂದಿನ ದಿನಗಳಲ್ಲಿ ತಾಂತ್ರಿಕ ಶಿಕ್ಷಣದಲ್ಲೂ ಅಮೂಲಾಗ್ರ ಬದಲಾವಣೆ ಆಗಲಿದೆ.

ಶಿಕ್ಷಣ ವ್ಯವಸ್ಥೆಯಲ್ಲಿ ಬದಲಾವಣೆಯ ಜತೆಗೆ ಬೋಧನೆ ವಿಧಾನದಲ್ಲೂ ಬದಲಾಗಬೇಕು. ಉಪನ್ಯಾಸಕರು ಬದಲಾವಣೆಗೆ ಒಗ್ಗಿಕೊಳ್ಳಬೇಕು. ಸರ್ಕಾರವೂ ಇದಕ್ಕೆ ಬೇಕಾದ ಎಲ್ಲ ಸೌಲಭ್ಯವನ್ನು ಒದಗಿಸಲಿದೆ ಎಂದು ತಿಳಿಸಿದರು.

ಮಾತೃಭಾಷಾ ಶಿಕ್ಷಣಕ್ಕೆ ಆದ್ಯತೆ ನೀಡಿ

ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಮಾತನಾಡಿ, ಈವರೆಗೆ ಮಾತೃಭಾಷೆಯಲ್ಲಿ‌ ಶಿಕ್ಷಣಕ್ಕೆ ಒತ್ತು ನೀಡಿಲ್ಲ.‌ ಎನ್ಇಪಿಯಲ್ಲಿ ಮಕ್ಕಳ ಭಾವನೆ ಅರ್ಥೈಸಿಕೊಂಡು, ಮಾತೃಭಾಷಾ ಶಿಕ್ಷಣಕ್ಕೆ ಆದ್ಯತೆ ನೀಡಿ, ಪರಿಣಾಮಕಾರಿಯಾಗಿ ಅನುಷ್ಠಾನ ಮಾಡಲಿದ್ದೇವೆ ಎಂದರು.

ಸದೃಢ ಸಮಾಜಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿ

ಡಾ.ಕೆ.ಕಸ್ತೂರಿ ರಂಗನ್ ಮಾತನಾಡಿ, ಜ್ಞಾನಾಧಾರಿತ ಸದೃಢ ಸಮಾಜ ನಿರ್ಮಾಣಕ್ಕೆ ರಾಷ್ಟ್ರೀಯ ಶಿಕ್ಷಣ ನೀತಿ ಸಹಕಾರಿಯಾಗಲಿದೆ. ವಿಶ್ವವಿದ್ಯಾಲಯ ವ್ಯವಸ್ಥೆಯಲ್ಲೂ ಒಂದಷ್ಟು ಬದಲಾವಣೆ ಬರಲಿದೆ. ಈ ನೀತಿಯು ಭವಿಷ್ಯದ ಶೈಕ್ಷಣಿಕ ಆದ್ಯತೆಗಳನ್ನು ಆಧರಿಸಿ ರೂಪಿಸಲಾಗಿದೆ ಎಂದು ಹೇಳಿದರು.

ಸಭೆಯಲ್ಲಿ ಸಂಸದ ಪಿ.ಸಿ. ಮೋಹನ್, ಉನ್ನತ ಶಿಕ್ಷಣ ಇಲಾಖೆಯ ಪ್ರಭಾರ ಪ್ರಧಾನ ಕಾರ್ಯದರ್ಶಿ ಕುಮಾರ್ ನಾಯಕ್, ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ್, ಕಾಲೇಜು ಶಿಕ್ಷಣ ಇಲಾಖೆಯ ಆಯುಕ್ತ ಪಿ.ಪ್ರದೀಪ್ ಮತ್ತಿತರರು ಉಪಸ್ಥಿತರಿದ್ದರು.

ಇದನ್ನೂ ಓದಿ: ಶಿವಮೊಗ್ಗ ಸ್ಮಾರ್ಟ್ ಸಿಟಿ ಕಾಮಗಾರಿ ಆದಷ್ಟು ಬೇಗ ಮುಗಿಸುತ್ತೇವೆ: ಸಚಿವ ಕೆ.ಎಸ್. ಈಶ್ವರಪ್ಪ

Last Updated : Aug 23, 2021, 7:59 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.