ETV Bharat / state

ರಸ್ತೆ ಸುರಕ್ಷತಾ ಪ್ರಾಧಿಕಾರದ ಅನುಷ್ಠಾನ.. ಮೊದಲ ಕಂತಿನಲ್ಲಿ ₹2.50 ಕೋಟಿ ಬಿಡುಗಡೆ.. - ರಸ್ತೆ ಸುರಕ್ಷತಾ ಪ್ರಾಧಿಕಾರ

ರಸ್ತೆ ಸುರಕ್ಷತಾ ಪ್ರಾಧಿಕಾರದ ಕ್ರಿಯಾ ಯೋಜನೆಗಳನ್ನು ಜಾರಿಗೊಳಿಸಲು, ಮೊದಲ ತ್ರೈಮಾಸಿಕ ಕಂತಿನ 2.50 ಕೋಟಿ ರೂ.ಯನ್ನು ಸಾರಿಗೆ ಇಲಾಖೆ ಬಿಡುಗಡೆ ಮಾಡಿದೆ..

Implementation of Road Safety Authority
ರಸ್ತೆ ಸುರಕ್ಷತಾ ಪ್ರಾಧಿಕಾರದ ಅನುಷ್ಠಾನ
author img

By

Published : Aug 1, 2020, 4:01 PM IST

ಬೆಂಗಳೂರು : ಕರ್ನಾಟಕ ರಾಜ್ಯ ರಸ್ತೆ ಸುರಕ್ಷತಾ ಪ್ರಾಧಿಕಾರದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಪ್ರಸಕ್ತ ಸಾಲಿನಲ್ಲಿ ಸಾರಿಗೆ ಕಲ್ಯಾಣ ಮತ್ತು ರಸ್ತೆ ಸುರಕ್ಷತೆ ಯೋಜನೆಯಡಿ 10 ಕೋಟಿ ರೂ. ಒದಗಿಸಿದ್ದು, ಮೊದಲ ಕಂತಿನಲ್ಲಿ 2.50 ಕೋಟಿ ರೂ. ಗಳನ್ನು ಬಿಡುಗಡೆ ಮಾಡಿ ಆದೇಶಿಸಲಾಗಿದೆ.

ರಸ್ತೆ ಸುರಕ್ಷತಾ ಪ್ರಾಧಿಕಾರದ ಕ್ರಿಯಾ ಯೋಜನೆಗಳನ್ನು ಜಾರಿಗೊಳಿಸಲು ಮೊದಲ ತ್ರೈಮಾಸಿಕ ಕಂತಿನ 2.50 ಕೋಟಿ ರೂ. ಷರತ್ತಿಗೊಳಪಟ್ಟು, ಸಾರಿಗೆ ಇಲಾಖೆ ಬಿಡುಗಡೆ ಮಾಡಿದೆ. ಅನುಮೋದಿಸಲ್ಪಡುವ ಕ್ರಿಯಾ ಯೋಜನೆಯಂತೆ ರಾಜ್ಯದಲ್ಲಿ ರಸ್ತೆ ಸುರಕ್ಷತಾ ಕಾರ್ಯಕ್ರಮಗಳನ್ನು ಜಾರಿಗೊಳಿಸಬೇಕು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Implementation of Road Safety Authority
ಆದೇಶ ಪ್ರತಿ

ರಾಜ್ಯದಲ್ಲಿ ರಸ್ತೆ ಅಪಘಾತಗಳನ್ನು ನಿಯಂತ್ರಿಸಿ ಅವಶ್ಯವಿರುವ ರಸ್ತೆ ಸುರಕ್ಷತಾ ಕಾರ್ಯಕ್ರಮಗಳನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲು ವೆಚ್ಚ ಮಾಡಬೇಕಾಗುತ್ತದೆ. ಬಿಡುಗಡೆಯಾದ ಅನುದಾನ ಬಳಸಿರುವುದಕ್ಕೆ ಬಳಕೆ ಪ್ರಮಾಣ ಮತ್ತು ಭೌತಿಕ ಪ್ರಗತಿಯ ವಿವರವನ್ನು ಅನುದಾನದಲ್ಲಿ ಸಲ್ಲಿಸಬೇಕು ಎಂದು ಆದೇಶದಲ್ಲಿದೆ.

Implementation of Road Safety Authority
ಆದೇಶ ಪ್ರತಿ

ಅನುಮೋದಿತ ಕ್ರಿಯಾ ಯೋಜನೆಯನ್ನು ಮಾತ್ರ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸತಕ್ಕದ್ದು, ಕರ್ನಾಟಕ ಪಾರದರ್ಶಕ ಕಾಯ್ದೆ ಮತ್ತು ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಿ ಕಾಮಗಾರಿಗಳನ್ನು ಕೈಗೊಳ್ಳಬೇಕು. ಪ್ರಮಾಣ ಪತ್ರ ಮತ್ತು ಭೌತಿಕ ಪ್ರಗತಿಯ ವಿವರವನ್ನು ಮುಂದಿನ ಅನುದಾನ ಬಿಡುಗಡೆ ಪ್ರಸ್ತಾವನೆಯೊಂದಿಗೆ ಕಡ್ಡಾಯವಾಗಿ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.

ಈ ಕಾಮಗಾರಿಗೆ ಬಿಡುಗಡೆಯಾದ ಅನುದಾನವನ್ನು ಸಕ್ಷಮ ಪ್ರಾಧಿಕಾರದ ಅನುಮೋದನೆಯಿಲ್ಲದೆ ಇತರೆ ಕಾಮಗಾರಿಗಳಿಗೆ ಬಳಸುವಂತಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.